ಪವಿತ್ರ ಮಣ್ಣು, ಜಲ ಸಂಗ್ರಹ ಅಭಿಯಾನದ ಕೆಂಪೇಗೌಡ ರಥಕ್ಕೆ ಸಚಿವ ಎನ್.ನಾಗರಾಜ್ ಚಾಲನೆ

ಚಿಕ್ಕಬಳ್ಳಾಪುರ: ದೇವಹಳ್ಳಿಯ ವಿಮಾನ  ನಿಲ್ದಾಣದಲ್ಲಿನ  ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆಯ ಉದ್ಘಾಟನೆಯ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ “ಪವಿತ್ರ (ಮೃತ್ತಿಕೆ) ಮಣ್ಣು ಮತ್ತು ಜಲ ಸಂಗ್ರಹ” ಅಭಿಯಾನದ ಕೆಂಪೇಗೌಡರ ರಥಕ್ಕೆ ಪೌರಾಡಳಿತ ಹಾಗೂ ಸಣ್ಣ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜ್ ಅವರು ಚಾಲನೆ ನೀಡಿದರು. 

ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ವತಿಯಿಂದ ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ “ಪವಿತ್ರ ಮಣ್ಣು ಮತ್ತು ಜಲ ಸಂಗ್ರಹ ಅಭಿಯಾನದ ಕೆಂಪೇಗೌಡ ರಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನವೆಂಬರ್ 11 ರಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು  ಲೋಕಾರ್ಪಣೆ  ಮಾಡಲಿದ್ದಾರೆ. ಇದರ ಭಾಗವಾಗಿ  ರಾಜ್ಯದಾದ್ಯಂತ  “ಪವಿತ್ರ (ಮೃತ್ತಿಕೆ) ಮಣ್ಣು ಮತ್ತು ಜಲ ಸಂಗ್ರಹ” ಅಭಿಯಾನವನ್ನು ಆರಂಭಿಸಲಾಗಿದೆ ಎಂದರು. 

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಹಾಗೂ  ಉದ್ಯಾನವನಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳ ಪವಿತ್ರ ಪುಣ್ಯಕ್ಷೇತ್ರಗಳು ಹಾಗೂ ಗ್ರಾಮ ಪಂಚಾಯಿತಿಗಳಿಂದ ಸಂಗ್ರಹಿಸಿದ ಮಣ್ಣು (ಮೃತ್ತಿಕೆ) ಬಳಸಲು “ಪವಿತ್ರ ಮಣ್ಣು ಮತ್ತು ಜಲ ಸಂಗ್ರಹ” ಅಭಿಯಾನವನ್ನು ನಡೆಸಲಾಗುತ್ತಿದ್ದು, ಜಿಲ್ಲೆಯಲ್ಲಿಯೂ ಸಹ ಇಂದು ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. 

ಈ ಕೆಂಪೇಗೌಡ ರಥವು ಜಿಲ್ಲೆಯ ಎಲ್ಲಾ ತಾಲ್ಲೂಕು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಿಲ್ಲೆಯಾದ್ಯಂತ ನವೆಂಬರ್ 7 ರವರೆಗೆ ಸಂಚರಿಸಿ ಪವಿತ್ರ ಸ್ಥಳಗಳಲ್ಲಿ ಮಣ್ಣು ಮತ್ತು ಜಲವನ್ನು ಸಂಗ್ರಹಿಸಿ, ಕೆಂಪೇಗೌಡ ಪ್ರತಿಮೆಯ ಆವರಣದ ಉದ್ಯಾನವನಕ್ಕೆ ಉಪಯೋಗಿಸಲಾಗುತ್ತದೆ. ಈ ಭಾಗದ ಜನತೆ ಈ ಮಹಾನ್ ಕಾರ್ಯಕ್ಕೆ ಸಹಕಾರ ನೀಡಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. 

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾದ ಕೆ.ವಿ.ನಾಗರಾಜು ಅವರು ಮಾತನಾಡುತ್ತಾ, ಜಿಲ್ಲೆಯಲ್ಲಿಂದು ಕೆಂಪೇಗೌಡರ ರಥಕ್ಕೆ ಚಾಲನೆ ನೀಡಲಾಗಿದೆ. ಈ ವಾಹನವು ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ, ಪುಣ್ಯ ಭೂಮಿಗಳಲ್ಲಿ ಮಣ್ಣನ್ನು ಸಂಗ್ರಹಿಸಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಳುಹಿಸಿಕೊಡಲಾಗುತ್ತಿದೆ. ಈ ಮಣ್ಣನ್ನು ಕೆಂಪೇಗೌಡರ ಉದ್ಯಾನವನ ನಿರ್ಮಾಣಕ್ಕೆ ಉಪಯೋಗಿಸಲಾಗುತ್ತದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಜನತೆ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು. 

ಚಾಲನೆಗೊಂಡ ನಾಡಪ್ರಭು ಕೆಂಪೇಗೌಡ ರಥದ ಮೆರವಣಿಗೆಯು ಸೋಮನ ಕುಣಿತ, ಕೀಲುಕುದುರೆ, ಕರಡಿ ಕುಣಿತದ  ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು.  ಈ ವೇಳೆ ನೂರಾರು ಮಹಿಳೆಯರು ಕಳಸ ಮತ್ತು ಆರತಿಯೊಂದಿಗೆ ರಥಕ್ಕೆ ಭವ್ಯ ಸ್ವಾಗತ ನೀಡಿದರು.  

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ತಹಸೀಲ್ದಾರ್ ಗಣಪತಿಶಾಸ್ತ್ರಿ, ನಗರಸಭೆ ಅಧ್ಯಕ್ಷರಾದ ಆನಂದರೆಡ್ಡಿ ಬಾಬು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೇಶವರೆಡ್ಡಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯ ನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯ ನಾಗೇಶ್, ತಾಲೂಕು ಅಧ್ಯಕ್ಷರಾಗಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]