ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಗಳು ಎಂದಿನಂತೆ ಆರಂಭ / ಮಕ್ಕಳ ಶಾಲಾ ಶಿಕ್ಷಣಕ್ಕೆ ಒತ್ತು: ಪಿ.ಜಿ.ಆರ್.ಸಿಂಧ್ಯ

ದೊಡ್ಡಬಳ್ಳಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕೋವಿಡ್ ಸಮಯದಲ್ಲಿ ಹಲವಾರು ಸೇವಾ ಕಾರ್ಯಗಳನ್ನು ನಡೆಸಲಾಗಿದೆ. ಪ್ರಸ್ತುತ ಸಾರ್ವಜನಿಕ ಶಿಕ್ಷಣ ಇಲಾಖೆಯ ಸೂಚನೆಯ ಮೇರೆಗೆ ಶಿಕ್ಷಕರ ತರಬೇತಿ ಹಾಗೂ ಶಾಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ, ಶಾಲೆಗೆ ಕರೆತರಲು ಸ್ಕೌಟ್ಸ್ ಮತ್ತು ಗೈಡ್ಸ್‍ನಿಂದ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂದ್ಯ ತಿಳಿಸಿದ್ದಾರೆ.

ನಗರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ನಾಯಕತ್ವ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಕ್ಕಳು ಪಠ್ಯ ಚುಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು, ಶಾಲೆ ಬಿಟ್ಟ ಮಕ್ಕಳು ಶಾಲೆಗೆ ಬರುವಂತೆ ನೆರವಾಗುವುದು ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮಗಳಲ್ಲಿ ಪ್ರಮುಖವಾಗಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಸೇವೆ: ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕೋವಿಡ್ ಸಮಯದಲ್ಲಿ ಹಲವಾರು ಸೇವಾ ಕಾರ್ಯಗಳನ್ನು  ನಡೆಸಲಾಗಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್‍ನಿಂದ 1 ಕೋಟಿ ಮಾಸ್ಕ್ ವಿತರಣೆ, ಶಾಲಾ ಮಕ್ಕಳಿಂದ 1 ಕೋಟಿ ರೂ ದೇಣಿಗೆ ಸಂಗ್ರಹಣೆ, 1ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ. ಆರ್ಥಿಕ ಸಂಕಷ್ಟದಲ್ಲಿನ ಶಿಕ್ಷಕರಿಗೆ ನೆರವು ನೀಡಲಾಗಿದೆ. ವರ್ಚುಯಲ್ ಮೂಲಕ ಹಲವಾರು ಕಾರ್ಯಕ್ರಮಗಳು ನಡೆದಿವೆ. ವೆಬೆನಾರ್‍ನಲ್ಲಿ ಹಲವಾರು ಗಣ್ಯರು ಭಾಗವಹಿಸಿ ಮಾರ್ಗದರ್ಶನ ನೀಡಿದ್ದಾರೆ ಎಂದರು.

ಬಾಲಕಿಯರ ವಿದ್ಯಾರ್ಥಿನಿಲಯ: ದೊಡ್ಡಬಳ್ಳಾಪುರದ ತರಬೇತಿ ಶಿಬಿರದಲ್ಲಿ ಬಾಲಕಿಯರಿಗಾಗಿ ವಿದ್ಯಾರ್ಥಿನಿಲಯ ಸ್ಥಾಪಿಸಲು ಹಣಕಾಸು ಇಲಾಖೆಯ ಅನುಮೋದನೆಗಾಗಿ ಕಳುಹಿಸಲಾಗಿದೆ. ಅನಿಬೆಸೆಂಟ್ ಪಾರ್ಕ್‍ನ ನಿಜಲಿಂಗಪ್ಪ ಭವನವನ್ನು ನವೀಕರಣ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ  ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ ಭಟ್, ಬೆಂಗಳೂರು ಗ್ರಾ.ಜಿಲ್ಲಾ ಮುಖ್ಯ ಆಯುಕ್ತ ನಾಗರಾಜ್, ರಾಜ್ಯ ಜಂಟಿ ಕಾರ್ಯದರ್ಶಿ ರಾಮಲತ, ಶಿಬಿರದ ತರಬೇತಿದಾರರಾದ ನರೇಂದ್ರ ಕುಮಾರ್ ಲೋಕೇಶ್, ರೇಂಜರ್ ನಾಯಕಿ ಶುಭಾ, ಶಿಬಿರದ ಸಲಹೆಗಾರ ಪ್ರೋ.ಎಂ.ಜಿ.ಚಂದ್ರಶೇಖರಯ್ಯ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!