ಎಸ್.ಎಸ್.ಎಲ್.ಸಿ ಫಲಿತಾಂಶದ ದಿಕ್ಕು ಬದಲಿಸುತ್ತಿರುವ ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ಜಿಲ್ಲಾಪಂಚಾಯಿತಿ ಸಿಇಒ ಹುದ್ದೆ ಕಾರ್ಯ ನಿರ್ವಹಿಸುವಾಗಿನಿಂದ, ಜಿಲ್ಲಾಧಿಕಾರಿಯಾಗಿ ಒತ್ತಡದ ಕಾರ್ಯ ನಿರ್ವಹಿಸುತ್ತಿದ್ದರು, ವಿದ್ಯಾರ್ಥಿಗಳ ಜೀವನದ ಮೊದಲ ಮೈಲಿಗಲ್ಲಾದ ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳಕ್ಕೆ ಆರ್.ಲತಾ ಅವರು ಕೈಗೊಂಡ ಕ್ರಮಗಳಿಗೆ ಉತ್ತಮ ಫಲಿತಾಂಶ ದೊರಕುತ್ತಿದೆ‌.

ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಪಂ ಸಿಇಒ ಆಗಿದ್ದ ವೇಳೆ ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳಕ್ಕೆ ಹಲವು ಕ್ರಮಗಳನ್ನು ಕೈಗೊಂಡು ಹೆಚ್ಚಿನ ಫಲಿತಾಂಶ ದೊರಕಿಸುವಲ್ಲಿ ಯಶಸ್ವಿಯಾಗಿದ್ದರು ಆರ್.ಲತಾ.

ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅವರು, ಕಳೆದ ಎರಡು ವರ್ಷಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆ  ಹೊಸ ದಾಖಲೆಯನ್ನು ಬರೆಯುವ ಮೂಲಕ ಜಿಲ್ಲೆಯ ಶೈಕ್ಷಣಿಕ ಪ್ರಗತಿ, ಮುನ್ನೋಟಕ್ಕೆ ದಿಕ್ಸೂಚಿಯಾಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಜಿಲ್ಲೆಯ ಎಸ್.ಎಸ್.ಎಲ್.ಸಿ ಉತ್ತಮ ಫಲಿತಾಂಶದ ಸಾಧನೆ  ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಜಿಲ್ಲಾಧಿಕಾರಿ ಆರ್.ಲತಾ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  625 ಅಂಕಗಳಿಗೆ 625 ಅಂಕಗಳನ್ನೂ ಪಡೆದ 157 ವಿದ್ಯಾರ್ಥಿಗಳ ರಾಜ್ಯ ಪಟ್ಟಿಯಲ್ಲಿ  ಚಿಕ್ಕಬಳ್ಳಾಪುರ ಜಿಲ್ಲೆಯ30 ವಿದ್ಯಾರ್ಥಿಗಳು ಸ್ಥಾನ ಕಾಯ್ದುಕೊಂಡಿರುವುದಲ್ಲದೇ ಇಡೀ ರಾಜ್ಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಜಿಲ್ಲೆಯಾಗಿ ಹೊರಹೊಮ್ಮಿದೆ.  ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಕಳೆದ ಬಾರಿಯ ಪರೀಕ್ಷೆಯಲ್ಲೂ ಪಡೆದುಕೊಂಡಿದ್ದ ಜಿಲ್ಲೆ ಈ ಬಾರಿಯ ಪರೀಕ್ಷೆಯಲ್ಲೂ ಮತ್ತೊಂದು ಪ್ರಥಮಕ್ಕೆ ಭಾಜನವಾಗಿದೆ.

ರಾಜ್ಯಮಟ್ಟದಲ್ಲಿ ಅತ್ಯುನ್ನತ ಶ್ರೇಯಾಂಕ ಗಳಿಸಿದ ಜಿಲ್ಲೆಯ 30 ವಿದ್ಯಾರ್ಥಿಗಳಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಗ್ರಾಮೀಣ ಭಾಗದವರಾಗಿರುವುದು ವಿಶೇಷ. ಇವರ ಅತ್ಯುತ್ತಮ ಸಾಧನೆ ನಿಜಕ್ಕೂ ಇತರೆ ವಿದ್ಯಾರ್ಥಿಗಳಿಗೆ  ಮಾದರಿ ಮತ್ತು  ಪ್ರೇರಣಾದಾಯಕವಾಗಿ  ನಂತರ ಬರುವ ಕಿರಿಯ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧಕರಾಗಲು ಸಹಕಾರಿಯಾಗಲಿದೆ. ಈ ಬಾರಿಯ ಫಲಿತಾಂಶದಲ್ಲಿ ಶೇ.100 ರಷ್ಟು ಅಂಕಗಳನ್ನು ಪಡೆದವರ ಪೈಕಿ ಜಿಲ್ಲೆಯ 30 ವಿದ್ಯಾರ್ಥಿಗಳಿದ್ದು,ಶೇ.19.10 ರಷ್ಟು ವಿದ್ಯಾರ್ಥಿಗಳಿರುವುದು ಹೆಗ್ಗಳಿಕೆಗೆ ಕಾರಣವಾಗಿದೆ. 

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜಾರಿಗೆ ಬಂದ ಹೊಸ ಪರೀಕ್ಷಾ ಪದ್ದತಿಯಿಂದ ವಿದ್ಯಾರ್ಥಿಗಳು ಧೃತಿಗೆಡದ ಹಾಗೆ ಹಲವು ರಚನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಕಾಲ ಕಾಲಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಸೂಚನೆಗಳನ್ನು ನೀಡಿತ್ತು. ಅಲ್ಲದೇ ಜಿಲ್ಲೆಯ ಎಲ್ಲಾ ಶಿಕ್ಷಕರಿಗೂ ವಿಶೇಷ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯವನ್ನೂ ತುಂಬುವ ಕೆಲಸವನ್ನು ಆಗಾಗ್ಗೆ ಶಿಕ್ಷಕರು ಮತ್ತು ಅಧಿಕಾರಿಗಳ ಮುಖಾಂತರ ಮಾಡಲಾಗಿತ್ತು.

ಮಕ್ಕಳ ಜೊತೆಗೆ ನಿರಂತರ ಸಂಪರ್ಕವನ್ನು ಇಟ್ಟುಕೊಂಡು ಎಲ್ಲಿಯೂ ಕಲಿಕಾ ಪ್ರಕ್ರಿಯೆ ಮತ್ತು ಪರೀಕ್ಷಾ ಸಿದ್ದತೆಗಳು ಕಡಿತಗೊಳ್ಳದಂತೆ ನಿಗಾ ವಹಿಸಲಾಗಿತ್ತು. ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ, ಆನ್‌ಲೈನ್ ಸಂವಾದ, ಗುಣಾತ್ಮಕ ಬೋಧನೆ, ವಾರದ  ಮತ್ತು  ಮಾಸಿಕ ಪರೀಕ್ಷೆ, ಬಹು ಆಯ್ಕೆ ಪ್ರಶ್ನೆಗಳುಳ್ಳ ಮಾದರಿ ಪರೀಕ್ಷೆ ಆಯೋಜನೆ, ಪಠ್ಯಾಧಾರಿತ ರಸಪ್ರಶ್ನೆ ಸ್ಪರ್ಧೆಗಳು ಮತ್ತು ಪೂರ್ವ ಸಿದ್ದತಾ ಪರೀಕ್ಷೆಗಳು ಹಾಗೂ  ವಿಶೇಷ ಆಸಕ್ತಿವಹಿಸಿ ಜಿಲ್ಲಾಡಳಿತವೇ ಸರಳೀಕರಿಸಿ ಸಿದ್ಧಪಡಿಸಿದ ಪ್ರಶ್ನೋತ್ತರ ಸಾಮಗ್ರಿ (ಸ್ಟಡಿ ಮೆಟೇರಿಯಲ್) ವಿತರಣೆ ಸೇರಿದಂತೆ ಈ ಎಲ್ಲಾ ಪೂರ್ವ ಸಿದ್ಧತಾ ಕ್ರಮಗಳು ಹಾಗೂ ವಿದ್ಯಾರ್ಥಿಗಳಿಗೆ ನೀಡಿದ ಪ್ರೋತ್ಸಾಹದ ಫಲವಾಗಿ ರಾಜ್ಯಮಟ್ಟದಲ್ಲಿ ಗಮನಸೆಳೆಯುವಂತ ಫಲಿತಾಂಶ ಜಿಲ್ಲೆಗೆ ಬಂದಿದ್ದು ಕಳೆದೆರಡು ದಶಕಗಳಲ್ಲಿ ಈ ಮಟ್ಟದ ದಾಖಲೆಯ ಫಲಿತಾಂಶ ಬಂದಿರುವುದಿಲ್ಲ.

ಇದೇ ಪ್ರಪ್ರಥಮ ಬಾರಿಗೆ ಜಿಲ್ಲೆಯ ಶೈಕ್ಷಣಿಕ ಇತಿಹಾಸದಲ್ಲಿ ಮೈಲಿಗಲ್ಲಾಗಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಫಲಿತಾಂಶ ಜಿಲ್ಲೆಯ ಪಾಲಿಗೆ ದೊರೆತಿದೆ ಎಂದರು.

ಪರೀಕ್ಷೆ ಬರೆದ ಜಿಲ್ಲೆಯ  ವಿದ್ಯಾರ್ಥಿಗಳ ಪೈಕಿ ಶೇ.30.30 ರಷ್ಟು ವಿದ್ಯಾರ್ಥಿಗಳು ಎ.ಪ್ಲಸ್ ಗ್ರೇಡ್, ಶೇ.40.57 ರಷ್ಟು ವಿದ್ಯಾರ್ಥಿಗಳು ‘ಎ’ಗ್ರೇಡ್ ಮತ್ತು   ಶೇ.27.39 ರಷ್ಟು ವಿದ್ಯಾರ್ಥಿಗಳು ‘ಬಿ’ ಗ್ರೇಡ್ ಹಾಗೂ ಶೇ.1.74 ರಷ್ಟು ವಿದ್ಯಾರ್ಥಿಗಳು (275 ವಿದ್ಯಾರ್ಥಿಗಳು ಮಾತ್ರ) ‘ಸಿ’ ಗ್ರೇಡ್ ಪಡೆದಿರುತ್ತಾರೆ. ಒಟ್ಟಾರೆಯಾಗಿ ಜಿಲ್ಲೆಗೆ ಶೇ.100 ರಷ್ಟು ಫಲಿತಾಂಶ ಬಂದಿರುತ್ತದೆ. 

ಜಿಲ್ಲಾಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಅಗಲಗುರ್ಕಿಯ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಸಾಧಕ ವಿದ್ಯಾರ್ಥಿಗಳ ಸಂವಾದದಲ್ಲಿ ವಿದ್ಯಾರ್ಥಿಗಳು ಜಿಲ್ಲಾಡಳಿತ ತೆಗೆದುಕೊಂಡಿದ್ದ ಸಕಾರಾತ್ಮಕ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]