ಯುವ ನಟ ಪುನೀತ್​ ರಾಜ್​ ಕುಮಾರ್ ಅಕಾಲಿಕ ನಿಧನಕ್ಕೆ ಕಂಬನಿ ಮಿಡಿದ ದೊಡ್ಡಬಳ್ಳಾಪುರ ತಾಲೂಕು: ನಗರ, ಗ್ರಾಮಾಂತರ ಪ್ರದೇಶದ ಬಹುತೇಕ ಕಡೆಗಳಲ್ಲಿ ಶ್ರದ್ಧಾಂಜಲಿ

ದೊಡ್ಡಬಳ್ಳಾಪುರ: ಯುವ ನಟ ಪುನೀತ್​ ರಾಜ್​ ಕುಮಾರ್ ಅವರ ಅಕಾಲಿಕ ಮರಣಕ್ಕೆ ತಾಲೂಕಿನ ಜನತೆ ಕಂಬನಿ ಮಿಡಿದಿದ್ದಾರೆ.

ತಾಲೂಕಿನ ನಗರ ಗ್ರಾಮಾಂತರ ಸೇರಿದಂತೆ ಬಹುತೇಕ ಕಡೆಗಳಲ್ಲಿ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

ತಾಲೂಕು ಕಲಾವಿದರ ಸಂಘದ ವತಿಯಿಂದ ಶ್ರದ್ದಾಂಜಲಿ: ಶುಕ್ರವಾರ ನಿಧನರಾದ ಕನ್ನಡದ ಖ್ಯಾತ ನಟ ಪವರ್‌ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ವತಿಯಿಂದ ಶ್ರದ್ದಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮ ಕಲಾಭವನದಲ್ಲಿ ನಡೆಯಿತು.

ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜ್‍ಕುಮಾರ್ ಕೊಡುಗೆ ಅಪಾರವಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ಅಸಾಮಾನ್ಯ ಸಾಧನೆ ಮಾಡಿದ್ದ ಪುನೀತ್ ರಾಜ್‍ಕುಮಾರ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದೆ.  ಸಾಮಾಜಿಕ ಕಳಕಳಿ ಹಾಗೂ ಜೀವನ ಮೌಲ್ಯಗಳನ್ನು ಬಿಂಬಿಸುವ ಪುನೀತ್ ರಾಜ್‍ಕುಮಾರ್ ಅವರ ಚಿತ್ರಗಳು ಕುಟುಂಬ ಸಮೇತ ನೋಡುವಂತಹ ಚಿತ್ರಗಳಾಗಿವೆ. ಚಿತ್ರರಂಗದ ಹೊರತಾಗಿ ಸರಳ ಸಜ್ಜನಿಕೆಯ ಮಾನವೀಯ ವ್ಯಕ್ತಿಯಾಗಿದ್ದ ಪುನೀತ್ ರಾಜ್‍ಕುಮಾರ್ ಅವರು, ವೃದ್ದಾಶ್ರಮ, ಅನಾಥಾಶ್ರಮ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗಳು ಮೊದಲಾದ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ವಿವೇಕಾನಂದರಂತೆ ಚಿಕ್ಕ ವಯಸ್ಸಿನಲ್ಲಿಯೇ ಅದ್ವಿತೀಯ ಸಾಧನೆ ಮಾಡಿದವರಾಗಿದ್ದಾರೆ.

ಪುನೀತ್ ರಾಜ್‍ಕುಮಾರ್ ಕಲಾವಿದರಿಗೆ ಮಾದರಿಯಾಗಿ, ಕಲೆಯ ಹೊರತಾಗಿ ಮೇರು ವ್ಯಕ್ತಿತ್ವ ಹೊಂದಿದ್ದ ನಟ. ವರನಟ ರಾಜ್‍ಕುಮಾರ್ ಅವರ ನಂತರದ ಸ್ಥಾನವನ್ನು ತುಂಬಿದ್ದ ಪುನೀತ್ ರಾಜ್‍ಕುಮಾರ್ ಅವರು, ಇನ್ನೂ ಸಾಧನೆ ಮಾಡುವ ಅವಕಾಶವಿದ್ದು, ಈಗ ಬರದ ಲೋಕಕ್ಕೆ ಪಯಣಿಸಿರುವುದು ಚಿತ್ರರಸಿಕರಿಗೆ ಅಪಾರ ನೋವುಂಟಾಗಿದೆ ಎಂದು ನೆರೆದಿದ್ದ ಕಲಾವಿದರು ಕಂಬನಿ ಮಿಡಿದರು.

ಕಾರ್ಯಕ್ರಮದಲ್ಲಿ  ರಂಗ ಕಲಾವಿದರಾದ ಕೆ.ಪಿ.ಪ್ರಕಾಶ್, ಬಿ.ಜಿ.ಅಮರನಾಥ್, ತಾಲೂಕು ಕಲಾವಿದರ ಸಂಘದ ಅಧ್ಯಕ್ಷ  ಎನ್.ರಾಮಾಂಜಿನಪ್ಪ , ಉಪಾಧ್ಯಕ್ಷ ಹೆಚ್. ಪ್ರಕಾಶ್ ರಾವ್, ಪ್ರಧಾನ ಕಾರ್ಯದರ್ಶಿ ಬಿ.ಚಂದ್ರಶೇಖರ್, ಸಹ ಕಾರ್ಯದರ್ಶಿ ಎ. ಮಂಜುನಾಥ್, ಖಜಾಂಚಿ ಹೆಚ್ ಮುನಿಪಾಪಯ್ಯ, ನಿರ್ದೇಶಕರಾದ ವೆಂಕಟೇಶ್, ಶಿವಶಂಕರ್ ರೆಡ್ಡಿ, ರವಿಕುಮಾರ್ ಮತ್ತು ಸಲಹಾಸಮಿತಿ ಸದಸ್ಯರಾದ ವೆಂಕಟರಾಜು, ಜಿ ಮುನಿರಾಜು, ಅನಿಕೇತನ ಟ್ರಸ್ಟ್ ಕಾರ್ಯದರ್ಶಿ ಡಿ.ಶ್ರೀಕಾಂತ, ಮುಖಂಡರಾದ ನಾಗರಾಜ್ ಮತ್ತಿತರರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ.. ಡಿ. 24 ರವರೆಗೆ ನಿಷೇಧಾಜ್ಞೆ ಜಾರಿ

ಗುಡ್ಮಾರ್ನಿಂಗ್ ನ್ಯೂಸ್: ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ.. ಡಿ. 24 ರವರೆಗೆ ನಿಷೇಧಾಜ್ಞೆ ಜಾರಿ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ (Bashettihalli election) ಹಾಗೂ ದೊಡ್ಡಬಳ್ಳಾಪುರ ನಗರಸಭೆಯ ವಾರ್ಡ್ ನಂಬರ್ 21ರ ಹೇಮಾವತಿ ಪೇಟೆಗೆ ಉಪಚುನಾವಣೆ ಸಂಬಂಧ ಡಿಸೆಂಬರ್ 24 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ

[ccc_my_favorite_select_button post_id="117691"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!