ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಶೇ.50ಕ್ಕೆ ಸಹಾಯಧನ ಹೆಚ್ಚಳ: ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ

ಬೆಂ.ಗ್ರಾ.ಜಿಲ್ಲೆ: ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಪಿಎಂ-ಎಫ್ಎಂಇ ಯೋಜನೆಯ “ಒಂದು ಜಿಲ್ಲೆ ಒಂದು ಉತ್ಪನ್ನ” ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಕೋಳಿ ಸಂಸ್ಕರಣಾ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ” ಘಟಕಗಳು, ವ್ಯಕ್ತಿ/ ಸಂಸ್ಥೆಗಳು, ಎಫ್.ಪಿ.ಓ ಗಳನ್ನು ಉದ್ದಿಮೆದಾರರಾಗಿ ರೂಪಿಸಲು ಯೋಜಿಸಲಾಗಿದ್ದು, ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಶೇ‌.50 ಕ್ಕೆ ಸಹಾಯಧನವನ್ನು ಹೆಚ್ಚಳ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ತಿಳಿಸಿದ್ದಾರೆ.

ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ‌ ಅತಿ‌ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳ ಸಾಂಸ್ಥೀಕರಣಗೊಳಿಸುವಿಕೆ ಯೋಜನೆ ( PM-FME) ಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಹೊಸ ಉದ್ದಿಮೆ ಸ್ಥಾಪಿಸಲು/ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಕರಣಾ ಘಟಕವನ್ನು ‌ಉನ್ನತೀಕರಿಸಲು‌ ಅವಕಾಶವಿದ್ದು, “ಒಂದು ಜಿಲ್ಲೆ ಒಂದು ಉತ್ಪನ್ನ” ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಕೋಳಿ ಸಂಸ್ಕರಣಾ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ” ಘಟಕಗಳು, ವ್ಯಕ್ತಿ/ ಸಂಸ್ಥೆಗಳು, ಎಫ್.ಪಿ.ಓ ಗಳನ್ನು ಉದ್ದಿಮೆದಾರರಾಗಿ ರೂಪಿಸಲು ಯೋಜಿಸಲಾಗಿದೆ.

ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಈವರೆಗೆ ಕೇಂದ್ರ ಸರ್ಕಾರದಿಂದ ಶೇ‌. 35 ರಷ್ಟು ಸಹಾಯಧನವನ್ನು ನೀಡಲಾಗುತ್ತಿತ್ತು. ಪ್ರಸ್ತುತ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರವು ಶೇ. 15 ರಷ್ಟು ಹೆಚ್ಚುವರಿ (ರೂ. 10 ಲಕ್ಷದ ಗರಿಷ್ಟ ಮಿತಿ) ಸಹಾಯಧನವನ್ನು ನೀಡಲಿದೆ.

ಈ‌ ಯೋಜನೆಯು 2020-21ರಿಂದ ಪ್ರಾರಂಭವಾಗಿ‌ 2024-25ರವರೆಗೆ ಅನುಷ್ಠಾನಗೊಳ್ಳಲಿದೆ.

ಯೋಜನೆಯ ಬೆಂಬಲ/ ಸಹಾಯಧನ ವೈಯಕ್ತಿಕ/ ವ್ಯಕ್ತಿಗತ ಅತಿ ಸಣ್ಣ ಉದ್ದಿಮೆಗಳಿಗೆ ಈವರೆಗೆ ಕೇಂದ್ರ ಸರ್ಕಾರದಿಂದ ಶೇ‌. 35 ರಷ್ಟು ಸಹಾಯಧನವನ್ನು ನೀಡಲಾಗುತ್ತಿತ್ತು. ಪ್ರಸ್ತುತ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರವು ಶೇ. 15 ರಷ್ಟು ಹೆಚ್ಚುವರಿ (ರೂ. 10 ಲಕ್ಷದ ಗರಿಷ್ಟ ಮಿತಿ) ಸಹಾಯಧನವನ್ನು ನೀಡಲಿದೆ.

ಆಸಕ್ತ ವೈಯಕ್ತಿಕ ಫಲಾನುಭವಿಗಳು, ಸಂಘ‌ ಸಂಸ್ಥೆಗಳು ಎಫ್.ಪಿ.ಓ.ಗಳು‌ ಸ್ವ ಸಹಾಯ ಗುಂಪುಗಳ‌ ಸದಸ್ಯರು‌, ಒಕ್ಕೂಟಗಳು, ಸಹಕಾರಿ‌ ಸಂಸ್ಥೆಗಳು ಈ‌ ಯೋಜನೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ನೋಂದಣಿಗಾಗಿ ತಿರುಮಲೇಶ್ ಮೊ. ಸಂ.: 9448752379 ಮತ್ತು ಸಚ್ಚಿದಾನಂದಮ್ ಮೊ.ಸಂ.: 9952913999 ಇವರನ್ನು ‌  ಸಂಪರ್ಕಿಸಬಹುದಾಗಿದೆ.

ಆಸಕ್ತ ಫಲಾನುಭವಿಗಳು ಪೋರ್ಟಲ್ PMFME website link : http://pmfme.mofpi.gov.in, PMFME MIS website link : http://pmfme.mofpi.gov.in/mis ಮೂಲಕ  ಅರ್ಜಿಗಳನ್ನು ನೋಂದಾಯಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಸರ್ಕಾರದ PMFME website ಅಥವಾ ಜಿಲ್ಲಾ ನೋಡಲ್ ಅಧಿಕಾರಿ ‌ ಮಥುರಾ ಎಸ್ .ಪೈ., ಸಹಾಯಕ ಕೃಷಿ ನಿರ್ದೇಶಕರು(ರೈತ ಮಹಿಳೆ) ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಬನಶಂಕರಿ, ಬೆಂಗಳೂರು ಮೊ.ಸಂ.: 8277929923, 9632862326 ಇವರನ್ನು ಸಂಪರ್ಕಿಸಬಹುದಾಗಿದೆ.

ಆಸಕ್ತ ರೈತರು ಮತ್ತು ಆಹಾರ ಸಂಸ್ಕರಣೆಯಲ್ಲಿ ತೊಡಗಿರುವ ಉದ್ಯಮಿಗಳು ಈ ಯೋಜನೆಯ ಉಪಯೋಗ ಪಡೆಯಬೇಕೆಂದು ಜಂಟಿ ಕೃಷಿ ನಿರ್ದೇಶಕರಾದ ಜಿ.ಎಸ್.ಜಯಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಂಗ್ರಹ ಚಿತ್ರ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!