ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ವಿಕಲಚೇತನರಿಗೆ ನೀಡಲಾಗುತ್ತಿರುವ ಎಸ್.ಎಸ್.ಎಲ್.ಸಿ ನಂತರದ ವಿದ್ಯಾರ್ಥಿ ವೇತನಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿಕಲಚೇತನರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿಯನ್ನು ಸ್ಟೇಟ್ ಸ್ಕಾಲರ್ ಶಿಪ್ ಪೋರ್ಟಲ್ hhps://ssc.postmetric.karnataka.gov.in/2021/ಮೂಲಕ ಆನ್ಲೈನ್ ನಲ್ಲಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 2021ರ ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿ, ಕೊಠಡಿ ಸಂಖ್ಯೆ: 03, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..