ಸತ್ಯಸಾಯಿ ಗ್ರಾಮದಲ್ಲಿ ಅಂತರಾಷ್ಟ್ರೀಯ ಮಟ್ಟದ ವೈದ್ಯಕೀಯ ವಿದ್ಯಾಲಯ ಸ್ಥಾಪನೆಗೆ ಸಂಪೂರ್ಣ ಸಹಕಾರವಿದೆ: ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅಭಿಮತ

ಚಿಕ್ಕಬಳ್ಳಾಪುರ: ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಅಂತರಾಷ್ಟ್ರೀಯ ಗುಣ ಮಟ್ಟದ ವೈದ್ಯಕೀಯ ವಿದ್ಯಾಲಯ ಸ್ಥಾಪನೆಗೆ ಸರ್ಕಾರದ ಸಂಪೂರ್ಣ ಸಹಕಾರ ಇರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಅವರು ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಸ್ಥಾಪನೆಯಾದ ಶ್ರೀ ಸತ್ಯಸಾಯಿ ಸರಳ ಸ್ಮಾರಕ ಆಸ್ಪತ್ರೆಯನ್ನು ಹಾಗೂ ಮಕ್ಕಳ ತೀವ್ರ ನಿಗಾ ಘಟಕವನ್ನು  ಉದ್ಘಾಟಿಸಿ ಮಾತನಾಡುತ್ತಾ, ಈ ಭಾಗದಲ್ಲಿ ಅಂತರಾಷ್ಟ್ರೀಯ ಗುಣ ಮಟ್ಟದ ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಬಡವರಿಗೆ,ಕಷ್ಟದಲ್ಲಿರುವರಿಗೆ ಹಾಗೂ ಅಶಕ್ತರಿಗೆ ಸಹಾಯ ಆಗಲಿದೆ. ಬಡವರಿಗೆ ಉಚಿತವಾಗಿ ವೈದ್ಯಕೀಯ ಸೇವೆಯನ್ನು ನೀಡುತ್ತಿರುವ ಈ ಸೇವಾ ಸಂಸ್ಥೆಯ ಕಾರ್ಯ ಅಮೋಘವಾದದ್ದು, ಈ ಕಾರ್ಯಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ನೆರವಾಗಿದ್ದಾರೆ ಎಂದರು.

ನೋವನ್ನು ತಡೆಯುವ ಮತ್ತು ನಿವಾರಿಸುವ ಶಕ್ತಿ ವೈದ್ಯರಿಗೆ ಮಾತ್ರ ಇರುತ್ತದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ ಸತ್ಯಸಾಯಿ ಗ್ರಾಮಕ್ಕೆ ಅನೇಕ ವೈದ್ಯರು, ತಜ್ಞರು, ರೋಗಿಗಳ ಆರೋಗ್ಯ ಸೇವೆ ಮಾಡಲು ಮುಂದೆ ಬಂದಿದ್ದಾರೆ. ಇದಕ್ಕೆ ಸೇವಾ ಮನೋಭಾವ ಬಹಳ ಮುಖ್ಯ ಅಂತಹ ಸೇವಾ ಮನೋಭಾವ ಹುಟ್ಟಿಸಬೇಕಾದರೆ ಆಧ್ಯಾತ್ಮಿಕ ಶಕ್ತಿಯಿಂದ ಮಾತ್ರ  ಸಾಧ್ಯ. ಈ ಶಕ್ತಿ ಎಲ್ಲಾ ಕಡೆ ಇರಬೇಕು. ಆಗ ಮಾತ್ರ ಕಲಿಯುಗ ಸುವ್ಯವಸ್ಥೆಯತ್ತ ಸಾಗುತ್ತದೆ. ನಮ್ಮ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. 4000 ವೈದ್ಯರ ನೇಮಕಾತಿಗೆ ಕ್ರಮವಹಿಸಿತ್ತು. ಇದರಲ್ಲಿ 2500 ವೈದ್ಯರು ಮಾತ್ರ ಕರ್ತವ್ಯಕ್ಕೆ ವರದಿ ಮಾಡಿಕೊಂಡರು ಎಂದರು.

ಕಲಿಯುಗದಲ್ಲಿ ಭಗವಂತ ಗುರುವಿನ ರೂಪದಲ್ಲಿ ಕಾಣಿಸಿಕೊಂಡಿದ್ದಾನೆ. ಆದ್ದರಿಂದ ನಾವೆಲ್ಲರೂ ಗುರುವಿನಲ್ಲಿ ಕರಗಿ ಲೀನವಾಗಬೇಕು. ಆಗಲೇ ಗುರುವಿನ ಸಂಪೂರ್ಣ ಆಶಿರ್ವಾದ ಸಿಗುತ್ತದೆ. ಗುರುವಿನ ಮೂಲಕ ದೈವತ್ವದ ದರ್ಶನವಾಗುತ್ತದೆ ಎಂದರು.

ಶ್ರೀ ಸತ್ಯಸಾಯಿ ಸರಳ ಸ್ಮಾರಕ ಆಸ್ಪತ್ರೆಯಲ್ಲಿ 300 ಹಾಸಿಗೆಗಳ ಅತ್ಯಾಧುನಿಕ ಸುಸಜ್ಜಿತ ವ್ಯವಸ್ಥೆ ಇದ್ದು,ಪ್ರಸ್ತುತ 150 ಆಮ್ಲಜನಕ ಯುಕ್ತ ಹಾಸಿಗೆಗಳು ಮತ್ತು ಮಕ್ಕಳ ತೀವ್ರ ನಿಗಾ ಘಟಕವು ಮಕ್ಕಳು ಮತ್ತು ನವಜಾತ ಶಿಶುಗಳ ಆರೋಗ್ಯ ಸಂರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸಿದ್ದವಾಗಿದೆ ಹಾಗೂ ಕೋವಿಡ್-19ರ ಸಂಭಾವ್ಯ ಮೂರನೇ ಅಲೆಯ ಹೊಡೆತವನ್ನು ಎದುರಿಸಲು ಸಶಕ್ತವಾಗಿದೆ ಎಂದು ತಿಳಿಸಿದರು. ವೇದಿಕೆ ಕಾರ್ಯಕ್ರಮದಲ್ಲಿ ಇತ್ತೀಚಿಗೆ ಸಂಸ್ಥೆಯ ಆಸ್ಪತ್ರೆಯಲ್ಲಿ ಬಾಲ ಹೃದಯ ಯಶಸ್ವಿ ಶಸ್ತ್ರಚಿಕಿತ್ಸೆ ಪಡೆದ ಪುಟಾಣಿಗಳಿಗೆ ರಾಜ್ಯದ ಮುಖ್ಯ ಮಂತ್ರಿಗಳು  ಸದ್ಗರು ಶ್ರೀ ಮಧುಸೂದನ ಸಾಯಿ ರವರ ಸನ್ನಿಧಿಯಲ್ಲಿ ಬದುಕಿನ ಉಡುಗೊರೆ ನೀಡಿದರು. 

ಸಭಾ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆಯ ವಿಸ್ತೃತ ವಿಭಾಗದ ಶ್ರೀ ಸತ್ಯಸಾಯಿ ರಾಜೇಶ್ವರಿ ಬ್ಲಾಕ್ ಗೆ ಭೂಮಿ ಪೂಜೆಯನ್ನು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಮುಖ್ಯ ಮಂತ್ರಿಗಳೊಂದಿಗೆ ನೆರವೇರಿಸಿದರು. 

ಸದ್ಗರು ಶ್ರೀ ಮಧುಸೂದನ ಸಾಯಿ ರವರ ಸಾನಿದ್ಯದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ವಹಿಸಿದ್ದರು.

ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಚಿಕ್ಕಬಳ್ಳಾಪುರ ನಗರಸಭಾ ಅಧ್ಯಕ್ಷ ಆನಂದ ರೆಡ್ಡಿ (ಬಾಬು), ಶ್ರೀ ಸತ್ಯಸಾಯಿ ಮಾನವ ಅಭ್ಯುಧಯ ವಿಶ್ವವಿದ್ಯಾಲಯ ಕುಲಾಧಿಪತಿಗಳಾದ ಬಿ.ಎನ್. ನರಸಿಂಹಮೂರ್ತಿ, ಶ್ರೀ ಸತ್ಯಸಾಯಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಿ.ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ  ಫೆಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ಅಚ್ಚರಿಯ ಬೆಳವಣಿಗೆಯಲ್ಲಿ ಎಸ್. ಪದ್ಮನಾಭ (S. Padmanabha) ಅವರು ದೊಡ್ಡಬಳ್ಳಾಪುರ ನಗರಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೊಡ್ಡಬಳ್ಳಾಪುರ ಬಿಜೆಪಿಗೆ (Doddaballapur BJP) ಶಾಕ್ ನೀಡಿದ್ದಾರೆ

[ccc_my_favorite_select_button post_id="120682"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]