ದೊಡ್ಡಬಳ್ಳಾಪುರ: ಬಿಬಿಎಂಪಿ ತ್ಯಾಜ್ಯ ವಿರುದ್ಧದ ಹೋರಾಟಕ್ಕೆ ವಿವಿಧ ಸಂಘಟನೆಗಳ ಬಲ

ದೊಡ್ಡಬಳ್ಳಾಪುರ: ತಾಲೂಕಿನ ಚಿಗರೇನಹಳ್ಳಿ ಬಳಿಯ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕ ಎಂಎಸ್‍ಜಿಪಿ ವಿರುದ್ಧ ನಡೆಯುತ್ತಿದ್ದ ಹೋರಾಟ ಮತ್ತೊಂದು ತಿರುವ ಪಡೆದಿದ್ದು, ಎಂಎಸ್‍ಜಿಪಿಯನ್ನು ತಾಲೂಕಿನಿಂದ ಶಾಶ್ವತವಾಗಿ ಒದ್ದೋಡಿಸುವಲ್ಲಿ ವಿವಿಧ ಸಂಘಟನೆಗಳು ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಂಜೆ ನಡೆದ ಸಭೆಯಲ್ಲಿ ಒಕ್ಕೋರಲಿನ ಬೆಂಬಲ ಘೋಷಿಸಿವೆ.

ನವ ಬೆಂಗಳೂರು ಹೋರಾಟ ಸಮಿತಿ 13 ದಿನಗಳ ನಿರಂತರ ಹೋರಾಟವನ್ನು ಜಿಲ್ಲಾ ಉಸ್ತುವಾರಿ ಸಚಿವರ ಭರವಸೆಯಂತೆ ತಾತ್ಕಾಲಿಕವಾಗಿ ಹೋರಾಟವನ್ನು ಹಿಂದಕ್ಕೆ ಪಡೆದಿದ್ದವು. ಆದರೆ ಸರ್ಕಾರ ಮಾತಿಗೆ ತಪ್ಪಿದ ಹಿನ್ನೆಲೆ ಪೊಲೀಸ್ ಬೆಂಗಾವಲಿನಲ್ಲಿ ಮತ್ತೆ ಕಸವನ್ನು ಸುರಿಯಲು ಆರಂಭ ಮಾಡಿರುವ ಹಿನ್ನೆಲೆ ಮತ್ತೆ ಹೋರಾಟ ಹೊಸ ತಿರುವಿನೊಂದಿಗೆ ಚುರುಕು ಪಡೆದುಕೊಳ್ಳುತ್ತಿದೆ.

ಸಭೆಯಲ್ಲಿ ಮಾತನಾಡಿದ ನವ ಬೆಂಗಳೂರು ಹೋರಾಟ ಸಮಿತಿ ಗೌರವಾಧ್ಯಕ್ಷ ಸಾರಥಿ ಸತ್ಯಪ್ರಕಾಶ್, ಅದಿವೇಶನ ಮುಗಿದ ನಂತರ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ಕಸ ನಿಲ್ಲಿಸುವ ನಿರ್ಧಾರದ ಕುರಿತು ಮಾತನಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜು ಭರವಸೆ ನೀಡದ ನಂತರ ಹೋರಾಟವನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿತ್ತು. ಆದರೆ ಮಾತಿಗೆ ತಪ್ಪಿರುವ ಸರ್ಕಾರ ಕಸವನ್ನು ಮತ್ತೆ ಸುರಿಯಲು ಆರಂಭಿಸಿದೆ. ಈ ನಿಟ್ಟಿನಲ್ಲಿ ಈ ವ್ಯಾಪ್ತಿಯ 100ಕ್ಕೂ ಹೆಚ್ಚು ಗ್ರಾಮಗಳ ಜನ ಆಕ್ರೋಶಕ್ಕೆ ಒಳಗಾಗಿದ್ದು, ತಮ್ಮ ಮನೆ ಮಕ್ಕಳು, ಕುರಿ, ಮೇಕೆ, ಜಾನುವಾರಗಳೊಂದಿಗೆ ಬೀದಿಗೆ ಇಳಿದು ಹೋರಾಟಕ್ಕೆ ಸಜ್ಜಾಗಿದ್ದಾರೆ. ಈಗಲೂ ಸರ್ಕಾರ ಎಚ್ಚುತ್ತುಕೊಳ್ಳದಿದ್ದರೆ. ಇದಕ್ಕೆ ನೇರ ಹೊಣೆ ಸರ್ಕಾರ, ಜಿಲ್ಲಾಡಳಿ, ಬಿಬಿಎಂಪಿ ಕಮೀಷನರ್ ಸರ್ಫರೋಜ್ ಖಾನ್ ನೇರ ಹೊಣೆಯಾಗಿರುತ್ತಾರೆ ಎಂದು ನೇರ ಎಚ್ಚರಿಕೆ ನೀಡಿದರು. 

ಸಚಿವ ಮಾಧುಸ್ವಾಮಿ ಹೇಳಿಕೆಗೆ ಆಕ್ರೋಶ: ಅಧಿವೇಶನದಲ್ಲಿ ಶಾಸಕ ಟಿ.ವೆಂಕಟರಂಣಯ್ಯ ನವರು ಎಂಎಸ್‍ಜಿಪಿ ಘಟಕದಿಂದಾಗುತ್ತಿರುವ ಪರಿಣಾಮವನ್ನು ವಿವರವಾಗಿ ವಿವರಿಸಿ ಕಸವನ್ನು ನಿಲ್ಲಿಸುವಂತೆ ಆಗ್ರಹಿದ್ದಾರೆ. ಆದರೆ ಇದಕ್ಕೆ ನಾನು ಕಸ ವಿಲೇವಾರಿ ಘಟಕವನ್ನು ವೀಕ್ಷಣೆ ಮಾಡಿದ್ದೇನೆ ಮಾವತ್ತೂರು ಕೆರೆಗೆ ವಿಷಯುಕ್ತ ನೀರು ಹೊಗಿಲ್ಲ ಎಂದು ಹೇಳಿರುವ ಅವರಿಗೆ ತ್ಯಾಜ್ಯ ಘಟಕ ಎಲ್ಲಿದೆ ಎನ್ನುವುದೇ ಗೊತ್ತಿಲ್ಲ. ತ್ಯಾಜ್ಯ ವಿಲೇವಾರಿ ಎಂಬುದು ಒಂದು ದೊಡ್ಡ ಮಾಫಿಯಾ ಮಾಡಿಕೊಂಡಿರುವ ಇವರು ಬೆಂಗಳೂರಿನಲ್ಲಿ ನಾಯಿ ಕಚ್ಚಿದರೆ ಸಭೆ ಸಭೆ ಮೇಲೆ ಸೇರುತ್ತಾರೆ. ಅಲ್ಲಿನ ತ್ಯಾಜ್ಯ ನಮ್ಮನ್ನು ಕೊಲ್ಲುತ್ತಿದ್ದರು ಬೆಂಗಳೂರಿನ ತ್ಯಾಜ್ಯವನ್ನು ನಮ್ಮ ಗ್ರಾಮೀಣ ಪ್ರದೇಶಕ್ಕೆ ಸುರಿದು ನಮ್ಮನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಭೆಯಲ್ಲಿ ಕನ್ನಡ ಪಕ್ಷ ಅಧ್ಯಕ್ಷ ಸಂಜೀವ್‍ನಾಯಕ್, ಕನ್ನಡ ಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್, ಭಕ್ತರಹಳ್ಳಿ ಗ್ರಾಪಂ ಅಧ್ಯಕ್ಷ ಸಿದ್ದಲಿಂಗಯ್ಯ, ನವ ಬೆಂಗಳೂರು ಹೋರಾಟ ಸಮಿತಿ ಅಧ್ಯಕ್ಷ ಜಿ.ಎನ್.ಪ್ರದೀಪ್, ಕರವೇ ನಾರಾಯಣಗೌಡ ಬಣದ ರಾಜ್ಯ ಕಾರ್ಮಿಕ ಸಂಘದ ಅಧ್ಯಕ್ಷ ಹನುಮಂತರೆಡ್ಡಿ, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ತಾಲೂಕು ಅಧ್ಯಕ್ಷ ಡಿ.ಎನ್.ಮಂಜುನಾಥ್, ಕರವೇ ಕನ್ನಡಿಗರ ಬಣ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್, ತಾಲೂಕು ಅಧ್ಯಕ್ಷ ತರಿದಾಳ್ ಶ್ರೀನಿವಾಸ್, ವಕೀಲರಾದ ಅಂಜನೇಗೌಡ, ಲೋಕೇಶ್, ಕಸಾಪ ಮಾಜಿ ತಾ.ಅಧ್ಯಕ್ಷೆ ಪ್ರಮೀಳಾ ಮಹದೇವ್, ಕನ್ನಡ ಪರ ಸಂಘನೆಗಳ ಒಕ್ಕೂಟದ ಅಗ್ನಿ ವೆಂಕಟೇಶ್, ಎ.ನಂಜಪ್ಪ ಸೇರಿದಂತೆ ಅನೇಕ ಸಂಘಟನೆಗಳ ಮುಂಖಡರು ಹಾಜರಿದ್ದು ಮುಂದಿನ ಹೋರಾಟದ ರೂಪುರೇಷೆಗಳ ತಯಾರು ಮಾಡುವಲ್ಲಿ ಹಲವು ಸೂಚನೆಗಳನ್ನು ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!