ಮಗುವಿಗೆ ತಾಯಿ ಎದೆ ಹಾಲು ಅಮೃತ ಸಮಾನ: ಆರ್.ಲತಾ

ಚಿಕ್ಕಬಳ್ಳಾಪುರ: ಮಗುವಿನ ಪೋಷಣೆ ಮತ್ತು ಬೆಳವಣಿಗೆಯಲ್ಲಿ ತಾಯಿ ಎದೆಹಾಲಿನ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮಗುವಿಗೆ ತಾಯಿ ಎದೆಹಾಲು ಅಮೃತಕ್ಕೆ ಸಮಾನವಾದದ್ದು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸ್ತನ್ಯಪಾನ ಸಂರಕ್ಷಿಸಿ, ಜವಾಬ್ಧಾರಿಯನ್ನು ಹಂಚಿಕೊಳ್ಳೋಣ’ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಗು ಜನನದ ಅರ್ಧ ಗಂಟೆಯೊಳಗೆ ತಾಯಿ ಎದೆಹಾಲು ಉಣಿಸುವುದನ್ನು ಕಡ್ಡಾಯವಾಗಿ  ಆರಂಭಿಸಬೇಕು. ಆರು ತಿಂಗಳವರೆಗೆ ಮಗುವಿಗೆ ತಾಯಿ ಎದೆಹಾಲನ್ನು ಹೊರತು ಪಡಿಸಿ ಬೇರೆ ಏನನ್ನೂ ಕೊಡಬಾರದು. ಆರು ತಿಂಗಳು ತುಂಬಿದ ನಂತರ ಎದೆಹಾಲಿನ‌ ಜೊತೆಗೆ  ಪೂರಕ ಆಹಾರವನ್ನು ಪ್ರಾರಂಭಿಸಿ ಎರಡು ವರ್ಷದವರೆಗೂ ಎದೆಹಾಲನ್ನು ನೀಡವುದು ಒಳಿತು. ತಾಯಿ ಹಾಲು ಕುಡಿಸುವುದರಿಂದ ಮಗುವಿನ ಮೆದುಳಿನ ಗರಿಷ್ಠ ಉತ್ತೇಜನಕ್ಕೆ ಸಹಕಾರಿಯಾಗಿ ಬುದ್ದಿಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಮಗು ಬೆಳೆದಂತೆ  ರೋಗನಿರೋಧಕ ಶಕ್ತಿಯೂ ಹೆಚ್ಚಾಗಲು ಕಾರಣವಾಗುತ್ತದೆ, ತಾಯಿ ಮತ್ತು ಮಗುವಿನ ನಡುವೆ ಬಾಂಧವ್ಯ ಹೆಚ್ಚುತ್ತದೆ. ಇದರಿಂದ ಮಗುವಿಗೆ ಮಾತ್ರವೇ ಅಲ್ಲದೇ ತಾಯಿಯ ಆರೋಗ್ಯದ ದೃಷ್ಟಿಯಿಂದ ಹಲವು ಪ್ರಯೋಜನಗಳಿವೆ ಎಂಬುದನ್ನು ಅರಿತು  ಎದೆಹಾಲುಣಿಸುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ತಾಯಂದಿರಿಗೆ ಸಲಹೆ ಮಾಡಿದರು. 

ಮಗು ಎದೆಯ ಹಾಲು ಚೀಪುವುದರಿಂದ ಹಾಲಿನ ನಾಳಗಳು ಹಾಲನ್ನು ಹೆಚ್ಚಾಗಿ ಉತ್ಪತ್ತಿಯಾಗಿಸಿ ಎದೆ ಕ್ಯಾನ್ಸರ್ ಬರದಂತೆ ತಡೆಯುತ್ತದೆ ಆದ್ದರಿಂದ ತಾಯಿ ಎದೆಹಾಲನ್ನು ತಪ್ಪದೇ ತಾಯಿಂದಿರು ಕುಡಿಸಬೇಕು.ತಾಯಿ ಎದೆಹಾಲು  ಮಗುವಿಗೆ ಅಮೃತಕ್ಕೆ ಸಮಾನವಾಗಿದ್ದು ಅತ್ಯುತ್ತಮವಾದ ಪೌಷ್ಠಿಕವಾದ ಆಹಾರವಾಗಿದೆ ಹೆರಿಗೆಯ ಬಳಿಕ ಮೊದಲ ಮೂರು ದಿನಗಳ ಕಾಲ ಬರುವ ಗಿಣ್ಣು ಹಾಲಿನಲ್ಲಿ ಹಲವು ರೋಗಗಳನ್ನು ತಡೆಯುವ ಲಸಿಕೆಯ ಗುಣವಿರುತ್ತದೆ. ಹೀಗಾಗಿ, ಮೌಢ್ಯಕ್ಕೆ ಶರಣಾಗುವ ಬದಲು ಹೆರಿಗೆಯಾದ ಕೆಲವೇ ನಿಮಿಷಗಳಲ್ಲಿ ಶಿಶುವಿಗೆ ತಾಯಿ ಹಾಲುಣಿಸುವುದನ್ನು ರೂಢಿಸಿಕೊಳ್ಳಬೇಕು.ಮಕ್ಕಳ ಬೆಳವಣಿಗೆಗೆ ಹಾಲುಣಿಸುವುದು ದೇವರು ಕೊಟ್ಟ ವರವಾಗಿದೆ  ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ ಅವರು ಮಾತನಾಡಿ, ಮಗು ಜನಿಸಿದ ನಂತರದ ಆರು ತಿಂಗಳವರೆಗೆ ಯಾವುದೇ ರೀತಿಯ ಆಹಾರವನ್ನು ಹೆಚ್ಚುವರಿಯಾಗಿ ಮಗುವಿಗೆ ನೀಡಬಾರದು. ಇದರಿಂದ ಮಗುವಿನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿರುತ್ತದೆ. ಇದರ ಬದಲು, ಆರು ತಿಂಗಳವರೆಗೆ ತಾಯಿ ಹಾಲನ್ನೇ ಪ್ರಮುಖ ಆಹಾರವಾಗಿ ನೀಡುವುದು ಒಳ್ಳೆಯದು ಎಂದು  ಸಲಹೆ ನೀಡಿದರು.

ಮಗುವಿಗೆ ಎದೆ ಹಾಲನ್ನು ನೀಡಿದರೆ ತನ್ನ ಸೌಂದರ್ಯ ಹಾಳಾಗುತ್ತದೆ ಎಂಬ ತಪ್ಪುಕಲ್ಪನೆಯಿಂದ ಕೆಲವು ತಾಯಂದಿರು ಮಗುವಿಗೆ ಎದೆ ಹಾಲನ್ನು ಕೊಡಲು ಹಿಂಜರಿಕೆ ಮಾಡುತ್ತಿದ್ದರು. ಆದರೆ, ಇದು ತಪ್ಪು ಕಲ್ಪನೆ. ತಾಯಿಯು ಮಗುವಿಗೆ ಎದೆಹಾಲನ್ನು ನೀಡುವುದರಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿ, ಭೌತಿಕ ಬೆಳವಣಿಗೆಗೆ ಸಹಕಾರಿ ಆಗಲಿದೆ. ಸ್ಪರ್ಶ ಸುಖ ಅನುಭವಿಸುವ ತಾಯಿ-ಮಗುವಿನ ಬಾಂಧವ್ಯ ಇನ್ನಷ್ಟು ವೃದ್ಧಿಯಾಗಲಿದೆ ಎಂದರು.

ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ರುದ್ರಮೂರ್ತಿರವರು ಮಾತನಾಡಿ, ಶಿಶು ಜನಿಸಿದ ಆರು ತಿಂಗಳವರೆಗೆ ದೇಹ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಿರುತ್ತದೆ. ಅದರಲ್ಲೂ ಹಾಲುಣಿಸುವ ತಾಯಿ ತನ್ನ ವೈಯಕ್ತಿಕ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕಾಗುತ್ತದೆ. ಜೊತೆಗೆ, ಆರು ತಿಂಗಳೊಳಗೆ ತಾಯಿಯ ಹಾಲಿನ ಬದಲು ಹೆಚ್ಚುವರಿಯಾಗಿ ಆಹಾರ ನೀಡುವುದರಿಂದಲೂ ಮಗುವಿಗೆ ಸೋಂಕು ತಗಲುವ ಸಂಭವನೀಯತೆ ಹೆಚ್ಚಿರುತ್ತದೆ ಎಂದು ಅವರು ನುಡಿದರು.

ಮಕ್ಕಳ ತಜ್ಞರಾದ ಡಾ.ಪ್ರಕಾಶ್ ಮಾತನಾಡಿ, ತಾಯಿಯ ಎದೆ ಹಾಲಿನಲ್ಲಿ ಶಿಶುವಿನ ಸದೃಢ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳು, ವಿಟಮಿನ್, ಖನಿಜಾಂಶಗಳು ಸಮೃದ್ಧವಾಗಿರುತ್ತವೆ. ಒಂದು ವೇಳೆ, ಮಗುವಿಗೆ ತಾಯಿಯ ಹಾಲಿನ ಬದಲು ಪೂರಕ ಆಹಾರವನ್ನು ನೀಡುವ ಪರಿಪಾಠ ರೂಢಿಸಿಕೊಂಡರೆ, ಮಗುವಿನ ಬದುಕುವ ಹಕ್ಕನ್ನು ಕಿತ್ತುಕೊಂಡಂತಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಗರ್ಭಿಣಿ, ಬಾಣಂತಿಯರು ಹಾಗೂ ತಾಯಂದಿಯರಿಗೆ ಪೌಷ್ಠಿಕಾಂಶವುಳ್ಳ ಔಷಧಿ ಹಾಗೂ ಆಹಾರ ಕಿಟ್ ವಿತರಿಸಲಾಯಿತು. 

ಎನ್ಆರ್ ಸಿ ಕೇಂದ್ರಕ್ಕೆ ಡಿಸಿ ಭೇಟಿ: ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದ ಬಳಿಕ ಜಿಲ್ಲಾಧಿಕಾರಿ ಆರ್.ಲತಾ ಅವರು, ಜಿಲ್ಲಾ ಆಸ್ಪತ್ರೆಯಲ್ಲಿರುವ ಎಲ್ಲಾ ವಾರ್ಡುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಅಪೌಷ್ಠಿಕ ಮಕ್ಕಳ ಪುನಶ್ಚೇತನ ಹಾಗೂ ತಾಯಂದಿರ ಕುಶಲ ಮತ್ತು ಕೌಶಲ್ಯ ಕೇಂದ್ರ(ಎನ್ಆರ್ ಸಿ)ಕ್ಕೆ ಭೇಟಿ ನೀಡಿ ಅಲ್ಲಿ ದಾಖಲಾಗಿರುವ ಅಪೌಷ್ಠಿಕ ಮಕ್ಕಳು ಮತ್ತು ತಾಯಂದಿರ ಆರೋಗ್ಯ ವಿಚಾರಿಸಿದರು. ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ವೈದ್ಯರು ನೀಡುವ ಚಿಕಿತ್ಸೆಯ ಜೊತೆಗೆ ಸಲಹೆ ಸೂಚನೆಗಳನ್ನು ತಾಯಂದಿರು ಪಾಲಿಸುವ ಮೂಲಕ ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಆರ್.ಸಿ.ಎಚ್. ಅಧಿಕಾರಿ ಡಾ.ಚನ್ನಕೇಶವರೆಡ್ಡಿ, ತಾಲೂಕು ವೈದ್ಯಾಧಿಕಾರಿ ಡಾ.ಮಂಜುಳಾ, ಸಿಡಿಪಿಒ ಗಂಗಾಧರಯ್ಯ, ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಮೂರ್ಛೆ ರೋಗ ಕುರಿತ ಜಾಗೃತಿ ಜಾಥಾ

ದೊಡ್ಡಬಳ್ಳಾಪುರದಲ್ಲಿ ಮೂರ್ಛೆ ರೋಗ ಕುರಿತ ಜಾಗೃತಿ ಜಾಥಾ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ (ಕಭಿ) ಸಾರ್ವಜನಿಕ ಆಸ್ಪತ್ರೆ, ಫೈತ್ ನರ್ಸಿಂಗ್ ಇನ್ಸ್ಟಿಟ್ಯೂಷನ್ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮೂರ್ಛೆ ರೋಗ ದಿನಾಚರಣೆ ಅಂಗವಾಗಿ

[ccc_my_favorite_select_button post_id="119322"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!