ದೊಡ್ಡಬಳ್ಳಾಪುರ,(ನ.03): ನಗರದ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಕಚೇರಿಯ ಒಳಗಿದ್ದ ಸಾರ್ವಜನಿಕರು ಸೇರಿದಂತೆ ಅಧಿಕಾರಿಗಳ ವಿಚಾರಣೆ ನಡೆಸುತ್ತಿದ್ದಾರೆ.
ಸಂಜೆ 5 ಗಂಟೆ ಸುಮಾರಿಗೆ ಲೋಕಯುಕ್ತ ಎಸ್ಪಿ ಪವನ್ ನೆತ್ತೂರು ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್ಪಿ ರೇಣುಕಾ ಪ್ರಸಾದ್ ಮತ್ತು 8 ಸಿಬ್ಬಂದಿ ಸೇರಿದಂತೆ, ಚಿಕ್ಕಬಳ್ಳಾಪುರ ಪೋಲೀಸ್ ಇಲಾಖೆ ಸಿಬ್ಬಂದಿ ಬಳಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಭ್ರಷ್ಟಾಚಾರದ ಹಾವಳಿ ಕುರಿತಂತೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆ ಲೊಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಯ ಒಳಗಿದ್ದ ಸುಮಾರು ಇಪ್ಪತ್ತು ಮಂದಿ ಸಾರ್ವಜನಿಕರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದು, ಸಾರ್ವಜನಿಕರ ಆಕ್ಷೇಪದ ಮೇರೆಗೆ 15 ಮಂದಿಯನ್ನು ವಿಚಾರಣೆ ನಡೆಸಿ ಹೊರ ಕಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಸೇರಿದಂತೆ ಸುಮಾರು 20 ಕಡೆಗಳಲ್ಲಿ ಇಂದು ಲೋಕಾಯುಕ್ತ ದಾಳಿ ನಡೆಸಲಾಗಿದೆ ಎಂದು ಹೆಸರೇಳಲು ಇಚ್ಚಿಸದ ಅಧಿಕಾರಿಯೊರ್ವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

