ಎಂಪಿಸಿಎಸ್ ನೌಕರರ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ / ನೂತನ ಕಾರ್ಯಕಾರಿ ಮಂಡಳಿ ರಚನೆಗೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಸೂಚನೆ

ದೊಡ್ಡಬಳ್ಳಾಪುರ: ರೈತರಿದ್ದರೆ ಮಾತ್ರ ದೇಶ ಸಮೃದ್ಧವಾಗಿರುತ್ತದೆ. ಆದರೆ ರೈತರ ಪರ ಹೋರಾಟಗಳಿಗೆ ಯಾರೂ ಬರುವುದಿಲ್ಲ. ನ್ಯಾಯಯುತ ಹೋರಾಟಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹೇಳಿದರು.

ನಗರದ ಬಮೂಲ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಹಾಲು ಉತ್ಪಾದಕ ಸಹಕಾರ ಸಂಘಗಳ ನೌಕರರ ಸಂಘದ ನೂತನ ಕಾರ್ಯಕಾರಿ ಸಮಿತಿ ರಚನೆ ಹಾಗೂ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿ 200ಕ್ಕೂ ಹೆಚ್ಚು ಕಾರ್ಯದರ್ಶಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾರ್ಯದರ್ಶಿಗಳು ಶಿಸ್ತುಬದ್ದವಾಗಿ ಕೆಲಸ ಮಾಡಿದಾಗ ಸಂಘಕ್ಕೆ ರೈತರಿಂದ ಹಾಲು ಪೂರೈಕೆ ಕ್ರಮೇಣವಾಗಿ ಹೆಚ್ಚಾಗುತ್ತದೆ. ಯಾವುದೇ ಹಾಲು ಕಲಬೆರಕೆ, ಸೋರಿಕೆಗೆ ಅವಕಾಶ ಇರುವುದಿಲ್ಲ. ಹೀಗಾಗಿ ಕಾರ್ಯದರ್ಶಿಗಳು ಸ್ವಚ್ಚ ಆಡಳಿತ ನೀಡಿದಾಗ ಆಯಾ ಎಂಪಿಸಿಎಸ್ ಗಳು ಶೀಘ್ರವಾಗಿ ಅಭಿವೃದ್ಧಿಯಾಗುತ್ತದೆ. ತಾಲೂಕಿನ ಎಲ್ಲಾ ಎಂಪಿಸಿಎಸ್ ಗಳ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿಗಳ ಅನುಕೂಲಕ್ಕಾಗಿ ನೂತನ ಹಾಲು ಉತ್ಪಾದಕರ ನೌಕರರ ಸಂಘ ಅಸ್ತಿತ್ವಕ್ಕೆ ತರಲಾಗುವುದು. ಸಂಘ ಕೇವಲ ನೌಕರರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕೆಲಸ ಮಾಡಲಿದೆ. ಅನಾರೋಗ್ಯ, ಅಪಘಾತ, ಅತ್ಯಂತ ಅನಿವಾರ್ಯ ಸಂಧರ್ಬದಲ್ಲಿ ಆರ್ಥಿಕ ಸೌಲಭ್ಯ ನೀಡಲು ಸಂಘವು ಶ್ರಮಿಸಲಿದೆ. ಇದಕ್ಕಾಗಿ ಪ್ರತಿ ಎಂಪಿಸಿಎಸ್ ನಿಂದ ಪ್ರತಿ ತಿಂಗಳು ತಲಾ‌ ಒಂದೂವರೆ ಸಾವಿರ ತೆಗೆದಿಡಲು ನಿರ್ಧರಿಸಲಾಗಿದೆ. ಎಂಪಿಸಿಎಸ್ ನ ಯಾವುದೇ ಸಿಬ್ಬಂದಿ ಸಮಸ್ಯೆಯಲ್ಲಿದ್ದಾಗ ನೇರವಾಗಿ ನನ್ನ ಭೇಟಿಯಾಗಿ ತಿಳಿಸಿದರೆ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದರು.

ನೂತನ ಸಂಘಕ್ಕೆ 10ಲಕ್ಷ ರೂ: ನೂತನ ತಾಲೂಕು ಹಾಲು ಉತ್ಪಾದಕರ ಸಹಕಾರ ನೌಕರರ ಸಂಘದ ನಿಧಿಗೆ ವೈಯಕ್ತಿಕವಾಗಿ 10 ಲಕ್ಷ ರೂ. ನೀಡಲಾಗುವುದು. ಮುಂದಿನ ಮೂರು ವರ್ಷಗಳಲ್ಲಿ ಈ ನಿಧಿಯನ್ನು ಒಂದು ಕೋಟಿ ರೂ.ಗೆ ಏರಿಸಿ ಸಂಘದ ನೌಕರರ ಕ್ಷೇಮಾಭಿವೃದ್ಧಿಗೆ ಬಳಕೆ ಮಾಡಲು ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರೋತ್ಸಾಹ ಧನ, ಪ್ರಶಸ್ತಿ, ಸನ್ಮಾನ: ಹೈನುಗಾರಿಕೆ ಮತ್ತು ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಾಲೂಕು ಅತ್ಯುತ್ತಮ ಹಾಲು ಉತ್ಪಾದಕ ಸಹಕಾರ ಸಂಘ ಪ್ರ ಅತ್ಯುತ್ತಮ ಹಾಲು ಉತ್ಪಾದಕ ರೈತ, ಅತ್ಯುತ್ತಮ ಕಾರ್ಯದರ್ಶಿಗಳಿಗೆ ಪ್ರೋತ್ಸಾಹಧನ ನೀಡಿ ಅಭಿನಂದನೆ ಸಲ್ಲಿಸಲಾಯಿತು. 

ನೌಕರರ ಬೇಡಿಕೆ: ಇದೇ ವೇಳೆ ನೌಕರರ ಸಂಘದ ಅಧ್ಯಕ್ಷ ರುದ್ರಪ್ಪ ಮಾತನಾಡಿ ಕನಿಷ್ಠ 15 ವರ್ಷಗಳ ಕಾಲ ಸೇವೆ ಮಾಡಿ ವಯೋಸಹಜ, ಅಪಘಾತ, ಹೀಗೆ ಸೂಕ್ತ ಕಾರಣಗಳಿಂದ‌ ನಿವೃತ್ತಿಯಾದವರಿಗೆ ಮತ್ತು ಅಕಾಲಿಕ ಮರಣ ಹೊಂದಿದವರಿಗೆ 10 ಲಕ್ಷ ಪರಿಹಾರ ಧನ ಮತ್ತು ವೇತನ ಹೆಚ್ಚಳವಾಗಿ ಮೂರು ವರ್ಷವಾಗಿದೆ ಶೀಘ್ರವಾಗಿ ವೇತನ ಹೆಚ್ಚಳ ಮಾಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಹಾಲು ಉತ್ಪಾದಕರ ನೌಕರರ ಸಂಘದ ಅಧ್ಯಕ್ಷ ರುದ್ರಪ್ಪ, ಉಪಾಧ್ಯಕ್ಷ ರಾಜಕುಮಾರ್, ಪ್ರಧಾನಕಾರ್ಯದರ್ಶಿ ನಾರಾಯಣಪ್ಪ, ಖಜಾಂಚಿ ಆರ್.ಸತೀಶ್, ಎಂಪಿಸಿಎಸ್ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="119395"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!