ಬಿಬಿಎಂಪಿ ಕಸ ಕಂಟಕದ ವಿರುದ್ದ ಧರಣಿ: ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ಹಿಂತಿರುಗಿದ ಅಧಿಕಾರಿಗಳು

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿ ಸಮೀಪದ ಎಂಎಸ್ಜಿಪಿ ಕಸ ವಿಲೇವಾರಿ ಘಟಕದಿಂದ ಹೊರ ಬರುತ್ತಿರುವ ರಾಸಾಯನಿಕ ಯುಕ್ತ ಕೊಳಚೆ ನೀರು ತಡೆದು ನಿಲ್ಲಿಸಲು ತಡೆಗೋಡೆ ನಿರ್ಮಿಸುವ ಸಲುವಾಗಿ ಕಟ್ಟಡ ಸಾಮಗ್ರಿಗಳನ್ನು ಸಾಗಾಣಿಕೆ ಮಾಡಲು ರಸ್ತೆ ತಡೆ ತೆರವು ಮಾಡುವಂತೆ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಮಾಡಿದ ಮನವಿಗೆ ಧರಣಿ ನಿರತ ಗ್ರಾಮಸ್ಥರು ನಿರಾಕರಿಸಿದ್ದು ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ಭಾನುವಾರ ಅಧಿಕಾರಿಗಳು ವಾಪಾಸಾಗಿದ್ದಾರೆ.

ತಹಶೀಲ್ದಾರ್ ಟಿ.ಎಸ್.ಶಿವರಾಜ್, ಡಿವೈಎಸ್ಪಿ ನಾಗರಾಜ್ ಅವರು ಧರಣಿ ನಿರತರೊಂದಿಗೆ ಮಾತುಕತೆ ನಡೆಸಿ ಕಸದಿಂದ ಉಂಟಾಗಿರುವ ಎಲ್ಲಾ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸುವ ಹಾಗೂ ಕೊಳಚೆ ನೀರು ಗ್ರಾಮಗಳ ಕಡೆಗೆ ಹಳ್ಳಗಳ ಮೂಲಕ ಹರಿದು ಬರದಂತೆ ತಡೆಯುವುದು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವುದಾಗಿ ತಿಳಿಸಿದರು‌. ಆದರೆ ಧರಣಿ ನಿತರು ಈ ಎಲ್ಲಾ ಸಮಸ್ಯೆಗಳಿಗೆ ಮೂಲ ಕಾರಣವಾಗಿರುವ ಕಸ ಇಲ್ಲಿಗೆ ಬರುವುದನ್ನು ನಿಲ್ಲಿಸಿ. ಉಳಿದೆಲ್ಲಾ ಸಮಸ್ಯೆಗಳು ತಾವಿಗೇ ಬಗೆಹರಿಯಲಿವೆ ಎಂದು ಹೇಳುವ ಮೂಲಕ ಧರಣಿಯನ್ನು ಮುಂದುವರೆಸಿದ್ದಾರೆ.

ಧರಣಿಯಲ್ಲಿ ಭಾಗವಹಿಸಿರುವ ಕೆ.ವಿ.ಸತ್ಯಪ್ರಕಾಶ್, ಅಶ್ವತ್ಥನಾರಾಯಣಗೌಡ, ಗೋವಿಂದರಾಜು, ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಯ್ಯ ಮಾತನಾಡಿ, ತಾಲ್ಲೂಕು ಆಡಳಿತ ಸೇರಿದಂತೆ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡುತ್ತಿರುವ ಎಲ್ಲಾ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಕುರಿತು ಬಣ್ಣದ ಮಾತುಗಳನ್ನು ಹೇಳುತ್ತಿದ್ದಾರೆ. ಇದೇ ರೀತಿಯ ಬಣ್ಣದ ಮಾತುಗಳನ್ನು ಎರಡು ವರ್ಷಗಳ ಹಿಂದೆ ಧರಣಿ ನಡೆಸಿದಾಗಲು ಹೇಳಲಾಗಿತ್ತು. ಇವರ ಮಾತುಗಳನ್ನು ನಂಬಿಯೇ ಅಂದು ಧರಣಿಯನ್ನು ಹಿಂದಕ್ಕೆ ಪಡೆಯಲಾಗಿತ್ತು. ಆದರೆ ಧರಣಿ ಅಂತ್ಯಗೊಂಡ ದಿನ ಕಣ್ಮರೆಯಾದ ಅಧಿಕಾರಿಗಳು  ಈಗ ಧರಣಿ ಆರಂಭವಾಗುತ್ತಿದ್ದಂತೆ ಮತ್ತೆ ತಮ್ಮ ಹಳೇ ಚಾಳಿಯನ್ನು ಮುಂದುವರೆಸುತ್ತ ಭರವಸೆಯ ನಾಟಕದ ಮಾತುಗಳನ್ನು ಜನರ ಮುಂದೆ ಪುಂಕಾನುಪುಂಕವಾಗಿ ಹೇಳುವ ಮೂಲಕ ನಾವು ಧರಣಿ ನಡೆಸುತ್ತಿರುವುದೇ ದೊಡ್ಡ ತಪ್ಪು ಎನ್ನುವಂತೆ ಬಿಂಬಿಸಲು ಹಾಗೂ ತಾವು ಧರಣಿ ನಿಲ್ಲಿಸಲು ಎಷ್ಟೆಲ್ಲಾ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಸಚಿವರುಗಳನ್ನು ಮೆಚ್ಚಿಸಲು ನಾಟಕ ಮಾಡುತ್ತಿದ್ದಾರೆ.

ಈ ಬಾರಿ ಧರಣಿ ಆರಂಭಕ್ಕು ಮುನ್ನ ಅಧಿಕಾರಿಗಳ, ಸಚಿವರುಗಳ ಯಾವುದೇ ಭರವಸೆಗಳನ್ನು ನಂಬದೆ ಬೆಂಗಳೂರಿನ ಕಸ ಇಲ್ಲಿಗೆ ತರುವುದನ್ನು ನಿಲ್ಲಿಸುವ ಕುರಿತಂತೆ ಲಿಖಿತವಾಗಿ ಮಾಹಿತಿ ನೀಡಿದರಷ್ಟೆ ಧರಣಿಯನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಹೇಳಿದ್ದಾರೆ.

ನಾಳೆ ಪರಿಸರ ಮಾಲಿನ್ಯ ನಿಯಂತ್ರ ಮಂಡಳಿ ಅಧಿಕಾರಿಗಳು ಎಂಎಸ್ ಜಿಪಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]