
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಖ್ಯಾತ ಜ್ಯೋತಿಷಿ ಹಾಗೂ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಆನಂದ್ ಗುರೂಜಿ ಸೋಮವಾರ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಬ್ರಹ್ಮರಥೋತ್ಸವದಂದು ಭಾಗವಹಿಸಲು ಸಾಧ್ಯವಾಗದ ಕಾರಣ ಇಂದು ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ರವಿಮಾವಿನ ಕುಂಟೆ, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ) ಅಧ್ಯಕ್ಷ ವಿದ್ವಾನ್ ಎಸ್. ನವೀನ್ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….