ಬೆಂ.ಗ್ರಾಜಿಲ್ಲೆ, (ನ.01): ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಏರ್ಪಡಿಸಲಾದ “67ನೇ ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ. ಸುಧಾಕರ್ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್, ದೇವನಹಳ್ಳಿ ಪುರಸಭೆಯ ಅಧ್ಯಕ್ಷೆ ಗೋಪಮ್ಮ, ಉಪಾಧ್ಯಕ್ಷೆ ಗೀತಾ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣಪ್ಪ.ಕೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

