ದೊಡ್ಡಬಳ್ಳಾಪುರ: ಪಡಿತರ ಚೀಟಿದಾರರ ಇ-ಕೆವೈಸಿ ಅವಧಿ ವಿಸ್ತರಣೆ

ದೊಡ್ಡಬಳ್ಳಾಪುರ: ಎಲ್ಲ ವರ್ಗದ ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಕಾರ್ಯದ ಅವಧಿಯನ್ನು  ವಿಸ್ತರಿಸಲಾಗಿದೆ. ತಾಲೂಕಿನ ಪಡಿತರ ಚೀಟಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಶಿರಸ್ತೇದಾರ್ ರಮೇಶ್ ತಿಳಿಸಿದ್ದಾರೆ.

ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಪ್ರತಿ ದಿನ ನ್ಯಾಯಬೆಲೆ ಅಂಗಡಿಗಳಲ್ಲಿ 07 ರಿಂದ ರಾತ್ರಿನ 08ರ ವರೆಗೆ ಇ-ಕೆವೈಸಿ ಸಂಗ್ರಹಣೆ ಕಾರ್ಯವನ್ನು ದಿನಾಂಕ 11-09-2021 ರಿಂದ ದಿನಾಂಕ 15-09-2021ರ ವರೆಗೆ ಮುಂದುವರೆಸಲಾಗಿದೆ. 

ದಿನಾಂಕ 16-09-2021 ರಿಂದ ದಿನಾಂಕ 30-09-2021ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿದಿನ ಮಧ್ಯಾಹ್ನ 12 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮಾತ್ರ ಇ-ಕೆವೈಸಿ ಸಂಗ್ರಹಣೆ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ.

ಆದ್ದರಿಂದ ಮೇಲಿನ ವೇಳಾಪಟ್ಟಿಯಂತೆ ಜಿಲ್ಲೆಯ ಎಲ್ಲಾ ಅಂತ್ಯೋದಯ ಹಾಗೂ ಪಿಹೆಚ್‍ಹೆಚ್ (ಬಿಪಿಎಲ್) ಹಾಗೂ ಎನ್ ಪಿಹೆಚ್ ಹೆಚ್ (ಎ.ಪಿ.ಎಲ್.) ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಒಂದು ಬಾರಿ Electronic Know Your Customer  (ಇ.ಕೆವೈಸಿ) ನೀಡಲು ಮತ್ತೊಮ್ಮೆ ತಿಳಿಸಲಾಗಿದೆ.

ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರು ತಮ್ಮ ನ್ಯಾಯಬೆಲೆ ಅಂಗಡಿಗೆ ಹೋಗಿ ಬೆರಳಚ್ಚು ನೀಡುವ ಪ್ರಕ್ರಿಯೆಯಾಗಿರುತ್ತದೆ. ಇ-ಕೆವೈಸಿ ಸೇವೆಯು ಉಚಿತ ಸೇವೆಯಾಗಿರುತ್ತದೆ. ಇದಕ್ಕಾಗಿ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಸಂಚಾಲಕರಿಗೆ ಯಾವುದೇ ದುಡ್ಡು ನೀಡುವ ಅವಶ್ಯಕತೆ ಇಲ್ಲ.

ಒಂದು ವೇಳೆ ಈ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಸಂಬಂಧಪಟ್ಟ ತಹಶೀಲ್ದಾರರು ಹಾಗೂ ತಾಲೂಕಿನ ಆಹಾರ ಶಿರಸ್ತೇದಾರ್, ನಿರೀಕ್ಷಕರುಗಳಿಗೆ ಮತ್ತು ಉಪ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ದೊಡ್ಡಬಳ್ಳಾಪುರ ಇವರಿಗೆ ದೂರು ಸಲ್ಲಿಸಬೇಕು.

ಸರ್ಕಾರವು ಇ-ಕೆವೈಸಿ. ನೀಡಲು ಈ ತಿಂಗಳ ಅಂತ್ಯದವರೆಗೆ ಅಂದರೆ ಸೆಪ್ಟೆಂಬರ್ 30 ರವರೆಗೆ ಕೊನೆಯ ಅವಕಾಶ ನೀಡಿದ್ದು, ಒಂದು ವೇಳೆ ಈ ಅವಧಿಯಲ್ಲಿ ಇ-ಕೆವೈಸಿ, ನೀಡದಿದ್ದಲ್ಲಿ, ಪಡಿತರ ಚೀಟಿಯಿಂದ ಅಂತಹ ಸದಸ್ಯರುಗಳ ಹೆಸರು ಕಡಿಮೆಯಾಗಿ ಪಡಿತರ ಪದಾರ್ಥ ಬಾರದೇ ಇದ್ದಲ್ಲಿ ನೇರವಾಗಿ ಪಡಿತರ ಚೀಟಿದಾರರೇ ಜವಾಬ್ದಾರರಾಗುತ್ತಾರೆ. ಆದ್ದರಿಂದ ಇ-ಕೆವೈಸಿ ನೀಡಲು ಬಾಕಿ ಇರುವ ಪಡಿತರ ಚೀಟಿದಾರರು ಇದಕ್ಕೆ ಆಸ್ಪದ ನೀಡದೇ, ಇ-ಕೆವೈಸಿ ನೀಡಲು ಬಾಕಿ ಇರುವ ಎಲ್ಲಾ ಪಡಿತರ ಚೀಟಿದಾರರುಗಳಿಗೆ ಸೂಚನೆ ನೀಡಲಾಗಿದೆ ಎಂದು ರಮೇಶ್ ಅವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]