ದೊಡ್ಡಬಳ್ಳಾಪುರ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಒಡಹುಟ್ಟಿದ ತಂಗಿಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ, ಅಣ್ಣನೇ ಹತ್ಯೆ ಮಾಡಿರುವ ಘಟನೆ ತಾಲೂಕಿನ ಗುಂಡ್ಲಹಳ್ಳಿ ಬಳಿಯ ಬೊಮ್ಮನಹಳ್ಳಿಯಲ್ಲಿ ನಡೆದಿದೆ ಎಂದು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೃತ ಮಹಿಳೆಯನ್ನು ಸುಶೀಲಮ್ಮ (40) ಎಂದು ಗುರುತಿಸಲಾಗಿದ್ದು, ಜಮೀನು ಮಾರಿದ್ದ ಹಣದ ವಿಚಾರವಾಗಿ ಅಣ್ಣ,ತಂಗಿಯ ನಡುವೆ ಜಗಳ ನಡೆದು ಮೃತಳ ಅಣ್ಣ ನಾಗರಾಜ್ (45) ಎನ್ನುವವರು ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆಂದು ದೂರು ನೀಡಲಾಗಿದೆ.
ಘಟನೆಯಿಂದಾಗಿ ಗ್ರಾಮದ ಜನತೆ ಆತಂಕಕ್ಕೆ ಒಳಗಾಗಿದ್ದು, ಸ್ಥಳಕ್ಕೆ ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಜ್ಞಾನಮೂರ್ತಿ ಅವರು ಸ್ಥಳ ಪರಿಶೀಲನೆ ನಡೆಸಿದ್ದು, ಆರೋಪಿ ನಾಗರಾಜ್ನ ಬಂಧಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….