ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ಅ.15ರಂದು ಮಾಕಳಿ ಗ್ರಾಮದಲ್ಲಿ ಆಯೋಜನೆ

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಅಕ್ಟೋಬರ್ 15ರಂದು ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದಲ್ಲಿ ಆಯೋಜನೆಯಾಗಿದೆ.

ಈ ಕುರಿತು ತಾಪಂ ಇಒ ಶ್ರೀನಾಥ್ ಗೌಡ ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮಾಕಳಿ ಗ್ರಾಮದಲ್ಲಿ ಆಯೋಜನೆಯಾಗಿರುವುದರಿಂದ ಫಲಾನುಭವಿಗಳ ಪಟ್ಟಿ ಒದಗಿಸಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದರೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಭಾಗವಹಿಸುವರೋ ಅಥವಾ ತಹಶೀಲ್ದಾರ್ ಮೋಹನಕುಮಾರಿ ಗ್ರಾಮವಾಸ್ತವ್ಯ ಹೂಡುವರೋ ಕಾದುನೋಡಬೇಕಿದೆ.

ಕಂದಾಯ ಸಚಿವ ಆರ್.ಅಶೋಕ್ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಇದೇ ತಾಲೂಕಿನ ಹೊಸಹಳ್ಳಿಯಲ್ಲಿ ಚಾಲನೆ ನೀಡಲಾಗಿತ್ತು.

ಜಿಲ್ಲಾಡಳಿತವನ್ನು ಹಳ್ಳಿ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಪ್ರತಿ ತಿಂಗಳ ಮೂರನೇ ಶನಿವಾರ ನಡೆಸಲಾಗುತ್ತಿದೆ‌.

ಜಿಲ್ಲಾಧಿಕಾರಿಗಳ ತಂಡ ಗ್ರಾಮಗಳಿಗೆ ಭೇಟಿ ನೀಡಿ ಕುಂದು ಕೊರತೆ ಆಲಿಸಿ ಅಲ್ಲಿಯೇ ಪರಿಹಾರ ಸೂಚಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಹಳ್ಳಿಯ ಜನರು ಸಣ್ಣಪುಟ್ಟ ಸಮಸ್ಯೆ ಎದುರಾದಾಗಾಲೂ ಜಿಲ್ಲಾಧಿಕಾರಿ, ತಹಸೀಲ್ದಾರ್‌ ಕಚೇರಿಗೆ ಅಲೆಯುವ ಪರಿಸ್ಥಿತಿಯಿದೆ. ಇದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ’ ಯೋಜನೆಯ ಅನುಸಾರ ಡಿಸಿಗಳು ಪ್ರತಿ ತಿಂಗಳ ಮೂರನೇ ಶನಿವಾರ ಒಂದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿನ ಹಳ್ಳಿಯ ಜನರ ಅಹವಾಲು ಸ್ವೀಕರಿಸಿ ಸಮಸ್ಯೆ ಇತ್ಯರ್ಥ ಪಡಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ.

ಯಾವೆಲ್ಲ ಕುಂದು ಕೊರತೆ?: ”ಪಿಂಚಣಿ, ಆಶ್ರಯ ಯೋಜನೆ, ಸ್ಮಶಾನ, ಫವತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಪರಿಶೀಲನೆ ಹಾಗೂ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದ ಅಡೆತಡೆ ನಿವಾರಣೆ ಸಂಬಂಧ ಡಿಸಿಗಳ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ,”

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]