ಜನೋತ್ಸವಕ್ಕೆ ಮುನ್ನ ದೊಡ್ಡಬಳ್ಳಾಪುರಕ್ಕೆ ಬಿಜೆಪಿ ಸರ್ಕಾರದ ಸಾಧನೆಯ ಪಟ್ಟಿಯನ್ನು ನೀಡಲಿ: ಆರಂಭದ ದಿನಗಳಿಂದಲೂ ಸೋಲಿನ ಭೀತಿ ನನಗಿಲ್ಲ – ಶಾಸಕ ಟಿ.ವೆಂಕಟರಮಣಯ್ಯ / ಜನೋತ್ಸವ ಸಮಾವೇಶ ಪಕ್ಷದ ಕಾರ್ಯಕ್ರಮವ..?, ಸರ್ಕಾರಿ ಕಾರ್ಯಕ್ರಮವ..?: ಜಿ.ಲಕ್ಷ್ಮೀಪತಿ ಪ್ರಶ್ನೆ

ದೊಡ್ಡಬಳ್ಳಾಪುರ: ತಾಲೂಕಿಗೆ ಬಿಜೆಪಿ ಸರ್ಕಾರದ ಕೊಡುಗೆ ಏನು ಎಂದು ಇಲ್ಲಿ ಸಮಾವೇಶ ಆಯೋಜಿಸುತ್ತಿದ್ದಾರೆ. ಒಟ್ಟಾರೆ ರಾಜ್ಯದಲ್ಲಿಯೂ ಸಹ ಬಿಜೆಪಿ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುತ್ತಲೇ ಬಂದಿದ್ದು, ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಬಿಜೆಪಿ ಜನೋತ್ಸವ ಸುಳ್ಳು ಭರವಸೆಗಳ ಉತ್ಸವವಾಗಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಟೀಕಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ವಸತಿ ಭಾಗ್ಯ ಮೊದಲಾಗಿ, ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ಸರ್ಕಾರದ ಸಾಧನೆಗಳನ್ನು ಮುಂದಿಟ್ಟಿದ್ದೆವು. 

ತಾಲೂಕಿನಲ್ಲಿಯೂ ಸಹ ಇಎಸ್‍ಐ ಆಸ್ಪತ್ರೆ, ಹಲವಾರು ವಿದ್ಯಾರ್ಥಿನಿಲಯಗಳ ನಿರ್ಮಾಣವಾಗಿದ್ದವು. ಈಗ ಬಿಜೆಪಿ ಸರ್ಕಾರ ಮೂರು ವರ್ಷಗಳಲ್ಲಿ ದೊಡ್ಡಬಳ್ಳಾಪುರ ವಿಧಾನ ಸಭೆ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದ್ದಾರೆ. ಆ ಪಟ್ಟಿ ಬಿಡುಗಡೆ ಮಾಡಲಿ, ಪಕ್ಷದ ಸಾಧನೆ ಮಾಡುವ ಮುನ್ನ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡಲಿ. ನಾನು ಅಭಿವೃದ್ದಿ ಮಾಡಿರುವುದನ್ನು ಪಟ್ಟಿ ನೀಡಿ ಚರ್ಚಿಸಲು ಸಿದ್ದ ಎಂದರು.

ಬಿಜೆಪಿ ಸರ್ಕಾರದ ಸುಳ್ಳಿನ ಆಶ್ವಾಸನೆ ಕೇಳಿ ಕೇಳಿ ಬೇಸತ್ತಿದೆ. 2023ಕ್ಕೆ ಚುನಾವಣೆ ಹಿನ್ನೆಲೆ ಬೇಕಾಬಿಟ್ಟಿ ಭರವಸೆ ನೀಡಲು ಬರುತ್ತಿದ್ದಾರೆ. ಮತದಾರರಿಗೆ ಸುಳ್ಳನ್ನು ಹೇಳಿಸಲು ಈ ಸಮಾವೇಶ ಮಾಡುತ್ತಿದೆಯೇ…? ಕನಿಷ್ಠ ಹಿಂದಿನ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿದ್ದರೆ ನಾವೇ ಪ್ರಶಂಸೆ ಮಾಡುತ್ತಿದ್ದೆವು. 

ಯಡಿಯೂರಪ್ಪ ಮಧುರೆ ಕೆರೆಗೆ ನೀರು, ಆರ್.ಅಶೋಕ್ ಹೈಟೆಕ್ ಬಸ್ ನಿಲ್ದಾಣದ ಭರವಸೆ ನೀಡಿದ್ದು ನೆನಪಿದೆ. ಆದರೆ ಯಾವುದೂ ಈಡೇರಿಲ್ಲ. ಜಿಲ್ಲಾಸ್ಪತ್ರೆಯ ವಿಚಾರವನ್ನಾದರೂ ಸಹ ಈಗ ಮುಂದಿಡಲಿ. ಬೆಲೆ ಏರಿಕೆ ಜನರಿಗೆ ಜನರನ್ನು ತೀವ್ರವಾಗಿ ಕಂಗೆಡುವಂತೆ ಮಾಡಿದೆ. ಡಿಸೇಲ್, ಪೆಟ್ರೋಲ್ ಅಡುಗೆ ಅನಿಲ, ಕೇಬಲ್, ಅಡುಗೆ ಎಣ್ಣೆ ಬೆಲೆ ಏರಿಕೆ, ಹಾಲು, ಮಜ್ಜಿಗೆ ಮೊಸರು, ಹಪ್ಪಳದ ಮೇಲೆ ತೆರಿಗೆ ಹಾಕಿದ್ದು ಸಾಧನೆಯೇ…ಎಂದು ಪ್ರಶ್ನಿಸಿ ವೆಂಕಟರಮಣಯ್ಯ, ಬಡವರಿಗೆ ಪಿಂಚಣಿ, ಪಡಿತರ ಚೀಟಿ, ನೀಡಲಾಗಿತ್ತು. ಅದರೆ ಪಡಿತರ, ಪಿಂಚಣಿ ತಡೆದ ಕಾರಣ ಬಡ ಜನತೆಯ ಶಾಪ ಬಿಜೆಪಿ ಸರ್ಕಾರವನ್ನು ತಟ್ಟಲಿದೆ. 

ಆರಂಭದ ದಿನದಿಂದ ಸೋಲಿನ ಭೀತಿ ನನಗಿಲ್ಲ. ತಾಲೂಕಿನ ಮತದಾರರ ನೀಡಿದ ಅಧಿಕಾರವನ್ನು ಅಭಿವೃದ್ಧಿ, ತಾಲೂಕಿನ ಶಾಂತಿಗೆ ಮೀಸಲಿಡಲಾಗಿದೆ ಎಂದರು.

ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮಾತನಾಡಿ, ಒಂದು ವರ್ಷದ ಸಾಧನ ಸಮಾವೇಶ, ಸರ್ಕಾರಿ ಕಾರ್ಯಕ್ರಮವ..? ಅಥವಾ ಪಕ್ಷದ ಕಾರ್ಯಕ್ರಮವ…? ಎಂದು ಸ್ಪಷ್ಟನೆ ನೀಡಬೇಕಿದೆ. ನಗರಸಭೆ, ತಾಲೂಕು ಆಡಳಿತದ ಅಧಿಕಾರಿಗಳು ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಸರ್ಕಾರಿ ಕಾರ್ಯಕ್ರಮವಾದರೆ ನಮ್ಮ ಆಕ್ಷೇಪವಿಲ್ಲ. ಆದರೆ ಪಕ್ಷದ ಕಾರ್ಯಕ್ರಮವೆಂದರೆ ಅಧಿಕಾರಿಗಳ ದುರುಪಯೋಗ ಎಷ್ಟು ಸರಿ ಎಂಬುದಕ್ಕೆ ಉತ್ತರ ನೀಡಬೇಕು.

ಬಿಜೆಪಿ ಸರ್ಕಾರದಲ್ಲಿ ಪಿಎಸ್‍ಐ ಹಗರಣ, ಐಪಿಎಸ್ ಹಿರಿಯ ಅಧಿಕಾರಿಗಳು ಜೈಲಿಗೆ ಹೋಗಿದ್ದಾ ಸಾಧನೆ..? ಕೋವಿಡ್ ಸಂದರ್ಭದಲ್ಲಿ ಹಗರಣ, ಪಠ್ಯಪುಸ್ತಕ ಪರಿಷ್ಕರಣೆ ಸಾಧನೆಯೆ.? ಅಥವಾ ಹಿಜಾಬ್, ಹಲಾಲ್ ಮೂಲಕ ಮತೀಯ ಭಾವನೆ ಕೆರಳಿಸಿದ್ದು ಇದು ಸಾಧನೆಯೇ..? ಎಂಬುದಕ್ಕೆ ಸ್ಪಷ್ಟನೆ ನೀಡಬೇಕಿದೆ.

ಗುತ್ತಿಗೆ ದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಶೇ.40 ಕಮಿಷನ್ ಆರೋಪ ಸಾಧನೆಯೇ..? ಇವರ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ..? ಇವಕ್ಕೆ ಸ್ಪಷ್ಟನೆ ನೀಡಿ ಸಾಧನ ಆದ್ರೂ ಮಾಡಿಕೊಳ್ಳಲಿ ಭ್ರಷ್ಟಾಚಾರದ ಸಮಾವೇಶದ ಉತ್ಸವವನ್ನಾದರೂ ಮಾಡಿಕೊಳ್ಳಲಿ ಎಂದರು.

ಕಾಂಗ್ರೆಸ್ ನಗರ ಅಧ್ಯಕ್ಷ ಕೆ.ಪಿ.ಜಗನಾಥ್ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ,  ಮುಖಂಡರಾದ ಹೇಮಂತರಾಜ್, ವಿನೋದ್, ರಮೇಶ್ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬುಧವಾರ ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಗೋಡೆಯ ಕುಸಿದು ಏಳು ಮಂದಿ ಸಾವನಪ್ಪಿರುವ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="121541"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]