ದಿನ ಭವಿಷ್ಯ: ಬುಧವಾರ, ಡಿಸೆಂಬರ್ 29, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಲ್ಲಿ ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ

ಮೇಷ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ವೃಷಭ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವುದು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.

ಮಿಥುನ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವುದು. ಸಂಬಂದಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.

ಕಟಕ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.

ಸಿಂಹ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವುದು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು.

ಕನ್ಯಾ: ಶುಭಫಲಗಳು ಕಂಡುಬರುವುದು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು.

ತುಲಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.

ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.

ಧನಸ್ಸು: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು.

ಮಕರ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ.

ಕುಂಭ: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ಮೀನ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು.

ತಿಥಿ: ದಶಮಿ 

ನಕ್ಷತ್ರ: ಸ್ವಾತಿ ನಕ್ಷತ್ರ 

ರಾಹುಕಾಲ: 12:26 ರಿಂದ 01:51

ಗುಳಿಕಕಾಲ: 11:00 ರಿಂದ 12:26

ಯಮಗಂಡಕಾಲ: 08:08 ರಿಂದ 09:34

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!