ಕನ್ನಡ ಭಾಷೆಯ ಕಡ್ಡಾಯ ಹಾಗೂ ಅನುಷ್ಟಾನಕ್ಕೆ ಸರ್ಕಾರಗಳು ಕ್ರಮ ಕೈಗೊಳ್ಳಬೇಕು: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಆಳುವ ಸರ್ಕಾರಗಳು ಕನ್ನಡದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದರಿಂದ ಆಡಳಿತದಲ್ಲಿ ಕನ್ನಡದ ಅನುಷ್ಟಾನ ಹಿನ್ನಡೆಯಾಗುತ್ತಿದೆ. ಈ ದಿಸೆಯಲ್ಲಿ ಕನ್ನಡ ಭಾಷೆಯ ಕಡ್ಡಾಯ ಹಾಗೂ ಅನುಷ್ಟಾನಕ್ಕೆ ಸರ್ಕಾರಗಳು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ಡಾ.ರಾಜಕುಮಾರ್ ಕಲಾಮಂದಿರದಲ್ಲಿ ನಡೆದ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮಗಳ ಮೂಲಕ ಎಲ್ಲೆಡೆ ಕನ್ನಡದ ವಾತಾವರಣ ನಿರ್ಮಾಣಕ್ಕೆ ಪೂರಕವಾಗಬೇಕು. ಕನ್ನಡ ನಾಡು ನುಡಿ ಉಳಿಸಿ ಬೆಳೆಸಲು ಪ್ರತಿಯೊಬ್ಬರೂ ಕಟಿಬದ್ದರಾಗಬೇಕು ಎಂದರು.

ಉಪವಿಭಾಗಾಧಿಕಾರಿ ಎನ್.ತೇಜಸ್ ಕುಮಾರ್ ಮಾತನಾಡಿ, ಇಂದಿನ ಪೀಳಿಗೆಗೆ ಕನ್ನಡ ಭಾಷೆ ಸಂಸ್ಕೃತಿಯ ಅನನ್ಯತೆಯನ್ನು ಪರಿಚಯಿಸಬೇಕಾದ ಅಗತ್ಯವಿದೆ. ಕನ್ನಡ ಸಾಹಿತ್ಯ ಶ್ರೀಮಂತವಾಗಿದ್ದು, ನಾಡಿನ ಹೆಮ್ಮೆಯ ಕವಿಗಳ ಸಾಹಿತ್ಯವನ್ನು ಪರಿಚಯಿಸಬೇಕಿದೆ ಎಂದರು.

ಉಪನ್ಯಾಸಕ ಕೆ.ಎಚ್.ಪ್ರವೀಣ್ ಮಾತನಾಡಿ, ಕನ್ನಡದ ಕನ್ನಡದ ಅನನ್ಯತೆಯ ಬಗ್ಗೆ ಹೆಮ್ಮೆ ಪಡುವ ನಾವು ಇಂದು ಒಕ್ಕೂಟ ವ್ಯವಸ್ಥೆಯಲ್ಲಿ ಬಲವಂತದ ಹಿಂದಿ ಹೇರಿಕೆಗೆ ಒಳಗಾಗುತ್ತಿದ್ದೇವೆ. ಮಾತೃಭಾಷಾ ಶಿಕ್ಷಣ ಪ್ರಭಾವಶಾಲಿಯಾಗಿದ್ದು, ಕನ್ನಡ ಬದುಕಾದಾಗ ಮಾತ್ರ ಭಾಷೆಯ ಜೀವಂತಿಕೆ ಸಾಧ್ಯ ಎಂದರು.

ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ  ಡಿ.ಪಿ.ಆಂಜನೇಯ (ಕನ್ನಡ ಕಟ್ಟಾಳು), ರಾ.ಬೈರೇಗೌಡ (ಪ್ರಗತಿಪರ ರೈತರು, ವಕೀಲರು), ಕೆ.ನರಸಿಂಹಯ್ಯ(ನಾಟಕ), ಆರ್. ರಾಜಣ್ಣ(ರಂಗಭೂಮಿ), ಹನುಮಂತ ರೆಡ್ಡಿ (ಕನ್ನಡಪರ ಹೋರಾಟ), ಡಾ.ಹರೀಶ್ (ವೈದ್ಯಕೀಯ-ನೇತ್ರದಾನ ಜಾಗೃತಿ), ಚಿನ್ನುಪ್ರಕಾಶ್ (ಸಾಹಿತ್ಯ), ರಾಮಮೂರ್ತಿ (ಯಕ್ಷಗಾನ), ಯುಕ್ತಿ ರಾಜಣ್ಣ (ಏರ್‍ರೈಫಲ್-ಕ್ರೀಡೆ) ಗಣ್ಯರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷೆ ಫರ್ಹಾನಾ ತಾಜ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ಮೋಹನ ಕುಮಾರಿ, ರಾಜ್ಯ ರೇಷ್ಮೆ ಮಂಡಲಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ, ತಾ.ಪಂ ಇಒ ಶ್ರೀನಾಥ್ ಗೌಡ, ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್, ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ ಸೇರಿದಂತೆ ನಗರಸಭಾ ಸದಸ್ಯರು  ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಕಾರ್ಯಕರ್ತರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]