ದೊಡ್ಡಬೆಳವಂಗಲ ಹೋಬಳಿಯಲ್ಲಿ 125ಮಿಮೀ ದಾಖಲೆ ಮಳೆ / ಹುಸ್ಕೂರು ಗ್ರಾಮಕ್ಕೆ ನುಗ್ಗಿದ ನೀರು / 21 ವರ್ಷದ ನಂತರ ತುಂಬಿದ ದೊಡ್ಡತುಮಕೂರು ಕೆರೆ

ದೊಡ್ಡಬಳ್ಳಾಪುರ: ಸೋಮವಾರ ರಾತ್ರಿ ಅಬ್ಬರಿಸಿರುವ ಮಳೆರಾಯ ತಾಲೂಕಿನಲ್ಲಿ 94ಮಿಮೀ ಮಳೆ ಸುರಿದಿದ್ದಾನೆ.

ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ರೂಪ ನೀಡಿರುವ ಮಾಹಿತಿ ಅನ್ವಯ, ತಾಲೂಕಿನ ಕಸಬ ಹೋಬಳಿ 94 ಮಿಮೀ, ದೊಡ್ಡಬೆಳವಂಗಲ ಹೋಬಳಿ 125 ಮಿಮೀ, ಮಧುರೆ ಹೋಬಳಿ 46 ಮಿಮೀ, ಸಾಸಲು ಹೋಬಳಿ 74 ಮಿಮೀ, ತೂಬಗೆರೆ ಹೋಬಳಿ 76 ಮಿಮೀ ಮಳೆಯಾಗಿದೆ. 

ಉಳಿದಂತೆ ದೊಡ್ಡಬೆಳವಂಗಲ ಗ್ರಾಪಂ‌ ವ್ಯಾಪ್ತಿಯಲ್ಲಿ ಅತಿ ಹೆಚ್ಚು 125ಮಿಮೀ ದಾಖಲೆ ಮಳೆಯಾಗಿದ್ದರೆ, ಬಾಶೆಟ್ಟಹಳ್ಳಿ 105 ಮಿಮೀ, ದರ್ಗಾಜೋಗಹಳ್ಳಿ 94 ಮಿಮೀ, ಕೆಸ್ತೂರು 118 ಮಿಮೀ ಹಾಗೂ ಅರಳು ಮಲ್ಲಿಗೆ 96 ಮಿಮೀ ಮಳೆಯಾಗಿದೆ.

ಇನ್ನು ಸೋಮವಾರ ಸುರಿದ ಮಳೆ ಹಲವು ಬೆಳವಣಿಗೆಗೆ ಕಾರಣವಾಗಿದೆ. ದೊಡ್ಡ ತುಮಕೂರು ಕೆರೆ ಮಳೆ ನೀರಿನಿಂದ ಕೋಡಿ ಹರಿದಿದ್ದರೆ, ಹುಸ್ಕೂರು ಗ್ರಾಮದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಕೆಸ್ತೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಸ್ಕೂರು ಗ್ರಾಮದ ಹೊರವಲಯದಲ್ಲಿನ ರಾಜ ಕಾಲುವೆಗೆ ಅಡ್ಡಿಯುಂಟಾಗಿ ಗ್ರಾಮಕ್ಕೆ ನೀರು ಹರಿದು, ಸಮಾರು ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಗ್ರಾಮಸ್ಥರು ರಾತ್ರು ಪೂರ ಜಾಗರಣೆ ಮಾಡುವಂತಾಗಿತ್ತು.

ರಾಜ ಕಾಲುವೆ ತೆರವಿಗೆ ಕ್ರಮ: ಹುಸ್ಕೂರು ಗ್ರಾಮಕ್ಕೆ ನೀರು ನುಗ್ಗಿರುವ ಕುರಿತಂತೆ ತಾಲೂಕುಪಂಚಾಯಿತಿ ಇಒ ಟಿ.ಮುರುಡಯ್ಯ  ಹರಿತಲೇಖನಿಗೆ ಪ್ರತಿಕ್ರಿಯೆ ನೀಡಿದ್ದು,  ಪಿಡಿಒ ಹಾಗೂ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ಹಾಗೂ ರಾಜ ಕಾಲುವೆ ಹೂಳು ತೆರವು ಮಾಡಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ದೊಡ್ಡತುಮಕೂರು ಕೆರೆ ಕೋಡಿ: 2000 ಇಸವಿಯಲ್ಲಿ ತುಂಬಿ ಕೋಡಿ ಹರಿದಿದ್ದ ದೊಡ್ಡತುಮಕೂರು ಕೆರೆ ಭಾನುವಾರ ಸುರಿದ ಮಳೆಗೆ ಕೋಡಿ ಹರಿದಿದೆ. ಸುಮಾರು 21 ವರ್ಷಗಳ ನಂತರ ಕೆರೆ ಕೋಡಿ ಹರಿದಿರುವುದರಿಂದ ದೊಡ್ಡತುಮಕೂರು, ಗೌಡಹಳ್ಳಿ  ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆಂದು ಗ್ರಾಮಪಂಚಾಯಿತಿ ಸದಸ್ಯ ಲೋಕೇಶ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!