ಇಂದು ವೈಕುಂಠ ಏಕಾದಶಿ: ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ / ಭಕ್ತರಿಗೆ ನಿರ್ಬಂಧ

ದೊಡ್ಡಬಳ್ಳಾಪುರ: ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ತಿರುಪತಿ ಸೇರಿದಂತೆ ದೇಶದ ವಿವಿಧ ವೆಂಕಟೇಶ್ವರ ದೇಗುಲಗಳಲ್ಲಿ ವಿಶೇಷ ಅಲಂಕಾರ, ಪೂಜಾ ಹಾಗೂ ಧಾರ್ಮಿಕ ವಿಧಿವಿಧಾನ ನಡೆಯಲಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಭಕ್ತರಿಗೆ ದೇವಾಲಯ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಪ್ರತಿ ಏಕಾದಶಿಗಳಿಗಿಂತಲೂ ವೈಕುಂಠ ಏಕಾದಶಿ ವಿಶೇಷವಾದದ್ದು. ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದಂದು ಬರುವ ಏಕಾದಶಿ ಅತ್ಯಂತ ವಿಶೇಷವಾದದ್ದು. ಈ ದಿನದಂದು ವೈಕುಂಠ ಬಾಗಿಲು ತೆರೆದಿರುವ ದಿನ ಎಂಬ ಪ್ರತೀತಿ ಇರುವುದರಿಂದ ಅಂದು ವಿಷ್ಣು/ ವೆಂಕಟೇಶ್ವರ ದೇವಾಲಯ ದರ್ಶನ ಅತ್ಯಂತ ಮಹತ್ವ ಪಡೆದುಕೊಂಡಿದೆ. ಈ ದಿನ ವಿಷ್ಣು ದೇವಾಲಯಗಳಲ್ಲಿ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.

ವೈಕುಂಠ ಏಕಾದಶಿ ಅಂದರೇನು: ವೈಕುಂಠ ಏಕಾದಶಿ ಸನಾತನ ಧರ್ಮಾನುಯಾಯಿಗಳು ಶ್ರದ್ಧಾ ಭಕ್ತಿಗಳಿಂದ ವಿಷ್ಣುವನ್ನು ಪೂಜಿಸುವ ಮಹತ್ವದ ದಿನ. ಏಕಾದಶಿ ಅಂದರೆ ಹನ್ನೊಂದು ಎಂಬ ಅರ್ಥವಿದೆ. ಒಂದು ತಿಂಗಳಲ್ಲಿ 2 ಏಕಾದಶಿಗಳಿರುತ್ತವೆ. ಈ ದಿನದಂದು ಉಪವಾಸವಿದ್ದು, ವ್ರತಾಚರಣೆ ಮಾಡುವ ಸಂಪ್ರದಾಯವಿದೆ. ಇನ್ನೂ ಕೆಲವರು ಏಕಾದಶಿಯ ದಿನದಂದು ಮೌನ ವ್ರತಾಚರಣೆ ಮಾಡುತ್ತಾರೆ. 

ಪ್ರತಿ ಏಕಾದಶಿಗಳಿಗಿಂತಲೂ ವೈಕುಂಠ ಏಕಾದಶಿ ವಿಶೇಷವಾದದ್ದು. ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದಂದು ಬರುವ ಏಕಾದಶಿ ಅತ್ಯಂತ ವಿಶೇಷವಾದದ್ದು. ಈ ದಿನದಂದು ವೈಕುಂಠ (ವಿಷ್ಣುಲೋಕ, ಸ್ವರ್ಗದ) ಬಾಗಿಲು ತೆರೆದಿರುವ ದಿನ ಎಂಬ ಪ್ರತೀತಿ ಇರುವುದರಿಂದ ಅಂದು ವಿಷ್ಣು/ ವೆಂಕಟೇಶ್ವರ ದೇವಾಲಯ ದರ್ಶನ ಅತ್ಯಂತ ಮಹತ್ವ ಪಡೆದುಕೊಂಡಿದೆ.  ಈ ದಿನ ವಿಷ್ಣು ದೇವಾಲಯಳಲ್ಲಿ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. 

ವೈಕುಂಠ ಎಂಬ ಹೆಸರಿನ ಅರ್ಥ: ಕುಂಠ ಎಂದರೆ ಅಸಾಮರ್ಥ್ಯ, ವಿಕುಂಠ ಎಂದರೆ ಬದುಕಿನ ನಡೆಯಲ್ಲಿ ಎಂದೂ ಜಾರದವರು, ಅಂದರೆ ಸಾಕ್ಷಾತ್ಕಾರವಾಗಿ ಮುಕ್ತಿ ಪಡೆದವರು ಎಂದರ್ಥ.  ಬದುಕಿನಲ್ಲಿ ಎದುರಾಗುವ ಅಸಾಮರ್ಥ್ಯಗಳನ್ನು ಹೋಗಲಾಡಿಸುವವನು ಎಂಬುದು ಈ ಹೆಸರಿಗೆ ಇರುವ ಅರ್ಥವಾಗಿದೆ.

ಶರೀರಮಾಧ್ಯಂ ಖಲು ಧರ್ಮಸಾಧನಂ ಎಂಬ ಮಾತಿನಂತೆ ಯಾವುದೇ ಒಳ್ಳೆಯ, ಧಾರ್ಮಿಕ ಕೆಲಸಗಳನ್ನು ಮಾಡಬೇಕಿದ್ದರೂ ಅದಕ್ಕೆ ದೇಹ ಸದೃಢವಾಗಿರುವುದು ಅತ್ಯಗತ್ಯ. ಏಕಾದಶಿವ್ರತ ಮಾಡುವುದರಿಂದ ದೇಹದ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಿಕೊಳ್ಳುವ ಮೂಲಕ ಜೀವನದಲ್ಲಿ ಎದುರಾಗುವ ಅಸಾಮರ್ಥ್ಯಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಬಹುದು,  ಈ ಮೂಲಕ ಪರಮಪದವನ್ನು ಸೇರಬಹುದು ಎಂಬುದು ವೈಕುಂಠ ಏಕಾದಶಿಯ ವ್ರತಾಚರಣೆಯ ಗೂಢಾರ್ಥವಾಗಿದೆ.

ವೈಕುಂಠ ಏಕಾದಶಿಯ ಕಥೆ: ನಂದಗೋಪ ಶ್ರೀಕೃಷ್ಣನ ಸಾನಿಧ್ಯದಲ್ಲಿ, ಏಕಾದಶಿಯ ಉಪವಾಸ ಹಾಗೂ ದ್ವಾದಶಿಯ ಪಾರಣೆಗಳನ್ನು ತಪ್ಪದೆ ಆಚರಿಸುತ್ತಿದ್ದ ಒಮ್ಮೆ ಏಕಾದಶಿವ್ರತ ಆಚರಿಸಿ, ಮರುದಿನ ದ್ವಾದಶಿ ಬಹು ಸ್ವಲ್ಪಕಾಲ ಮಾತ್ರ ಇದ್ದುದ್ದರಿಂದ ಬೆಳಗಿನ ಜಾವಕ್ಕೆ ಮೊದಲು ಯಮುನಾನದಿಯಲ್ಲಿ ಸ್ನಾನಕ್ಕಿಳಿದ. ಅದು ರಾಕ್ಷಸರ ಸಂಚಾರದ ಕಾಲವಾದ್ದರಿಂದ ವರುಣದೇವನ ಸೇವಕನಾದ ರಾಕ್ಷಸ, ನಂದಗೋಪನನ್ನು ವರುಣನ ಬಳಿಗೆ ಎಳೆದೊಯ್ದನು. ಇತ್ತ ನಂದನು ಎಷ್ಟು ಹೊತ್ತಾದರೂ ಸ್ನಾನಕ್ಕೆ ಹೋದವನು ಬಾರದಿರಲು, ಗೋಪಾಲಕುಲದವರೆಲ್ಲಾ ಬಲರಾಮಕೃಷ್ಣರಿಗೆ ಈ ಸುದ್ದಿ ಮುಟ್ಟಿಸಿದರು. ಶ್ರೀಕೃಷ್ಣ ತಂದೆಯನ್ನು ಕರೆತರುವುದಾಗಿ ಹೇಳಿ, ವರುಣಲೋಕಕ್ಕೆ ಬಂದನು. ದೇವದೇವನಾದ ಶ್ರೀಕೃಷ್ಣನಿಗೆ ನಮಿಸಿದ ವರುಣ ತನ್ನ ಸೇವಕನಿಂದಾದ ಅಪರಾಧ ಮನ್ನಿಸಬೇಕೆಂದು ಪ್ರಾರ್ಥಿಸಿದ. ಶ್ರೀಕೃಷ್ಣ ವರುಣನನ್ನು ಆಶೀರ್ವದಿಸಿ ತಂದೆಯೊಡನೆ ಗೋಕುಲಕ್ಕೆ ಹಿಂದಿರುಗಿದನು. 

ನಂದಗೋಪನಿಗೆ ಪರಮಾನಂದವಾಯಿತು. ವರುಣನ ಲೋಕದ ವೈಭವ ಹಾಗೂ ತನ್ನ ಮಗನಾದ ಶ್ರೀಕೃಷ್ಣನಿಗೆ ಸಿಕ್ಕ ಭವ್ಯಸ್ವಾಗತ ಮುಂತಾದವುಗಳನ್ನು ಎಳೆಎಳೆಯಾಗಿ ಬಣ್ಣಿಸಲಾಗಿ ಗೋಪಾಲರಿಗೆಲ್ಲಾ ಹೆಮ್ಮೆ ಎನಿಸಿತು ಆದರೆ ಶ್ರೀಕೃಷ್ಣ ಸಾಕ್ಷತ್ ಪರಮೇಶ್ವರನೇ ನಿಜ ಆದರೆ ಅವನ ನಿಜರೂಫ ಅರಿಯಲಾರೆವು ಎಂದು ಪರಿತಪಿಸಿದರು. ಇದನ್ನರಿತ ಕೃಷ್ಣ, ಎಲ್ಲರಿಗೂ ಯಮುನಾ ನದಿಯಲ್ಲಿದ್ದ ಬ್ರಹ್ಮಕುಂಡವೆಂಬ ಮಡುವಿನಲ್ಲಿ ಮುಳುಗಿಬರುವಂತೆ ತಿಳಿಸಿದ, ಕೃಷ್ಣ ಹೇಳಿದಂತೆ ಮಾಡಿದ ಅವರಿಗೆ  ವೈಕುಂಠದ ದರ್ಶನವಾಯಿತು. ಅವರ ಮನಸ್ಸು ತೃಪ್ತಿಯನ್ನು ಹೊಂದಿತು, ಶ್ರೀಕೃಷ್ಣನು ಪರದೈವವೆಂಬ ಅವರ ನಂಬಿಕೆ ಸ್ಥಿರವಾಯಿತು ಎಲ್ಲರೂ ಧನ್ಯರಾದರು ಬಹುಶಃ ಈ ಕಾರಣಕ್ಕೆ ಏಕಾದಶಿಯನ್ನು ವೈಕುಂಠಏಕಾದಶಿ ಎಂದು ಕರೆದಿರಬಹುದೆಂಬ ನಂಬಿಕೆ ಹಲವರಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!