ಬೆಂಗಳೂರು, (ನ14): ಭಾರತ್ ಜೋಡೋ ಯಾತ್ರೆ ಬಳಿಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಿಲ್ಯಾಕ್ಸ್ ಮೂಡಿನಲ್ಲಿದ್ದು, ಭಾನುವಾರ ಕುಟುಂಬದ ಸದಸ್ಯರ ಜೊತೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡಿದ್ದಾರೆ.
ಈ ಕುರಿತಂತೆ ಡಿ.ಕೆ.ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಪೊಟೋ ಹಂಚಿಕೊಂಡಿದ್ದು, ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾ ಕಾಲಭೈರವೇಶ್ವರ ದೇವಸ್ಥಾನಕ್ಕೆ ಇಂದು ಕುಟುಂಬ ಸಮೇತವಾಗಿ ಭೇಟಿ ನೀಡಿ, ದೇವರ ದರ್ಶನ ಪಡೆದೆ.
ಪುರಾಣದಿಂದ ಹಿಡಿದು ಕಾಳಿದಾಸನ ಮೇಘ ಸಂದೇಶದಲ್ಲೂ ಉಜ್ಜಯಿನಿಯ ಉಲ್ಲೇಖವಿದೆ. ಶಿವನು ಇಲ್ಲಿ ವಾಸಿಸುತ್ತಿದ್ದ ಎಂದು ಪುರಾಣಗಳು ಹೇಳುತ್ತವೆ ಎಂದು ಡಿ.ಕೆ.ಶಿವಕುಮಾರ್ ಬರೆದಿದುಕೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

