ಬೆಂ.ಗ್ರಾ: ಜಿಲ್ಲೆಯ 5 ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಪೊಲೀಸರ ತನಿಖೆ ವೇಳೆ 2.5 ಲಕ್ಷ ರೂ ಹೆಚ್ವುವರಿ ಹಣ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ಸಂಜೆ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಅನೇಕಲ್, ಹೊಸಕೋಟೆಯ ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಎಸ್ಪಿ ಪ್ರವೀಣ್ ನೆಜ್ಜೂರು ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.
ಹಲವು ಗಂಟೆಗಳ ಕಾಲ ಪರಿಶೀಲನೆ, ವಿಚಾರಣೆ ನಡೆಸಿದ್ದ ಲೋಕಾಯುಕ್ತರಿಗೆ, ಐದು ಕಚೇರಿಗಳಲ್ಲಿ ಸೇರಿ ಒಟ್ಟು 2.5 ರೂ ಲಕ್ಷ ಹೆಚ್ವುವರಿ ಹಣ ಪತ್ತೆಯಾಗಿದೆ ಎನ್ನಲಾಗಿದೆ.
ದಾಳಿಯ ವೇಳೆ ಯಾವುದೇ ಅಧಿಕಾರಿಗಳನ್ನು ವಶ ಅಥವಾ ಬಂಧನ ಮಾಡಿಲ್ಲವೆಂದು ನಂಬಲಾರ್ಹ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

