ದೊಡ್ಡಬಳ್ಳಾಪುರ, (ನ.23): ವರ್ಷದಲ್ಲಿ ಎರಡನೇ ಬಾರಿಗೆ ತಾಲೂಕಿನ ಮೆಳೇಕೋಟೆ ಕ್ರಾಸ್ ಬಳಿಯಿರುವ ಎಟಿಎಂಗೆ ಕನ್ನ ಹಾಕುವ ವಿಫಲ ಯತ್ನ ನಡೆದಿದೆ.
ಮಂಗಳವಾರ ತಡರಾತ್ರಿ ಎಟಿಎಂ ಕೇಂದ್ರದ ಹಿಂಭಾಗದ ಗೋಡೆ ಹೊಡೆದು ಎಟಿಎಂಗೆ ಕನ್ನಹಾಕಲು ಕಳ್ಳರು ಯತ್ನಿಸಿದ್ದಾರೆ. ಆದರೆ ಗ್ರಾಮಸ್ಥರ ಸದ್ದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿಷಯ ತಿಳಿದ ಇನ್ಸ್ಪೆಕ್ಟರ್ ಮುನಿಕೃಷ್ಣ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.
ವರ್ಷದಲ್ಲಿ ಎರಡನೇ ಬಾರಿ: ಇದೇ ರೀತಿ ಫೆ.24ರಂದು ಮುಂಜಾನೆ ಎಟಿಎಂ ದೋಚಲು ಇಬ್ಬರು ಆರೋಪಿಗಳು ಯತ್ನಿಸುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದು, ಕೂಡಲೇ ಆರೋಪಿಗಳನ್ನು ಹಿಡಿಯಲು ಹೋಗಿದ್ದಾರೆ. ಇದರಿಂದ ಕಂಗಲಾದ ಆರೋಪಿಗಳು ತಪ್ಪಿಸಿಕೊಂಡು ಪರಾರಿಯಾಗಿದ್ದರು.
ಘಟನೆ ಕುರಿತು ಆರೋಪಿಗಳಾದ ನೆಲಮಂಗಲದ ಅರಿಶಿನಕುಂಟೆ ಗ್ರಾಮದ 19ವರ್ಷದ ಸಚಿನ್ ಮತ್ತು ಗಗನ್ ಎನ್ನುವರನ್ನು ಬಂಧಿಸಲಾಗಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

