ಉಕ್ಕಿನ ಮನುಷ್ಯನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಮುಖ್ಯಮಂತ್ರಿ / ಸರ್ದಾರ ವಲ್ಲಭ ಭಾಯ್ ಪಟೇಲರ ತತ್ವಾದರ್ಶಗಳನ್ನು ಪಾಲಿಸಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರಗಿ: ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಸರ್ದಾರ ವಲ್ಲಭ ಭಾಯ್ ಪಟೇಲರ ತತ್ವಾದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಣಗಾನ ಮಾಡಿದರು. 

ಕಲ್ಯಾಣ ಕರ್ನಾಟಕ ಉತ್ಸವದ ದಿನದ ಅಂಗವಾಗಿ ನಗರದ ಸರ್ದಾರ ವಲ್ಲಭ ಭಾಯ್ ವೃತ್ತದಲ್ಲಿರುವ ಸರ್ದಾರ ವಲ್ಲಭ ಭಾಯ್ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ಬಾರ್ದೋಲಿ ಸತ್ಯಾಗ್ರಹದ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿದ ಪಟೇಲರು, ಎಲ್ಲಾ ರಾಜ್ಯಗಳ ಒಕ್ಕೂಟಗಳನ್ನು ಒಂದು ಗೂಡಿಸುವ ಮೂಲಕ ಭಾರತವನ್ನು ಒಂದುಗೂಡಿಸಿದರು ಎಂದು  ಅವರು ಹೇಳಿದರು. 

71ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಸಂದರ್ಭದಲ್ಲಿ ಶುಭಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮೋದಿಯವರ ಕನಸಿನ ನವ ಭಾರತದ ನಿರ್ಮಾಣದ ಜೊತೆಗೆ ನವ ಕರ್ನಾಟಕ ಹಾಗೂ ನವ ಕಲ್ಯಾಣ ಕರ್ನಾಟಕ ನಿರ್ಮಾಣ ಮಾಡಬೇಕಿದೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಮತ್ತು ತೋಟಗಾರಿಕೆ ಸಚಿವ ಮುನಿರತ್ನ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ್, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಬಾಬುರಾವ್ ಚಿಂಚಿನಸೂರ,  ಅಫಜಲಪೂರ ಶಾಸಕ ಎಂ.ವೈ ಪಾಟೀಲ್, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಕಲ್ಯಾಣ ಕರ್ನಾಟಕ ಉತ್ಸವ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಶಶೀಲ್ ಜಿ. ನಮೋಶಿ, ವಿಧಾನ ಪರಿಷತ್ ಶಾಸಕ ಬಿ.ಜಿ. ಪಾಟೀಲ್,  ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ್, ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಸೇರಿದಂತೆ ಅನೇಕರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..‌

ರಾಜಕೀಯ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ ಸುಧಾಕರ್ (Dr.K. Sudhakar) ಅವರು ಸೂಚನೆ ನೀಡಿದರು.

[ccc_my_favorite_select_button post_id="120824"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]