ನ.11ರಂದು ದೇವನಹಳ್ಳಿಗೆ ಪ್ರಧಾನಿ ಮೋದಿ ಭೇಟಿ: ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಡಿಸಿ ಸೂಚನೆ

ಬೆಂ.ಗ್ರಾ.ಜಿಲ್ಲೆ, (ನ.07): ನವೆಂಬರ್ 11 ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ  ಸಮೃದ್ಧಿ ಪ್ರತಿಮೆ ಅನಾವರಣ ಹಾಗೂ ಥೀಮ್ ಪಾರ್ಕ್ ಶಂಕುಸ್ಥಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಪರಸ್ಪರ ಸಮನ್ವಯದೊಂದಿಗೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಇಂದು ಸಂಜೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದ್ದು, ಸರ್ಕಾರದ ಉನ್ನತ ಮಟ್ಟದಲ್ಲಿ ಸಿದ್ಧತೆಗಳು ನಡೆಯುತ್ತಿವೆ.ಜಿಲ್ಲಾಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಪರಸ್ಪರ ಸಮನ್ವಯದೊಂದಿಗೆ, ಯಾವುದೇ ಲೋಪಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆಯಿಂದ ನಿರ್ವಹಿಸಬೇಕು. 

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಂದು ಬೆಳಿಗ್ಗೆಯಿಂದಲೇ ಭೋಜನದ ವ್ಯವಸ್ಥೆ ಮಾಡಲಾಗುತ್ತಿದೆ. ಸ್ಥಾಪಿಸಲಾಗುವ ಊಟದ ವಿತರಣೆ ಕೌಂಟರುಗಳ ಸಂಖ್ಯೆ ಆಧರಿಸಿ ಅವುಗಳ ಉಸ್ತುವಾರಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗುವುದು.

ಆಹಾರವು ಚೆಲ್ಲಿ, ಎಲ್ಲೆಡೆ ಹರಡದ ಹಾಗೆ ಸ್ವಚ್ಛತೆಗೆ ಹೆಚ್ಚು ಕ್ರಮವಹಿಸಿ, ಸಾಕಷ್ಟು ಪ್ರಮಾಣದಲ್ಲಿ ಆಹಾರ ತ್ಯಾಜ್ಯದ ಸಂಗ್ರಹಕ್ಕೆ ತೊಟ್ಟಿಗಳನ್ನು ನಿಗದಿತ ಸ್ಥಳಗಳಲ್ಲಿ ಇರಿಸಬೇಕು.

ಪೌರ ಕಾರ್ಮಿಕರನ್ನು ನಿಯೋಜಿಸಬೇಕು. ಆಹಾರದ ಗುಣಮಟ್ಟದ ಬಗ್ಗೆಯೂ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಕೋವಿಡ್ ತಪಾಸಣೆ ಕಡ್ಡಾಯ: ಕರ್ತವ್ಯಕ್ಕೆ ನಿಯೋಜಿಸಲ್ಪಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ತಪಾಸಣೆ ಮಾಡಿಸಿಕೊಂಡು, ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಸ್ವ್ಯಾಬ್ ಸಂಗ್ರಹಿಸಲು ಜಿಲ್ಲಾಡಳಿತ ಭವನದಲ್ಲಿ ಕೌಂಟರ್ ಸ್ಥಾಪಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ, ಉಪಕಾರ್ಯದರ್ಶಿ ಡಾ.ನಾಗರಾಜ,ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕಿ ಗಿರಿಜಾದೇವಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯೇಂದ್ರ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ನಟರಾಜ,ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ ಡೊಳ್ಳಿನ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಮೋಹನ್  ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]