ದೊಡ್ಡಳ್ಳಾಪುರ: ಪೋಷಕರು ಕ್ರೀಡೆಯ ಮಹತ್ವವನ್ನು ಅರಿತುಕೊಳ್ಳಬೇಕಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ತಾಲ್ಲೂಕಿನ ದೊಡ್ಡಬೆಳವಂಗಲದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ, ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಮೆರಿಕಾ ಚೀನಾದಂತಹ ದೇಶಗಳಿಗೆ ಹೋಲಿಸಿದಾಗ ನಮ್ಮ ಶಿಕ್ಷಣ ಪದ್ಧತಿಯಲ್ಲಿ ಕ್ರೀಡೆಗೆ ಹೆಚ್ಚಿನ ಮಹತ್ವ ಇಲ್ಲವೆಂಬುದು ತಿಳಿಯುತ್ತದೆ. ಕ್ರೀಡೆಯನ್ನೇ ಜೀವನವಾಗಿ ತೆಗೆದುಕೊಂಡಿರುವವರ ಸಂಖ್ಯೆ ನಮ್ಮಲ್ಲಿ ತೀರಾ ವಿರಳ. ಕ್ರೀಡಾ ರಂಗದಲ್ಲಿ ಸಾಕಷ್ಟು ಸಾಧನೆಗೆ ಅವಕಾಶಗಳಿದ್ದು, ವಿದ್ಯಾರ್ಥಿಗಳು ಕ್ರೀಡೆಯನ್ನು ಕೇವಲ ಮನೋರಂಜನೆ ಎಂದು ಭಾವಿಸದೆ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಅವರು ಹೇಳಿದರು.
ಕ್ರೀಡಾಕೂಟದಲ್ಲಿ ಹೋಬಳಿಯ ಸುಮಾರು 25 ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಟಿಎಪಿಎಂಸಿ ತಾಲ್ಲೂಕು ಅಧ್ಯಕ್ಷರಾದ ವಿ. ಅಂಜನೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಪ್ಪ, ಗ್ರಾಮಪಂಚಾಯಿತಿ ಅಧ್ಯಕ್ಷ ಪ್ರಕಾಶ್, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಮುಖಂಡರಾದ ರಾಜಗೋಪಾಲ್, ಗಂಗಾಧರ್, ಗ್ರಾಪಂ ಉಪಾಧ್ಯಕ್ಷೆ ಪುಷ್ಪಲತಾ, ಸದಸ್ಯರಾದ ರಾಮಣ್ಣ, ಶಿವಕುಮಾರ್, ಗಂಗಾಧರ್, ತೋಪಯ್ಯ, ಪ್ರಾಂಶುಪಾಲರಾದ ಸುನೀತ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ನರಸಿಂಹಮೂರ್ತಿ ಬರಗೂರು, ಶಿಕ್ಷಣ ಸಂಯೋಜಕ ಕೆ.ವಿ.ಶ್ರೀನಿವಾಸ್, ದೈಹಿಕ ಪರಿವೀಕ್ಷಕ ಸುನಿಲ್ ನಾಯ್ಕ್, ಕ್ರೀಡಾಕೂಟ ಸಮಿತಿಯ ರಾಮಚಂದ್ರ.ವಿ., ಹನುಮಂತರಾಜು, ದೀಪಶ್ರೀ, ಖಮರ್ ಸುಲ್ತಾನ್, ಸಂಜೀವ್ ಮೂರ್ತಿ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

