
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ನಾಗರಪಂಚಮಿ ಹಿನ್ನೆಲೆಯಲ್ಲಿ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಭೇಟಿ ನೀಡಿ ಪೂಜೆ ಸಲ್ಲಿಸಿದರು.
ಬಿ.ಎಸ್. ಯಡಿಯೂರಪ್ಪ ಅವರಿಗೆ ಪುತ್ರ ವಿಜಯೇಂದ್ರ ಹಾಗೂ ಶಾಸಕ ಎಸ್.ಆರ್ ವಿಶ್ವನಾಥ್ ಸಾಥ್ ನೀಡಿದ್ದಾರೆ.
ನಾಗರಪಂಚಮಿ ಹಿನ್ನೆಲೆ ದೇವಸ್ಥಾನಕ್ಕೆ ಹೆಚ್ಚಿನ ಭಕ್ತರ ಬರುವ ಸಾಧ್ಯತೆ ಇದ್ದು ಜಿಲ್ಲಾಡಳಿತ ಇಂದು ದೇವಾಲಯ ಬಂದ್ ಮಾಡಿ ಆದೇಶ ಹೊರಡಿಸಿತ್ತು. ಆದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಯಿಂದಾಗಿ ಆಡಳಿತ ಮಂಡಳಿ ದೇವಸ್ಥಾನ ತೆರೆದಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..