ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ಪ್ರವರ್ಗ-1ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆಯ ಸೌಲಭ್ಯಕ್ಕಾಗಿ ಒಂದರಿಂದ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‌ಸೈಟ್ ವಿಳಾಸ: www.ssp.karnataka.gov.in/8080/2122 ಇಲ್ಲಿ ಆನ್ ಲೈನ್ ಮೂಲಕ 2021ರ ನವೆಂಬರ್ 21ರೊಳಗೆ ಸಲ್ಲಿಸುವುದು.
ಆಸಕ್ತರು ವಿದ್ಯಾರ್ಥಿ ವೇತನ ಸೌಲಭ್ಯದ ವಿವರ, ಅರ್ಹತೆಗಳು, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳ ಮಾಹಿತಿ ಹಾಗೂ ಹೆಚ್ಚಿನ ವಿವರಗಳನ್ನು ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ವೆಬ್ ಸೈಟ್ www.backwardclasses.kar.nic.in ಈ ಕೊಂಡಿಯಲ್ಲಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…