ಚೆನ್ನೈ: ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಊಟಿಯಲ್ಲಿ ಪತನಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಸೇನಾ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್, ಅವರ ಸಿಬಂದಿಗಳು ಹಾಗೂ ಕುಟುಂಬ ಸದಸ್ಯರು ಸೇರಿದಂತೆ 9 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿ ತಿಳಿಸಿದೆ.
ಘಟನೆಯಲ್ಲಿ ಬಿಪಿನ್ ರಾವತ್ ಸೇರಿದಂತೆ ಮೂವರನ್ನು ರಕ್ಷಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಐದಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದೆ. ದುರಂತದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದನ್ನು ಇನ್ನಷ್ಟೇ ನಿಖರವಾಗಿ ತಿಳಿದುಬರಬೇಕಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….