ಪುನೀತ್ ರಾಜ್ ಕುಮಾರ್ ನೆನಪಿನಾರ್ಥಕವಾಗಿ ಕ್ಷಯರೋಗಿಗಳ ದತ್ತು ಪಡೆದ ರಾಜಕಾರಣಿ..!!!

ಚಿಕ್ಕಬಳ್ಳಾಪುರ: ನಟ ಪುನೀತ್ ರಾಜ್‍ಕುಮಾರ್ ಅಭಿನಯದ ಗಂಧದಗುಡಿ ಸಿನಿಮಾ ಇಂದು ತೆರೆಕಂಡಿದ್ದು, ಅಪ್ಪು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. 

ಇಡೀ ರಾಜ್ಯ ಸೇರಿ ವಿಶ್ವಾದ್ಯಾಂತ ಗಂಧದಗುಡಿ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇನ್ನೂ ಅಪ್ಪುವಿನ ಸಮಾಜಮುಖಿ ಕಾಯಕಗಳು ಎಂದಿಗೂ ಎಲ್ಲರಿಗೂ ಅದರ್ಶಪ್ರಾಯವೇ ಸರಿ.

ಹಾಗಾಗಿ ಗಂಧದಗುಡಿ ಸಿನಿಮಾ ರಿಲೀಸ್ ಹಾಗೂ ಅಪ್ಪುಪುಣ್ಯಸ್ಮರಣೆಯ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸವೇಕ-ರಾಜಕಾರಣಿ ಮಿಥುನ್ ರೆಡ್ಡಿ ಎಂ ಆರ್ ಸ್ವಾಭಿಮಾನಿ ಫೌಂಡೇಶನ್ ನೇತೃತ್ವದಲ್ಲಿ ಕ್ಷಯರೋಗಿಗಳನ್ನ ದತ್ತು ಪಡೆದುಕೊಂಡು ಮಾದರಿಯಾಗಿದ್ದಾರೆ.

ಗುಡಿಬಂಡೆ ತಾಲ್ಲೂಕಿನ 53 ಕ್ಷಯರೋಗಿಗಳನ್ನ ದತ್ತು ಪಡೆದ ಮಿಥುನ್ ರೆಡ್ಡಿ, ಕ್ಷಯರೋಗಿಗಳ ಪಾಲಿಗೆ ಅಕ್ಷಯ ವಾಗಲಿರುವ ಪೌಷ್ಟಿಕಾಹಾದರ ಕಿಟ್ ಗಳನ್ನ ವಿತರಣೆ ಮಾಡಿದರು‌.

ತಾಲೂಕು ಅರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಗುಡಿಬಂಡೆ ತಾಲ್ಲೂಕಿನಲ್ಲಿರುವ 52 ಮಂದಿಯನ್ನ ದತ್ತು ಪಡೆದು ಅವರಿಗೆ ಪ್ರತಿ ತಿಂಗಳು ಪೌಷ್ಟಿಕಾಹಾರದ ಕಿಟ್ ನೀಡುವುದುರ ಮುಖಾಂತರ ಕ್ಷಯರೋಗವನ್ನ ದೂರ ಮಾಡುವತ್ತ ಸಹಾಯ ಮಾಡುವುದರ ಜೊತೆಗೆ ಅವರ ಸಂಪೂರ್ಣ ಆರೋಗ್ಯ ದ ಜವಾಬ್ದಾರಿ ಯನ್ನ ವಹಿಸಿಕೊಳ್ಳುವುದಾಗಿ ಮಿಥುನ್ ರೆಡ್ಡಿ ತಿಳಿಸಿದ್ದಾರೆ.

ಇನ್ನೂ ಕೇವಲ ಗುಡಿಬಂಡೆ ಮಾತ್ರ ಅಷ್ಟೇ ಅಲ್ಲದೆ ನೆರೆಯ ಬಾಗೇಪಲ್ಲಿ ಚೇಳೂರು ತಾಲೂಕಿನ 127 ಕ್ಷಯರೋಗಿಗಳನ್ನ ಸಹ ದತ್ತು ಪಡೆಯುವ ತೀರ್ಮಾನ ಮಾಡಿ ಅವರಿಗೂ ಪ್ರತಿ ತಿಂಗಳು ಕಿಟ್ ವಿತರಣೆ ಮಾಡುವುದಾಗಿ ತಿಳಿಸಿದ್ದಾರೆ.

ಗುಡಿಬಂಡೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಲೂಕು ಆರೋಗ್ಯಾಧಿಕಾರಿ ನೇತೃತ್ವದಲ್ಲಿ 53 ಮಂದಿ ಕ್ಷಯರೋಗಿಗಳಿಗೆ ಪೌಷ್ಟಿಕಾಹಾರದ ಕಿಟ್ ವಿತರಣೆ ಮಾಡಲಾಯಿತು.

ಕಿಟ್ ನಲ್ಲಿ‌ ಕ್ಷಯರೋಗಿಗಳಿಗೆ ಅತ್ಯವಶ್ಯಕವಾದ ಆಹಾರ ಪದಾರ್ಥಗಳು, ಪ್ರೋಟಿನ್ ಪೌಡರ್ ಹಾಗೂ ಒಂದು ತಿಂಗಳಿಗೆ ಆಗುವಷ್ಟು ಮೊಟ್ಟೆಗಳು ಇರಲಿವೆ.

ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥವಕವಾಗಿ ಮಿಥುನ್ ರೆಡ್ಡಿ ಮಾದರಿ ಕಾಯಕ ಮಾಡಿದ್ದು ಕ್ಷಯರೋಗಿಗಳ ಪಾಲಿಗೆ ವರದಾನವಾಗಿದೆ.

ತಾಲೂಕು ಆರೋಗ್ಯಾಧಿಕಾರಿ ನರಸಿಂಹಮೂರ್ತಿ ಸಹ ಮಿಥುನ್ ರೆಡ್ಡಿ ಯ ದತ್ತು ಕಾಯಕವನ್ನ ಶ್ಲಾಘಿಸಿದ್ದು, ಕ್ಷಯರೋಗಿಗಳ ಪಾಲಿಗೆ ಪೌಷ್ಟಿಕಾಹಾರ ಅತ್ಯವಶ್ಯಕ. ಕ್ಷಯರೋಗಿಗಗೆ ಜೀರ್ಣಕ್ರಿಯೆ ಸರಿಯಾಗದೆ ಅಗದೆ ಅಗತ್ಯ ಪೋಷಕಾಂಶಗಳು ಸಿಗುವುದಿಲ್ಲ. ಹೀಗಾಗಿ ಅಂತಹವರಿಗೆ ಪೌಷ್ಟಿಕಾಹಾರದ ಪದಾರ್ಥಗಳನ್ನ ನೀಡಿದರೆ ಅವರು ಅದಷ್ಟು ಬೇಗ ಗುಣಮುಖರಾಗುತ್ತಾರೆ‌.

ಕ್ಷಯರೋಗಿಗಳನ್ನ ಒಬ್ಬೊಬ್ಬ ವೈದ್ಯರು ಒಬ್ಬಬ್ಬರನ್ನ ದತ್ತು ಪಡೆಯಲು ವೈದ್ಯರು ತೀರ್ಮಾನ‌ ಮಾಡಿದ್ದೀವಿ ಆದರೆ ಈಗ ಮಿಥುನ್ ರೆಡ್ಡಿ ಮುಂದೆ ಬಂದು ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಈ ಕಾಯಕ ಮಾಡಿದ್ದು ಉತ್ತಮ‌ ಕಾಯಕ ಅಂತ ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]