ಬೆಂ.ಗ್ರಾ.ಜಿಲ್ಲೆ (ಅ.25): ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿರುವ ಹೊಯ್ಸಳ ಪದವಿ ಕಾಲೇಜಿನಲ್ಲಿ ಅಕ್ಟೋಬರ್ -28 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಎಂಜಿನಿಯರಿಂಗ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳದಲ್ಲಿ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. 500 ಕ್ಕೂ ಹೆಚ್ಚು ಉದ್ಯೋಗವಕಾಶಗಳು ಇರುತ್ತವೆ.
ಅರ್ಹ ಆಸಕ್ತ ಅಭ್ಯರ್ಥಿಗಳು https://forms.gle/RqPESH94FCMKmSV59 ಲಿಂಕ್ ಮೂಲಕ ನೋಂದಾಯಿಸಿ ಕೊಳ್ಳಬಹುದು . ಹೆಚ್ಚಿನ ಮಾಹಿತಿಗಾಗಿ / ನೋಂದಣಿಗಾಗಿ 7676272167 ಅಥವಾ 9964907444 ಮೊಬೈಲ್ ಸಂಖ್ಯೆಗಳನ್ನು ಇಲ್ಲವೇ ಇಮೇಲ್ hr.hoysala16@gmail.com ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತನುಜಾ ರಾಂಪುರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

