ಹೆಚ್.ಐ.ವಿ. ಮತ್ತು ಏಡ್ಸ್ ಸೋಂಕಿತರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಜೀವನ ನಡೆಸಲು ಮಾನಸಿಕವಾಗಿ ಸಿದ್ಧರಾಗಿ: ಕೆ.ಲೀಲಾವತಿ

ಬೆಂ.ಗ್ರಾ.ಜಿಲ್ಲೆ: ಹೆಚ್.ಐ.ವಿ. ಮತ್ತು ಏಡ್ಸ್ ಸೋಂಕಿನಿಂದ ಬಾಧಿತದವರಿಗೆ, ಸರ್ಕಾರದಿಂದ ವೈದ್ಯಕೀಯ ತಪಾಸಣೆ ಮತ್ತು ಔಷಧೀಯ ಸೌಲಭ್ಯಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಹಿಂಜರಿಕೆ ಇಲ್ಲದೇ ಸೋಂಕಿತರು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು, ಉತ್ತಮ ಜೀವನ ನಡೆಸಲು ಮಾನಸಿಕವಾಗಿ ಸಿದ್ಧರಾಗಬೇಕೆಂದು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ಯೋಜನಾ ನಿರ್ದೇಶಕರಾದ ಕೆ.ಲೀಲಾವತಿ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ತಾಲ್ಲೂಕು ಆರೋಗ್ಯಧಿಕಾರಿಗಳು ದೇವನಹಳ್ಳಿ ಹಾಗೂ ಜಿಲ್ಲೆಯ ಇತರೆ ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಇವರ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ‘ಅಸಮಾನತೆಯನ್ನು ಕೊನೆಗೊಳಿಸಿ, ಏಡ್ಸ್ ಕೊನೆಗೊಳಿಸಿ’ ಎಂಬ ಘೋಷವಾಕ್ಯದಡಿ “ವಿಶ್ವ ಏಡ್ಸ್ ದಿನ-2021” ಪ್ರಯುಕ್ತ ಹೆಚ್.ಐ.ವಿ ಮತ್ತು ಏಡ್ಸ್ ಸಭಾ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಹೆಚ್.ಐ.ವಿ. ಮತ್ತು ಏಡ್ಸ್ ರೋಗದಿಂದ ಬಾಧಿತರಾದವರು ತೆಗದುಕೊಳ್ಳಬೇಕಾದ ಕ್ರಮಗಳ ಹಾಗೂ ಸೋಂಕು ಹರಡದಂತೆ ತಡೆಯುವ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಹಾಗೂ ಅರಿವು ಮೂಡಿಸುವುದು ನಮ್ಮೆಲ್ಲರ ಜವಬ್ದಾರಿಯಾಗಿದ್ದು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕ್ರಮ ಕೈಗೊಳ್ಳಬೇಕು ಎಂದರು. 

ಶಾಲಾ ಕಾಲೇಜುಗಳಲ್ಲಿ ಹೆಚ್.ಐ.ವಿ. ಮತ್ತು ಏಡ್ಸ್ ಕುರಿತ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರಲ್ಲಿ ಆರೋಗ್ಯಕರ ಜೀವನ ನಡೆಸುವಂತೆ ತಿಳಿ ಹೇಳಬೇಕು, ಸಮಾಜದಲ್ಲಿ ಸೋಂಕು ಬಾಧಿತ ವ್ಯಕ್ತಿಗೆ ತಾರತಮ್ಯಕ್ಕೆ ಒಳಪಟ್ಟರೆ ಅಂತಹವರು ಕಾನೂನು ನೆರವು ಪಡೆಯಬಹುದುದಾಗಿದೆ ಎಂದು ಸಲಹೆ ನೀಡಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲಾ ಹೆಚ್.ಐ.ವಿ. ಸೋಂಕಿತರಿಗೆ ಜೀವನ ಪಯರ್ಂತ ಉಚಿತವಾಗಿ ಎ.ಆರ್.ಟಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರಲ್ಲದೆ, ಸೋಂಕಿತರು ಯಾವುದೇ ಭಯವಿಲ್ಲದೇ ಚಿಕಿತ್ಸೆಗೆ ಸ್ಪಂದಿಸಿ ಅತ್ಯುತ್ತಮ ಜೀವನವನ್ನು ನಡೆಸಬಹುದು. ಕರಪತ್ರ, ಪೋಸ್ಟರ್, ಬ್ಯಾನರ್, ಜಾಥಾ, ಗೋಡೆ ಬರಹಗಳ ಮೂಲಕ ಜನರಲ್ಲಿ, ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು. ಹೆಚ್.ಐ.ವಿ. ಹಾಗೂ ಏಡ್ಸ್ ಸೋಂಕು ತಡೆಗಟ್ಟಲು ಸಂಬಂಧಿಸಿದ ಇಲಾಖೆ ಅಥವಾ ಸಂಘ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮವನ್ನು ನಡೆಸಬೇಕು ಎಂದು ಹೇಳಿದರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಮಾತನಾಡಿ ಸೋಂಕು ಹೊಂದಿರುವ ವ್ಯಕ್ತಿಯು ಮಾನಸಿಕವಾಗಿ ಧೃತಿಗೆಡದೆ ಚಿಕಿತ್ಸೆ ಪಡೆದುಕೊಳ್ಳಬೇಕು, ಸಮಾಜದಲ್ಲಿ ಎಲ್ಲರಂತೆ ಸೋಂಕಿತರು ಸರಿ ಸಮನಾಗಿ ಬದುಕಲು ಅವಕಾಶ ಕಲ್ಪಿಸುವ ಮುಖಾಂತರ ಅವರಿಗೆ ನೈತಿಕ ಬೆಂಬಲ ಸೂಚಿಸಬೇಕು. ಜಿಲ್ಲೆಯಲ್ಲಿ ಪ್ರತಿವರ್ಷ ನಾಲ್ಕು ತಾಲ್ಲೂಕುಗಳಲ್ಲಿ ಜಾನಪದ ಕಲಾ ತಂಡಗಳಿಂದ ಆಯ್ದ ಪ್ರಮುಖ ಜನನಿಬಿಡ ಹಳ್ಳಿ ಮತ್ತು ನಗರ ಪ್ರದೇಶಗಳಲ್ಲಿ ಹೆಚ್.ಐ.ವಿ. ಹಾಗೂ ಏಡ್ಸ್ ಸೋಂಕು ತಡೆಗಟ್ಟುವ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬದ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ ಅವರು ಮಾತನಾಡಿ ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ಆಕಾಶ್ ಹಾಗೂ ಎಂ.ವಿ.ಜೆ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಪ್ತ ಸಮಾಲೋಚನೆ ಸೌಲಭ್ಯ ಮತ್ತು ಉಚಿತವಾಗಿ ಹೆಚ್.ಐ.ವಿ ಪರೀಕ್ಷೆ ಮಾಡಲಾಗುವುದು. ಸೋಂಕು ಹರಡುವ ವಿಧಾನಗಳನ್ನು ತಿಳಿದುಕೊಳ್ಳುವುದರ ಜೊತೆಗೆ ತಡೆಗಟ್ಟುವ ಮಾರ್ಗವನ್ನು ಎಲ್ಲರೂ ಅರಿತುಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ವೇದಿಕೆ ಕಾರ್ಯಕ್ರಮದ ಮೊದಲಲ್ಲಿ “ವಿಶ್ವ ಏಡ್ಸ್ ದಿನಾಚರಣೆ” ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕೆಂಪು ವರ್ಣದ ಬಲೂನ್‍ಗಳನ್ನು ಬಾನೆತ್ತರಕ್ಕೆ ಆರಿಸಲಾಯಿತು. ವೇದಿಕೆ ಕಾರ್ಯಕ್ರಮದಲ್ಲಿ ಸೋಂಕು ಕುರಿತು ಅರಿವು ಮೂಡಿಸುವಂತಹ ಕಿರು ನಾಟಕಗಳನ್ನು ಪ್ರದರ್ಶಿಸಲಾಯಿತು. ಏಡ್ಸ್ ನಿಯಂತ್ರಣದ ಕುರಿತು ಜಾಗೃತಿ ಮೂಡಿಸುವ ಸಿಬ್ಬಂದಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಿಬ್ಬಂದಿಯ ವರ್ಗದವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಡಾ.ಶಕೀಲಾ.ಎನ್, ಆಕಾಶ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಕಮ್ಯುನಿಟಿ ಮೆಡಿಸನ್ ಮುಖ್ಯಸ್ಥರಾದ ಡಾ.ಸುನಿಲ್ ಕುಮಾರ್ ದೊಡ್ಡೇರಿ, ಎಸ್.ವಿ.ವೈ.ಎಂ. ತಾಂತ್ರಿಕ ನಿರ್ದೇಶಕ ಡಾ.ದೀಪಕ್‍ಮೂರ್ತಿ.ಹೆಚ್.ಜೆ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಚತ್ ಅಧ್ಯಕ್ಷರಾದ ಡಾ ಹುಲಿಕಲ್ ನಟರಾಜ್, ಕುಷ್ಠರೋಗ ನಿವಾರಣಾಧಿಕಾರಿ ಡಾ.ಶಾಂತಲಾ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಧಮೇಂದ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!