ಬೆಂ.ಗ್ರಾ.ಜಿಲ್ಲೆ: ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಲು ಪಿ.ಹೇಮಲತ ಸೂಚನೆ

ಬೆಂ.ಗ್ರಾ.ಜಿಲ್ಲೆ: ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು, ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸರ್ಕಾರದ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಪಿ.ಹೇಮಲತ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ 2021-22ನೇ ಸಾಲಿನ ಆಗಸ್ಟ್-2021ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆಡಿಪಿ) ಪ್ರಗತಿ ಪರಿಶೀಲನೆ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು ಕಾಮಗಾರಿಗಳು ವಿಳಂಬವಾಗದಂತೆ ಶೀಘ್ರವಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಿ, ಅಂದಾಜು ವೆಚ್ಚದ ಅನುಮೋದನೆ ಪಡೆದು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆಯ ಹಲವಾರು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅವುಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಹಾಗೂ ಪ್ರಸಕ್ತ ಹಣಕಾಸು ವರ್ಷದ ಪೂರ್ಣ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರಲ್ಲದೆ, ವಯಸ್ಕರ ಶಿಕ್ಷಣ ಕಾರ್ಯಕ್ರಮದ ಮೂಲಕ ಅನಕ್ಷರಸ್ಥರಿಗೆ ಶಿಕ್ಷಣ ನೀಡಿ, ಅಕ್ಷರಸ್ಥರನ್ನಾಗಿಸುವ ಮೂಲಕ ಜಿಲ್ಲೆಯಲ್ಲಿರುವ ಅನಕ್ಷರಸ್ಥರ ಸಂಖ್ಯೆ ಕಡಿಮೆಗೊಳಿಸಬೇಕು ಎಂದು ಹೇಳಿದರು. 

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವ್ ದರದ ಪ್ರಮಾಣ ಶೇ. 0.59 ರಷ್ಟು ದಾಖಲಾಗಿದ್ದು, ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಆದಾಗ್ಯೂ ಕೋವಿಡ್ ಪರೀಕ್ಷೆ ಹಾಗೂ ಲಸಿಕೆ ನೀಡುವುದನ್ನು ಹೆಚ್ಚಿಸಬೇಕು ಎಂದರು. 

ಜಿಲ್ಲಾಡಳಿತದಿಂದ ಈಗಾಗಲೇ ಹಲವು ಬಾರಿ ವಿಶೇಷ ಲಸಿಕಾ ಮೇಳವನ್ನು ಆಯೋಜಿಸುವ ಮೂಲಕ ಹದಿನೆಂಟು ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಲಸಿಕೆಯನ್ನು ನೀಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಶೇ. 73 ರಷ್ಟು ಮೊದಲ ಡೋಸ್, ಶೇ. 31 ರಷ್ಟು ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆದಿದ್ದು, ಲಸಿಕೆ ಪಡೆಯುವವರ ಪ್ರಮಾಣ ಹೆಚ್ಚಾಗಬೇಕು ಹಾಗೂ ಶಾಲೆಗಳು ಆರಂಭವಾಗಿರುವುದರಿಂದ ಮಕ್ಕಳಿಗೆ ನೀಡಲಾಗುತ್ತಿರುವ ರೋಗ ನಿರೋಧಕ ಚುಚ್ಚುಮದ್ದುಗಳನ್ನು ನೀಡುವ ಗುರಿಯನ್ನು ಶೇ.100% ರಷ್ಟು ಸಾಧಿಸಬೇಕು ಎಂದು ಸಲಹೆ ನೀಡಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸಣ್ಣ ಉದ್ಯಮ ಹಾಗೂ ಕೈ-ಮಗ್ಗಗಳನ್ನು ಸ್ಥಾಪನೆ ಮಾಡಲು ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ ಅವರು, ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಬೇಕು ಹಾಗೂ ಎನ್‌ಆರ್‌ಎಲ್‌ಎಂ ಯೋಜನೆಯಡಿ ಸ್ತ್ರೀ-ಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ತರಬೇತಿಗಳನ್ನು ನೀಡುವ ಮೂಲಕ ಸ್ವ-ಉದ್ಯೋಗಿಗಳನ್ನಾಗಿ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಮುಖ್ಯ ಯೋಜನಾಧಿಕಾರಿ ಬಿ.ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಡಾ.ಬಿ.ರಮೇಶ್ ರೆಡ್ಡಿ, ಯೋಜನಾ ನಿರ್ದೇಶಕ ಡಾ.ನಾಗರಾಜ್, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ (Congress government) ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ (JDS)

[ccc_my_favorite_select_button post_id="110424"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]