ಕೆಂಪೇಗೌಡರ ಪ್ರತಿಮೆ ಅನಾವರಣ: ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ: ಬಿಜೆಪಿ ವಿರುದ್ಧ ಜೆಡಿಎಸ್​ ಟ್ವಿಟ್ ದಾಳಿ

ಬೆಂಗಳೂರು, (ನ,12): ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಕರೆದಿಲ್ಲ ಎಂಬ ಆರೋಪಕ್ಕೆ ಬಿಜೆಪಿ ಸಾಕ್ಷಿ ಸಮೇತ, ತೀಕ್ಷ್ಣ ಪ್ರತ್ಯುತ್ತರ ನೀಡಿದ ಟ್ವಿಟ್ಗೆ ಪ್ರತಿಯಾಗಿ ಜೆಡಿಎಸ್ ಸರಣಿ ಟ್ವಿಟ್ ಮೂಲಕ ಕಿಡಿಕಾರಿದೆ.

ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ..! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಶ್ರೀ @H_D_Devegowda ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ @BJP4Karnataka ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಶ್ರೀ @H_D_Devegowda ಅವರನ್ನು ಶ್ರೀ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ @BJP4Karnataka ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ.

ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ..? ಎಂದು ಪ್ರಶ್ನಿಸಿದೆ‌.

ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ. 

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ..? ಎಂದು ಪ್ರಶ್ನಿಸಿದೆ.

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ.

ರಾಜ್ಯ @BJP4Karnataka ಸರಕಾರ,ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದು ಕಿಡಿಕಾರಿದೆ.

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ @narendramodi ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ.

ಕೆಂಪೇಗೌಡರು @BJP4India ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ.

ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ.

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ.

ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?

ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ?

ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ..?ಎಂದು ಪ್ರಶ್ನಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]