ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್‍ಡಿಪಿಐ ಕಾರ್ಯಕರ್ತರಿಂದ ತಡೆ: ಪ್ರಕರಣ ದಾಖಲು

ಮಂಗಳೂರು: ದೇಶದೆಲ್ಲೆಡೆ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ನಲ್ಲಿಯೂ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುತಿತ್ತು. ಆದರೆ ಈ ಸಂದರ್ಭ ಎಸ್‍ಡಿಪಿಐ ಕಾರ್ಯಕರ್ತರು ಸ್ವಾತಂತ್ರ್ಯ ರಥಕ್ಕೆ ತಡೆಯೊಡ್ಡಿ ಕಿರಿಕ್ ಮಾಡಿದ್ದಾರೆ.

ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಲು ರೆಡಿಯಾಗಿದ್ದ ಸ್ವಾತಂತ್ರ್ಯ ರಥದಲ್ಲಿ ವೀರ ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ತಡೆಯೊಡ್ಡಿದ್ದಾರೆ. ಸಾವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಹಾಕುವಂತೆ ಒತ್ತಡ ಹಾಕಿ ಪಂಚಾಯತ್ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಪರಸ್ಪರ ಕೈ, ಕೈ ಮಿಲಾಯಿಸುವ ಹಂತಕ್ಕೆ ತಲುಪಿದಾಗ ಪುತ್ತೂರು ಪೊಲೀಸರು ಬಂದು ಎಸ್‍ಡಿಪಿಐ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಪ್ರಾರಂಭದಲ್ಲಿ ಪ್ರತಿಭಟನಕಾರರಿಗೆ ಪಂಚಾಯಿತಿ ಅಧ್ಯಕ್ಷರು, ಪಿಡಿಓ ತಿಳಿ ಹೇಳುವ ಪ್ರಯತ್ನ ನಡೆಸಿದ್ದಾರೆ. ಆದರೆ ಇವರ ಮಾತನ್ನು ಕೇಳದೆ ಎಸ್‍ಡಿಪಿಐ ಕಾರ್ಯಕರ್ತರು ವಾಗ್ವಾದ ಮುಂದುವರಿಸಿದ್ದಾರೆ.

ಘಟನಾ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಘಟನೆಯ ಬಗ್ಗೆ ತಿಳಿದುಕೊಂಡಿದ್ದಾರೆ. ತಕ್ಷಣ ಕೇಸು ದಾಖಲಿಸಿ ಆರೋಪಿಗಳ ಬಂಧಿಸುವಂತೆ ಪೋಲೀಸರಲ್ಲಿ ಆಗ್ರಹಿಸಿದ್ದಾರೆ. 

ಈ ಮತೀಯವಾದಿ ದೇಶದ್ರೋಹಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಈ ಮತೀಯವಾದಿಗಳ ಹಿಂದೆ ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದೆ. ಕಬಕ ಕಾಶ್ಮೀರ ಆಗೋದನ್ನು ಸಹಿಸಲ್ಲ, ಮಟ್ಟ ಹಾಕುವ ಕೆಲಸ ಆಗಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆ ನಿಷೇಧಿಸಬೇಕೆಂದು ಸಂಜೀವ ಮಠಂದೂರು ಒತ್ತಾಯಿಸಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯಿತಿ ಅಳವಡಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ದುರಂತದಲ್ಲಿ ಅಂತ್ಯಗೊಂಡ ಹಲವು ಘಟನೆಗಳು ಬೆಂಗಳೂರಿನಲ್ಲಿ ನಡೆದಿವೆ. ಅದಕ್ಕೆ ಸೇರ್ಪಡೆಯಾಗಿ ಮೂರು ದಿನದ ತಂಗಳು ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ, ಪತ್ನಿ ನಡುವೆ ತೆಗೆದಿದ್ದರಿಂದ ಮನನೊಂದ ಪತ್ನಿ ಕಳೆನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.

[ccc_my_favorite_select_button post_id="120034"]
ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ರಾಹುಕಾಲ: 07:30AM ರಿಂದ 09:00AM ಗುಳಿಕಕಾಲ: 01:30PM ರಿಂದ 03:00PM ಯಮಗಂಡಕಾಲ: 10:30AM ರಿಂದ 12:00PM Astrology

[ccc_my_favorite_select_button post_id="120054"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!