ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಸಮೀಪ ಮದುವೆ ಬಸ್ ಉರುಳಿ ಬಿದ್ದ ಪ್ರಕರಣದಲ್ಲಿ ಗಾಯಗೊಂಡು, ಗೌರಿಬಿದನೂರು ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಮೃತರನ್ನು ಬೆಳಚಿಕ್ಕನಹಳ್ಳಿ ಗ್ರಾಮದ ರಾಮಕೃಷ್ಣರೆಡ್ಡಿ (48ವರ್ಷ) ಎಂದು ಗುರುತಿಸಲಾಗಿದೆ.
ಗೌರಿಬಿದನೂರು ತಾಲೂಕಿನ ಬೆಳಚಿಕ್ಕನಹಳ್ಳಿ ಗ್ರಾಮದವರ ಮದುವೆಯೊಂದು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿನ ಕಲ್ಯಾಣ ಮಂಟಪದಲ್ಲಿ ಶನಿವಾರ – ಮತ್ತು ಭಾನುವಾರ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಆರತಕ್ಷತೆಗೆ ಬಂದವರು, ಮರಳಿ ಸ್ವಗ್ರಾಮಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮೂವತ್ತು ಅಡಿಯಷ್ಟು ಆಳಕ್ಕೆ ಉರುಬಿದ್ದು ದುರ್ಘಟನೆ ಸಂಭವಿಸಿತ್ತು.
ಘಟನೆ ವೇಳೆ ಬಸ್ಸಿನಲ್ಲಿ ವೃದ್ಧರು, ಮಕ್ಕಳು ಸೇರಿ ಸುಮಾರು 30 ಮಂದಿ ಇದ್ದು, ಐದಾರು ಮಂದಿಗೆಯ ಕೈಕಾಲುಗಳು ಬಸ್ಸಿನಡಿಯಲ್ಲಿ ಸಿಲುಕಿ ಕೊಂಡಿತ್ತು, ಕೂಡಲೆ ಸಮೀಪದ ರೆಸಾರ್ಟ್ ನಿಂದ ಜೆಸಿಬಿ ತರಿಸಿ ಸಿಲುಕೊಂಡಿದ್ದವರ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿ ಶಶಾಂಕ್ ತಿಳಿಸಿದ್ದಾರೆ.
ವರದಾನವಾದ ಮೇಕ್ ಶಿಪ್ಟ್ ಆಸ್ಪತ್ರೆ: ಕೋವಿಡ್ ಸೋಂಕಿನ ಚಿಕಿತ್ಸೆಗೆಂದು ನಿರ್ಮಿಸಲಾದ ಮೇಕ್ ಶಿಪ್ಟ್ ಆಸ್ಪತ್ರೆ, ಅಪಘಾತದಲ್ಲಿ ಗಾಯಗೊಂಡವರನ್ನು ದಾಖಲಿಸಿ ಚಿಕಿತ್ಸೆ ನೀಡಲು ವರದಾನವಾಗಿದೆ. ಈ ಆಸ್ಪತ್ರೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ಸುಮಾರು 24 ಮಂದಿಯನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಾಸಕ ಟಿ.ವೆಂಕಟರಮಣಯ್ಯ ಭೇಟಿ: ಮದುವೆ ಬಸ್ ಅಪಘಾತದ ಕುರಿತು ಮಾಹಿತಿ ಪಡೆದ ಶಾಸಕ ಟಿ.ವೆಂಕಟರಮಣಯ್ಯ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ, ಅತಂಕಕ್ಕೆ ಒಳಗಾಗದಂತೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ವೈದ್ಯರಾದ ಡಾ.ಪಾರ್ಥಸಾರಥಿ, ಡಾ.ರಾಜು ಇದ್ದರು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….