ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಅಧಿಸೂಚನೆ ಪ್ರಕಟ / ನಗರಸಭೆಗೆ ಕೂಡಿಬಂದ ಚುನಾವಣೆ ಭಾಗ್ಯ / ರಾಜಕೀಯ ಚಟುವಟಿಕೆಗಳು ತೀವ್ರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸೆಪ್ಟಂಬರ್ 3ರಂದು ದಿನಾಂಕ ನಿಗದಿ ಪಡಿಸಿದ್ದು, ಚುನಾವಣೆ ಅಧಿಕಾರಿಗಳು ಇಂದು ಅಧಿಸೂಚನೆ‌ ಪ್ರಕಟಿಸುವ ಮೂಲಕ ಚುನಾವಣೆ ನಡೆಸಲು ಇದ್ದ ಆತಂಕಗಳು, ಅನುಮಾನಗಳು ನಿವಾರಣೆಯಾದಂತಾಗಿವೆ.

ಚುನಾವಣೆಗಿದ್ದ ಅಡೆತಡೆಗಳ ನಿವಾರಣೆ: ನಗರಸಭೆಯ ಸದಸ್ಯರ ಅಧಿಕಾರಾವಧಿ 2019ರ ಮಾ.12ರ ಸಂಜೆ ಮುಕ್ತಾಯವಾಗಿ, ನಗರಸಭೆ ಈಗ ಆಡಳಿತಾಧಿಕಾರಿಗಳ ಸುಪರ್ದಿನಲ್ಲಿದೆ. 2 ವರ್ಷ 5ತಿಂಗಳಾಗಿದ್ದರೂ ಚುನಾವಣೆಗೆ ಕಾಲ ಕೂಡಿ ಬಂದಿರಲಿಲ್ಲ. ವಾರ್ಡ್ ಗಳ ಗಡಿ ನಿಗದಿ, ವಾರ್ಡ್ ಗಳ ಮೀಸಲಾತಿ ಅಂತಿಮಗೊಳಿಸಿದ್ದರೂ ಸಹ ಇದು ಸರಿ ಇಲ್ಲ ಎನ್ನುವುದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆಹೋದ ಕಾರಣದಿಂದಾಗಿ ನಗರಸಭಾ ಚುನಾವಣೆ ವಿಳಂಬವಾಗುತ್ತಲೇ ಬರುತ್ತಿತ್ತು.

ಈ ಹಿಂದೆ ನಗರಸಭೆಗೆ ಚುನಾವಣಾ ಆಯೋಗದಿಂದ ಏ.27 ರಂದು ಚುನಾವಣೆ ನಡೆಸಲು, ಮಾರ್ಚ್ 29ರಂದು ವೇಳಾಪಟ್ಟಿಯ ಪ್ರಕಟಣೆ ಹೊರಡಿಸಲಾಗಿತ್ತು. ನಂತರ ಸಂಜೆ ವೇಳೆಗೆ ತಾಂತ್ರಿಕ ಕಾರಣ ನೀಡಿ ಚುನಾವಣೆ ವೇಳಾಪಟ್ಟಿಯನ್ನು ಹಿಂದಕ್ಕೆ ಪಡೆದು ಆದೇಶ ಹೊರಡಿಸಿತ್ತು.

ವಾರ್ಡ್ ಗಳ ಮೀಸಲಾತಿ ನಿಗದಿಯನ್ನು ಪ್ರಶ್ನಿಸಿ ಜಿ.ಎಸ್.ಸೋಮರುದ್ರಶರ್ಮ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೆಲ್ಲವು ಇತ್ಯರ್ಥವಾಗಿ ಚುನಾವಣಾ ದಿನಾಂಕ ಪ್ರಕಟವಾಗುತ್ತದೆ ಎನ್ನುವಷ್ಟರಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಜಾರಿಗೆ ಬಂತು. ಈಗ ವಾರ್ಡ್ ತಕರಾರು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಕರೇನಹಳ್ಳಿ ಗಡಿಗೆ ಸಂಬಂದಿಸಿದಂತೆ ಈ ಹಿಂದಿನ ಮತದಾರರ ಪಟ್ಟಿಯನ್ನು ಪುರಸ್ಕರಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಚುನಾವಣೆಗೆ ಇದ್ದ ಆತಂಕಗಳು ನಿವಾರಣೆಯಾದಂತಾಗಿದೆ.

ತೀವ್ರವಾದ ರಾಜಕೀಯ ಚಟುವಟಿಕೆಗಳು: ಡಿಸೆಂಬರ್‌ವರೆಗೂ ಯಾವುದೇ ಚುನಾವಣೆ ನಡೆಯುವುದಿಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ರಾಜ್ಯದಲ್ಲಿ ಶಾಲಾ ಕಾಲೇಜು, ವಾಣಿಜ್ಯ ವ್ಯವಹಾರಗಳಿಗೆ ಕರೊನಾ ಅನ್‌ಲಾಕ್ ಮಾಡಿರುವ ರಾಜ್ಯ ಸರ್ಕಾರಕ್ಕೆ ಚುನಾವಣೆ ನಡೆಸಲು ಏನು ಅಡ್ಡಿ ಎಂದು  ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಈ  ಹಿನ್ನಲೆಯಲ್ಲಿ ಜರೂರಾಗಿ ಚುನಾವಣೆ ದಿನಾಂಕ ಪ್ರಕಟವಾಗಿದೆ.

ಯಾವ ಸಮಯದಲ್ಲದಾರೂ ಚುನಾವಣೆ ನಡೆಯಬಹುದೆಂಬ ನಿರೀಕ್ಷೆಯಿಂದ ವಿವಿಧ ರಾಜಕೀಯ ಪಕ್ಷಗಳಲ್ಲಿ ಆಕಾಂಕ್ಷಿಗಳ ಸಭೆಗಳನ್ನು ನಡೆಸಲಾಗುತ್ತಿತ್ತು. ವಿವಿಧ ರಾಜಕೀಯ ಮುಖಂಡರು ತಮ್ಮ ಪಕ್ಷಗಳನ್ನು ಬದಲಾಯಿಸಿ ಇತರೆ ಪಕ್ಷಗಳಿಗೆ ಸೇರ್ಪಡೆಗೊಳ್ಳುತ್ತಿರುವುದು ಸಾಮಾನ್ಯವಾಗಿದೆ. ವಾರ್ಡ್ಗಳ ಮೀಸಲಾತಿಯನ್ವಯ ತಾವು ಸ್ಪರ್ಧಿಸುವ ವಾರ್ಡ್ ಗಳಿಗೆ ಭೇಟಿ ನೀಡಿ ಮತದಾರರನ್ನು ಓಲೈಸುವುದು, ವಾರ್ಡ್ ಗಳು ತಮಗೊಪ್ಪದಿದ್ದರೆ ನಿರಾಶರಾಗುತ್ತಿರುವುದು ನಡೆಯುತ್ತಿದೆ.ಈಗ ನಗರಸಭೆ ಚುನಾವಣೆ ಘೋಷಣೆಯು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…… 

ರಾಜಕೀಯ

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಇನ್ನು ಮುಂದೆ ರಾಜಕೀಯ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="121399"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]