ದೊಡ್ಡಬಳ್ಳಾಪುರ: ಕರೊನಾತಂಕದ ನಡುವೆಯೂ ಸಂಕ್ರಾಂತಿಗೆ ಸಡಗರದ ಸಿದ್ಧತೆ

ದೊಡ್ಡಬಳ್ಳಾಪುರ: ಸಂಕ್ರಾಂತಿ ಹಬ್ಬಕ್ಕಾಗಿ ನಗರಕ್ಕೆ ಬಂದಿದೆ ರಾಶಿ ರಾಶಿ ಕಬ್ಬು. ಮತ್ತೊಂದೆಡೆ ಕಡಲೆಕಾಯಿ, ಅವರೆಕಾಯಿ, ಗೆಣಸು ಕೂಡ ಆಗಮಿಸುತ್ತಿದ್ದು, ಎಲ್ಲೆಡೆ ಸಂಕ್ರಾಂತಿಯ ಸುಗ್ಗಿ ಮನೆಮಾಡಿದೆ.

ಸಂಕ್ರಾಂತಿ ಹಬ್ಬಕ್ಕೆ ಎರಡು ದಿನ ಬಾಕಿ (ಜ.15)ಯಿರುವಾಗಲೇ ಖರೀದಿ ಆರಂಭವಾಗಿದೆ. ಒಂದೆಡೆ ಕಡಲೆಕಾಯಿ, ಗೆಣಸು, ಅವರೆಕಾಯಿಗಳ ಮಾರಾಟ. ಮತ್ತೊಂದೆಡೆ ಸಿದ್ಧ ಎಳ್ಳು-ಬೆಲ್ಲಗಳ ಘಮ, ಸಕ್ಕರೆ ಅಚ್ಚುಗಳ ಆಕರ್ಷಣೆ, ಎಳ್ಳು-ಬೆಲ್ಲ ತುಂಬಿಕೊಡುವ ಬಗೆ ಬಗೆಯ ಗಿಫ್ಟ್‍ಗಳು… ಖರೀದಿಯ ಸಂಭ್ರಮದ ಭರಾಟೆ ಆರಂಭವಾಗಿದೆ.

ಹಬ್ಬದ ಸಂಭ್ರಮಕ್ಕೆ ಈ ಬಾರಿ ಅವರೆಕಾಯಿ, ಕಡಲೆಕಾಯಿಯ ಆಗಮನದ ಭರಾಟೆ ಕೊಂಚ ಕಡಿಮೆಯಾದೆ. ಇವೆರಡೂ ಸ್ವಲ್ಪ ದುಬಾರಿಯಾಗಿವೆ.  ಎಳ್ಳು-ಬೆಲ್ಲಗಳ ಮಿಶ್ರಣವೂ ಅಂಗಡಿಗಳಿಗೆ ಬಂದಿದೆ. ಶನಿವಾರ ಸಂಕ್ರಾಂತಿ ಹಬ್ಬವಿದೆ. ಈ ಬಾರಿ ಹಬ್ಬದ ಆಚರಣೆಗೆ ವೀಕೆಂಡ್ ಕರ್ಫ್ಯೂ ಅಡ್ಡಿಯಾಗಲಿದೆ. ಆದರೂ ಮನೆ- ಮನೆಗಳಲ್ಲಿ ಹಬ್ಬವನ್ನು ಆಚರಿಸಿಕೊಳ್ಳಲು ನಗರದ ಜನ ಸಜ್ಜಾಗಿದ್ದಾರೆ.

ಮಾರುಕಟ್ಟೆಗಳಿಗೆ ಲೋಡ್‍ಗಟ್ಟಲೆ ಕಬ್ಬು ಬಂದಿದೆ. ಹೇಳಿ ಕೇಳಿ ಸಂಕ್ರಾಂತಿ ಹಬ್ಬಕ್ಕೆ ಕಬ್ಬು ಬಹುಬೇಡಿಕೆಯುಳ್ಳದ್ದಾಗಿದೆ. ಹೀಗಾಗಿ ಕರಿಕಬ್ಬು, ಬಿಳಿ ಕಬ್ಬು ಇತ್ಯಾದಿಗಳು ಆಗಮಿಸಿವೆ.

ಈ ಬಾರಿ ರಾಜ್ಯಾದ್ಯಂತ ಒಳ್ಳೆಯ ಮಳೆಯಾಗಿದೆ. ಎಲ್ಲೆಡೆ ಕಬ್ಬಿನ ಬೆಳೆಯೂ ಉತ್ತಮವಾಗಿದೆ. ಹೀಗಾಗಿ, ಈ ಬಾರಿ ರಾಜ್ಯದಲ್ಲಿ ಕಬ್ಬಿನ ಇಳುವರಿ ಶೇ.20ರಷ್ಟು ಹೆಚ್ಚಾಗಿದೆ. ಹೀಗಾಗಿ, ಹಬ್ಬಕ್ಕೆ ಕಬ್ಬಿನ ಕೊರತೆ ಇರುವುದಿಲ್ಲ. ಆದರೆ, ಅಧಿಕ ಮಳೆಯಿಂದಾಗಿ ಈ ಬಾರಿ ಕಡಲೆಕಾಯಿ, ಅವರೆಕಾಯಿ ಬೆಳೆಗೆ ಹಾನಿ ಉಂಟಾಗಿದೆ. ಉತ್ತಮ ಇಳುವರಿಯಿಲ್ಲ. ಹೀಗಾಗಿ, ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಬಾರದ ಕಾರಣ ಬೆಲೆಗಳು ಕೂಡ ಕೆ.ಜಿ.ಗೆ 80-100 ರೂ. ನಂತೆ ಮಾರಾಟವಾಗುತ್ತಿವೆ. ಸಿಹಿ ಗೆಣಸು 20-30ರೂ.ಗೆ ಮಾರಾಟವಾಗುತ್ತಿದೆ.

ಎಳ್ಳು-ಬೆಲ್ಲ ಮಿಶ್ರಣ: ಮಾರುಕಟ್ಟೆಯಲ್ಲಿ ಸಿದ್ಧ ಎಳ್ಳು-ಬೆಲ್ಲ ಕೆ.ಜಿ.ಗೆ 250-300 ರೂ.ಗೆ ಮಾರಾಟವಾಗುತ್ತಿದೆ. ಸಂಕ್ರಾಂತಿಗೆ ಎಳ್ಳು, ಬೆಲ್ಲ, ಒಣ ಕೊಬ್ಬರಿ, ಕಡ್ಲೆಬೀಜ, ಹುರಿಗಡಲೆಗಳ ಮಿಶ್ರಣ, ಕಬ್ಬು, ಸಕ್ಕರೆ ಅಚ್ಚುಗಳೂ ಆಗಮಿಸಿವೆ.

ಸಂಕ್ರಾಂತಿ ದಿನವೇ ಕರ್ಫ್ಯೂ: ಶನಿವಾರ ಸಂಕ್ರಾಂತಿ ಹಬ್ಬ. ಆದರೆ ವಾರಾಂತ್ಯದಲ್ಲಿ ಸರಕಾರ  ಕರ್ಫ್ಯೂ ವಿಧಿಸಿರುವುದರಿಂದ ಹಬ್ಬದ ಆಚರಣೆಗೆ ತೊಡಕಾಗುವ ಸಾಧ್ಯತೆಯಿದೆ. ಮಾರಾಟಗಾರರು ಹಬ್ಬದ ಸಾಮಗ್ರಿಗಳನ್ನು ಖರೀದಿಸಿ ತಂದರೆ, ಅಂದು ವ್ಯಾಪಾರಕ್ಕೆ ಅವಕಾಶ ಸಿಕ್ಕಿದರೂ ಕೂಡ ಗ್ರಾಹಕರು ಬರಬೇಕಲ್ಲವೇ ಎಂಬುದು ವ್ಯಾಪಾರಿಗಳ ಆತಂಕವಾಗಿದೆ. ಹೊರಗಡೆ ಹೋಗದೆ ಅತ್ಯಂತ ಸರಳವಾಗಿ ಸಂಕ್ರಾಂತಿ ಆಚರಿಸಲು ಜನ ಮಾನಸಿಕವಾಗಿ ಸಿದ್ಧರಾಗುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ (Accident) ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಎಪಿಎಂಸಿ

[ccc_my_favorite_select_button post_id="115491"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!