ಸೆ.30ರಿಂದ ತಾಲೂಕಿನಾಧ್ಯಂತ ಗ್ರಾಮಸಭೆ: ಸಾರ್ವಜನಿಕರಿಗೆ ಯೋಜನೆಗಳ ಮಾಹಿತಿ ನೀಡಲು ಸಿದ್ದರಾಗುವಂತೆ ಶಾಸಕ ಟಿ.ವೆಂಕಟರಮಣಯ್ಯ ಸೂಚನೆ

ದೊಡ್ಡಬಳ್ಳಾಪುರ: ಸೆ.30ರಿಂದ ಗ್ರಾಮಪಂಚಾಯಿತಿ ಮಟ್ಟದಲ್ಲಿ ಆಯೋಜಿಸಲಾಗಿರುವ ಗ್ರಾಮಸಭೆಗಳಲ್ಲಿ ಭಾಗವಹಿಸಿ, ಇಲಾಖೆವಾರು ಸರ್ಕಾರದ ಯೋಜನೆಗಳನ್ನು ಕರ ಪತ್ರದ ಮೂಲಕ ಸಾರ್ವಜನಿಕರಿಗೆ ತಿಳಿಸಲು ಅಧಿಕಾರಿಗಳು ಸಿದ್ದರಾಗಬೇಕೆಂದು ಶಾಸಕ ಟಿ.ವೆಂಕಟರಮಣಯ್ಯ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್-19 ಸೋಂಕಿನ ಕಾರಣ ಗ್ರಾಮಸಭೆ ಆಯೋಜನೆ ವಿಳಂಬವಾಗಿದೆ. ಸೆ.30 ರಿಂದ ಗ್ರಾಮಸಭೆಗಳನ್ನು ಆರಂಭಿಸಲಾಗುತ್ತಿದ್ದು, ಸರ್ಕಾರದ ಸೌಲಭ್ಯಗಳನ್ನು ತಿಳಿಸುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ತಿಳಿಯಲು ಅನುಕೂಲವಾಗಲಿದೆ ಎಂದರು.

ಈ ವೇಳೆ ಅಧಿಕಾರಿಗಳು ಇಲಾಖೆವಾರು ಯೋಜನೆಗಳ ಅನುಷ್ಠಾನಗಳ ಕುರಿತು ಮಾಹಿತಿ ನೀಡಿದರು.

ನಂತರ ಮಾತಾನಾಡಿದ ಶಾಸಕ ಟಿ.ವೆಂಕಟರಮಣಯ್ಯ, ಪಡಿತರ ವಿತರಣೆಗೆ ಸಾಲುಗಟ್ಟಿ ನಿಲ್ಲಬೇಕಾದ ಅನಿರ್ವಾರ್ಯತೆ ತಪ್ಪಿಸಲು ಹಚ್ಚುವರಿ ಡಿಪೋ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ  ಆಹಾರ ಇಲಾಖೆ ಶಿರಸ್ತೆಧಾರ್ ರಮೇಶ್ ಅವರಿಗೆ ತಿಳಿಸಿದ ಅವರು, ಸರ್ಕಾರ ಅನರ್ಹರೆಂಬ ಕಾರಣ ನೀಡಿ ತಾಲೂಕಿನಲ್ಲಿ 786 ಮಂದಿಯ ಪಡಿತರ ಚೀಟಿ ರದ್ದು ಪಡಿಸಿರುವುದು ಕೋವಿಡ್ ಸಂದರ್ಭದಲ್ಲಿ ಬಡ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಮುಂದಿನ ಪ್ರಕ್ರಿಯೆ ಬಂದಲ್ಲಿ ಕ್ರಮಕ್ಕೆ ಮುಂದಾಗದೆ ಮಾಹಿತಿ ನೀಡಿ ಹಿರಿಯ ಆಧಿಕಾರಿಗಳೊಂದಿಗೆ ಮಾತನಾಡಲಾಗುವುದೆಂದರು.

ಸರ್ಕಾರಿ ಶಾಲೆಗಳಿಗೆ ದಾಖಲಾತಿ ಹೆಚ್ಚಾಗುತ್ತಿದ್ದು, ಶುಲ್ಕ ಬಾಕಿ ಕಟ್ಟದ ಕಾರಣ ಟಿಸಿ ನೀಡುತ್ತಿಲ್ಲವೆಂದು ಪೋಷಕರು ದೂರುತ್ತಿದ್ದಾರೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕೆಂದರು.

ವಿಶೇಷ ಆಂದೋಲನ: ಸರ್ಕಾರಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿರುವ ಜಮೀನು ವಿವಾದ ಪರಿಹರಿಸಲು ವಿಶೇಷ ಆಂದೋಲನ ನಡೆಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದ ಅವರು, ತಾಲೂಕಿನಲ್ಲಿ ಸುಮಾರು 10 ರಿಂದ 12 ಸಾವಿರ ಮಂದಿಯ ಪೆನ್ಷನ್ ತೊಂದರೆಯಾಗಿರುವ ಕುರಿತು ದೂರುಗಳು ಬಂದಿವೆ. ಅಂಚೆ ಕಚೇರಿ ಸಿಬ್ಬಂದಿಗಳು ಹಣ ಬಂದಿಲ್ಲ ಎನ್ನುತ್ತಾರೆ, ಕಂದಾಯ ಇಲಾಖೆ ಹಣ ಬಿಡುಗಡೆಯಾಗಿದೆ ಎನ್ನುತ್ತಾರೆ. ಮತ್ತೇಕೆ ಪೆನ್ಷನ್ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ ಈ ಕುರಿತು ಕೂಡಲೆ ಗಮನ ಹರಿಸಬೇಕಿದೆ ಎಂದರು.

ಕಾಲುಬಾಯಿ ಜ್ವರಕ್ಕೆ ಲಸಿಕೆ ಪೂರೈಕೆ, ರೈತರಿಗೆ ಯೂರಿಯಾ ಕೊರತೆ ನೀಗಲು ಕ್ರಮ, ಹೆಣ್ಣು ಕರು ಗರ್ಭಧಾರಣೆಯ  ಕುರಿತು ರೈತರಿಗೆ ಅರಿವು, ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳಲ್ಲಿನ ಕೋವಿಡ್ ಪರಿಕರಗಳ ಭದ್ರತೆಗೆ ಕ್ರಮ. ವಸತಿ ಶಾಲೆಗಳಲ್ಲಿ ಮಕ್ಕಳ ಸೇರಿಸಲು ಪ್ರಚಾರ ಕೈಗೊಳ್ಳುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಣ್ಣು, ಕಿವಿ ಇಲ್ಲದ ಸರ್ಕಾರ: ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನದ ಕೊರತೆಯಿಂದ ತಾಲೂಕಿನ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಜನತೆ ಮುಖ್ಯವಾಗಿ ಕೇಳುವುದು ಮೂಲಭೂತ ಸೌಲಭ್ಯವಾದ ಶಿಕ್ಷಣ, ಆರೋಗ್ಯ, ರಸ್ತೆ, ನೀರು ಆದರೆ ಬಿಜೆಪಿ ಸರ್ಕಾರ ಅನುದಾನ ನೀಡುತ್ತಿಲ್ಲ.

ಮಾಜಿ‌ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೋಬಳಿಗೊಂದು ವಸತಿ ಶಾಲೆ ಕಲ್ಪನೆಯನ್ನು ಸಾಕಾರ ಮಾಡದೆ ಹೆಚ್ಚಿನ ಮಕ್ಕಳು ಉತ್ತಮ ಶಿಕ್ಷಣ ಪಡೆಯುವುದನ್ನು ವಂಚಿಸಿದೆ‌. ಎಲ್ಲಾ ಇಲಾಖೆಯಲ್ಲಿನ ಅನುದಾನ ಕಡಿತಗೊಳಿಸಿದೆ. ವೃಷಭಾವತಿ ಸಂಸ್ಕರಣೆ ನೀರಿನ ಯೋಜನೆ ಹೆಚ್ಚುವರಿಯಾಗಿ ತುಮಕೂರು ಜಿಲ್ಲೆಯನ್ನು ಸೇರಿಸಿದೆ. ಅಲ್ಲಿ ಹೇಮಾವತಿ ನೀರು‌ ಪೂರೈಕೆಯಾಗುತ್ತಿದ್ದರೂ ಯೋಜನೆಯ ವಿಳಂಬ ಮಾಡಲು ಶಡ್ಯಂತ್ರ ಮಾಡಿದೆ ಎಂದು ಆರೋಪಿಸಿದರು.

ಜಿಲ್ಲಾಸ್ಪತ್ರೆಗಾಗಿ ಪದೇಪದೇ ಮನವಿ ಮಾಡಿದರು ಸ್ಪಂದಿಸುತ್ತಿಲ್ಲ. 100 ಹಾಸಿಗೆಗಳ ತಾಲೂಕು ಆಸ್ಪತ್ರೆಗೆ 150 ಮಂದಿ ದಾಖಲಾಗುತ್ತಿದ್ದು, 50 ಹಾಸಿಗೆ ಕೊರೆತೆಯಾಗಿದೆ. ಈ ಕುರಿತು ಇಂದು ಸಭೆ ನಡೆಸಿ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ. ಆದರೆ ಜನರೇಟರ್ ಕೊರತೆ ಇದ್ದು, ಎಕ್ಸ್‌ಪ್ರೆಸ್ ಲೈನ್ ಸಂಪರ್ಕ ನೀಡುವಂತೆ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇರುವ ಸೌಲಭ್ಯದಲ್ಲಿಯೇ ಹಲವು ವ್ಯವಸ್ಥೆ ಮಾಡಬೇಕಾದ ಅನಿರ್ವಾರ್ಯತೆಯನ್ನು ಬಿಜೆಪಿ ಸರ್ಕಾರ ಸೃಷ್ಟಿಸಿ, ಅಭಿವೃದ್ಧಿ ವಿಚಾರದಲ್ಲಿ ಕಿವಿ, ಕಣ್ಣು ಇಲ್ಲದಂತೆ ವರ್ತಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಭೆಯಲ್ಲಿ ತಾಪಂ ಇಒ ಟಿ.ಮುರುಡಯ್ಯ, ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್, ಸಿಡಿಪಿಒ ಅನಿತಾಲಕ್ಷ್ಮೀ, ಕುಡಿಯುವ ನೀರು ಇಲಾಖೆಯ ಎಇಇ ಬಿ.ಕೆ.ಯೋಗೇಶ್, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಬಿಇಒ ಶುಭಮಂಗಳ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!