ದೊಡ್ಡಬಳ್ಳಾಪುರ,(ನ.03): ನಗರದ ಉಪ ನೋಂದಣಾಧಿಕಾರಿ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಲೋಕಯುಕ್ತ ಎಸ್ಪಿ ಪವನ್ ನೆತ್ತೂರು ನೇತೃತ್ವದಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
ಡಿವೈಎಸ್ಪಿ ರೇಣುಕಾ ಪ್ರಸಾದ್ ಸೇರಿದಂತೆ, ಚಿಕ್ಕಬಳ್ಳಾಪುರ ಪೊಲೀಸ್ ಇಲಾಖೆ ಸಿಬ್ಬಂದಿ ಬಳಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಲಂಚದ ಹಾವಳಿ ಕುರಿತಂತೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆ ಲೊಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದು, ಕಚೇರಿಗೆ ಬೀಗ ಹಾಕಲಾಗಿದೆ.
ಹೆಚ್ಚಿನ ಅಧಿಕೃತ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

