ಬದುಕಿನ ನೆಮ್ಮದಿಗೆ ಆದ್ಯಾತ್ಮಿಕ ನೆಲೆಗಟ್ಟಿರಬೇಕು: ಡಾ.ನಿರ್ಮಲಾನಂದ ಸ್ವಾಮೀಜಿ / ನೇರಳೆಘಟ್ಟ ಗ್ರಾಮದಲ್ಲಿ ಆಂಜನೇಯಸ್ವಾಮಿ ಹಾಗೂ ಗ್ರಾಮದೇವತೆ ಮಹೇಶ್ವರಿ ಅಮ್ಮನವರ ನೂತನ ದೇವಾಲಯ ಹಾಗೂ ಬಿಂಬ ಪ್ರತಿಷ್ಟಾಪನಾ ಮಹೋತ್ಸವ

ದೊಡ್ಡಬಳ್ಳಾಪುರ: ವಿಜ್ಞಾನದಿಂದ ಇಂದು ಬದುಕು ಅರಳುವ ಬದಲು ನರಳುತ್ತಿದ್ದು, ಎಷ್ಟೇ ಸೌಲಭ್ಯಗಳಿದ್ದರೂ ಸಹ ಮನಶ್ಯಾಂತಿ ಇಲ್ಲದಂತಾಗಿದೆ. ಈ ದಿಸೆಯಲ್ಲಿ ಧ್ಯಾನ ಹಾಗೂ ದೇವತಾ ಕಾರ್ಯಗಳು ನಮ್ಮನ್ನು  ನಾವು ಅರ್ಥ ಮಾಡಿಕೊಂಡು ನೆಮ್ಮದಿ ಕಾಣಲು ಸಹಕಾರಿಯಾಗುತ್ತವೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದ ಸ್ವಾಮೀಜಿ ತಿಳಿಸಿದರು.

ತಾಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ಆಂಜನೇಯಸ್ವಾಮಿ ಹಾಗೂ ಗ್ರಾಮದೇವತೆ ಮಹೇಶ್ವರಿ ಅಮ್ಮನವರ ನೂತನ ದೇವಾಲಯ ಹಾಗೂ ಬಿಂಬ ಪ್ರತಿಷ್ಟಾಪನಾ ಮಹೋತ್ಸವದ ಉದ್ಘಾಟನಾ ಸಮಾರಂಭದ ಸಾನಿಧ್ಯವಹಿಸಿ ಅವರು ಮಾತನಾಡಿದರು.

ವಾಹನಗಳು, ಸಂಪರ್ಕ ಕ್ರಾಂತಿ ಮೊದಲಾಗಿ ಹಿಂದೆ ಚಕ್ರವರ್ತಿಗಳೂ ಅನುಭವಿಸದೇ ಇರುವ ಸೌಲಭ್ಯಗಳನ್ನು ಇಂದು ಜನಸಾಮಾನ್ಯರು ಅನುಭವಿಸುವಂತೆ ಮಾಡಿರುವುದು ವಿಜ್ಞಾನ ಮತ್ತು ತಂತ್ರಜ್ಞಾನದ ಹೆಗ್ಗಳಿಕೆಯಾಗಿದೆ. ಆದರೆ ಮನಸ್ಸಿನಲ್ಲಿ ದುಃಖ, ದುಗುಡ, ದುಮ್ಮಾನಗಳು ಹೆಚ್ಚಾಗುತ್ತಿವೆ. 110 ವರ್ಷಗಳ ಹಿಂದೆಯೇ ಖ್ಯಾತ ವಿಜ್ಞಾನ ಐನ್ಸ್‍ಟಿನ್ ವಿಜ್ಞಾನ ಮುಂದೆ ಮಾನವೀಯ ಸಂಬಂಧಗಳು ಕಸಿಯುವ ಹಾಗೂ ಸಮಾಜದಲ್ಲಿ ಅಶಾಂತಿ ನೆಲೆಸಲು ಬಳಕೆಯಾಗುವ ಕುರಿತು ಆತಂಕ ವ್ಯಕ್ತಪಡಿಸಿದ್ದನು. ಆಕಾಶಕ್ಕೆ ಯಾನ ಮಾಡುವ ನಾವು ಮನೆಯ ಒಳಗೆ ಕೆಲ ಕಾಲ ನಿರ್ಮೂಲವಾಗಿರಲು ಆಗುತ್ತಿಲ್ಲ. ಈ ದಿಸೆಯಲ್ಲಿ ಹಿರಿಯರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಡೆಯಬೇಕಿದೆ. ಎಲ್ಲೆಡೆ ಭಗವಂತ ಇದ್ದಾನೆ ಎನ್ನುವುದಿದ್ದರೂ ದೇವಾಲಯಗಳನ್ನು ನಿರ್ಮಿಸುವುದು ದೇವರನ್ನು ಮರೆಯಬಾರದು ಎನ್ನುವ ಕಾರಣದಿಂದಾಗಿ. ಆದ್ಯಾತ್ಮಿಕ ನೆಲೆಗಟ್ಟಿನಲ್ಲಿ ನಿರ್ಮಿತವಾದ ಬದುಕು ಸುಖ ಸಂತೋಷ ಕಾಣುತ್ತದೆ.

ಮಕ್ಕಳಿಗೆ ಉತ್ತಮ ಸಂಸ್ಕಾರ, ಧ್ಯಾನ ಹಾಗೂ ಧಾರ್ಮಿಕ ಚಿಂತನೆಗಳನ್ನು ಕಲಿಸಬೇಕಿದೆ. ಇಂದು ನಿರ್ಮಿಸಿರುವ ಆಂಜನೇಯ ಸ್ವಾಮಿಯ ಸ್ವಾಮಿ ನಿಷ್ಟೆ, ಭಕ್ತಿ ಜ್ಞಾನಗಳನ್ನು ಮಾದರಿಯಾಗಿಸಿಕೊಳ್ಳಬೇಕಿದೆ. ತಾಯಿ ಹೃದಯವನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ದೇವಾಲಯಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾಗಲಿದ್ದು, ಊರಿಗೊಂದು ದೇವಾಲಯಗಳ ಅಗತ್ಯವಿದೆ ಎಂದರು.

ಸಮಾರಂಭದಲ್ಲಿ  ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದಸ್ವಾಮೀಜಿ, ಮುಖಂಡರಾದ ಬಿ.ಮುನೇಗೌಡ, ಎನ್.ಗೋಪಾಲಯ್ಯ, ಚಿಕ್ಕರಾಮಕೃಷ್ಣಪ್ಪ, ಡಾ.ಆಂಜಿನಪ್ಪ, ನರಸಿಂಹಯ್ಯ,  ಎಚ್.ಅಪ್ಪಯ್ಯಣ್ಣ, ಆರ್.ಗೋವಿಂದರಾಜು, ರವಿ, ದೇವಾಲಯಗಳ ಜೀರ್ಣೋದ್ದಾರ ಸಮಿತಿಯ ಎನ್.ಸಿ.ಮುನಿರಾಜು, ಚನ್ನಕೃಷ್ಣಯ್ಯ, ಎನ್.ಸಿ.ರಮೇಶ್, ಹನುಮಂತೇಗೌಡ ಮೊದಲಾದ ಗಣ್ಯರು ಭಾಗವಹಿಸಿದ್ದರು.

ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ, ವಿಶೇಷ ಹೋಮ, ಪೂಜಾ ಕಾರ್ಯಕ್ರಮಗಳು ನಡೆದವು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]