ಚರ್ಮಗಂಟು ರೋಗದ ಆತಂಕ: ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ನಿಷೇಧ..!!

ದೊಡ್ಡಬಳ್ಳಾಪುರ, (ನ.01): ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಧ್ಯಂತ ಜನವರಿ 30ರ ವರೆಗೆ ಜಾತ್ರೆ / ಸಂತೆ / ಜಾನುವಾರು ಸಾಗಣೆ ನಿಷೇಧಿಸಿ ಜಿಲ್ಲಾಧಿಕಾರಿ ಆರ್.ಲತಾ ಆದೇಶಿಸಿದ್ದಾರೆ.

ಈ ಆದೇಶದಿಂದ ಡಿಸೆಂಬರ್​ 20 ರಂದು ಘಾಟಿ ಸುಬ್ರಹ್ಮಣ್ಯದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದ ದನಗಳ ಜಾತ್ರೆ ನಿಷೇಧಕ್ಕೆ ಒಳಗಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ದಕ್ಷಿಣ ಭಾರತದಲ್ಲೇ ಪ್ರಸಿದ್ಧವಾಗಿದ್ದು. ನೆರೆಯ ತಮಿಳುನಾಡು ಮತ್ತು ಆಂಧ್ರಪ್ರದೇಶದ ರೈತರು ಸಹ ಜಾತ್ರೆಗೆ ಬಂದು ದನಗಳ ವ್ಯಾಪಾರ ಮಾಡುತ್ತಾರೆ. ಆದರೆ ಜಿಲ್ಲಾಧಿಕಾರಿ ಆದೇಶ ರೈತರ ಸಂಭ್ರಮಕ್ಕೆ ತೊಡಕನ್ನುಂಟುಮಾಡಿದೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಈವರೆಗೂ 2037 ಜಾನುವಾರುಗಳಲ್ಲಿ ಈ ರೋಗವು ಕಂಡುಬಂದಿದ್ದು, 154 ಜಾನುವಾರುಗಳು ಮರಣಹೊಂದಿರುತ್ತವೆ . ಇದು ಒಂದು ವೈರಾಣುನಿಂದ ಹರಡುವ ರೋಗವಾಗಿದ್ದು ಹಾಗೂ ಪ್ರಮುಖವಾಗಿ ಸೊಳ್ಳೆ, ನೊಣ, ಉಣ್ಣೆ ಇತ್ಯಾದಿ ಕೀಟಗಳಿಂದ ಹರಡುತ್ತದೆ. ಈ ರೋಗವು ಕಾಣಿಸಿಕೊಂಡ ಜಾನುವಾರುಗಳು ರೋಗದಿಂದ ಸಾಕಷ್ಟು ಬಳಲುವುದರಿಂದ ಉತ್ಪಾದನೆ ಕಡಿಮೆಯಾಗುವುದಲ್ಲದೆ. ಕೆಲವೊಮ್ಮೆ ಮರಣ ಹೊಂದುತ್ತವೆ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 1,51,526 ಜಾನುವಾರುಗಳಿಗೆ ಲಸಿಕೆಯನ್ನು ನೀಡಲಾಗಿದ್ದು, ರೋಗ ಪೀಡಿತ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ.

ಜಿಲ್ಲೆಯಲ್ಲಿ ಹಲವೆಡೆ ಜಾನುವಾರು ಸಂತೆ / ಜಾತ್ರೆಗಳು ನಡೆಯಲಿದ್ದು, ಇವುಗಳಿಂದ ಜಾನುವಾರುಗಳ ಸಾಗಾಣಿಕೆ / ಚಲನವಲನದಿಂದ ಹಾಗೂ ಹಲವಾರು ಜಾನುವಾರುಗಳನ್ನು ಒಂದೆಡೆ ಸೇರಿಸುವುದರಿಂದ ರೋಗೋದ್ರೇಕವು ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ 1,62,980 ದನ / ಎಮ್ಮೆಗಳಿದ್ದು , ರೋಗೋದ್ರೇಕವನ್ನು ನಿಯಂತ್ರಿಸದಿದ್ದಲ್ಲಿ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುವ ಸಂಭವವಿರುವುದರಿಂದ ಜಿಲ್ಲೆಯಾದ್ಯಂತ ಜಾನುವಾರು ಜಾತ್ರೆ / ಸಂತೆಗಳನ್ನು ಎರಡು ತಿಂಗಳ ಅವಧಿಗೆ Karnataka Animal Diseases ( Control Act ) , 1961 ರಡಿ ಮತ್ತು ಸಿಆರ್‌ಪಿಸಿ ಕಲಂ 144 ರ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸುವಂತೆ ಆದೇಶಿಸಲು ಉಪನಿರ್ದೇಶಕರು , ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ , ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ಕೋರುತ್ತಾರೆ.

ಈ ಹಿನ್ನಲೆಯಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ ಜಾನುವಾರು ಸಂತೆಗಳಿಂದ ಆಗುವ ಸಾಗಾಣಿಕೆ / ಚಲನವಲನದಿಂದ ಹಾಗೂ ಹಲವಾರು ಜಾನುವಾರುಗಳನ್ನು ಒಂದೆಡೆ ಸೇರಿಸುವುದರಿಂದ ರೋಗೋದ್ರೇಕವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಾತ್ಕಾಲಿಕವಾಗಿ ಎರಡು ತಿಂಗಳ ಅವಧಿಗೆ ಜಾನುವಾರು ಸಂತೆ / ಜಾತ್ರೆಗಳನ್ನು ಸ್ಥಗಿತಗೊಳಿಸುವುದು ಸೂಕ್ತ ಎಂದು ಮನಗಂಡು ಈ ಕೆಳಕಂಡಂತೆ ಆದೇಶಿಸಲಾಗಿದೆ.

ಆದೇಶ ಸಂಖ್ಯೆ: ಜಾ.ರೋ.ನಿ / 1320 / 2022-23, ದಿನಾಂಕ: 30.11.2022 ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣದಿಂದ ಲತಾ ಆರ್ , ಭಾ.ಆ.ಸೇ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ , ಬೆಂಗಳೂರು ಗ್ರಾಮಾಂತರ ಜಿಲ್ಲೆ ಆದ ನಾನು ಜಾನುವಾರುಗಳಿಗೆ ಚರ್ಮಗಂಟು ರೋಗ ( Lumpy Skin disease ) ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ The Prevention and control of infectious and Contagious Diseases in Animals Act 2009 Section 12 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಾನುವಾರುಗಳಿಗೆ ಚರ್ಮಗಂಟು ರೋಗ (Lumpy Skin disease ) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ ದಿನಾಂಕ: 30.01.2023 ರ ಸಂಜೆ 6.00 ಗಂಟೆಯವರೆಗೆ ಜಿಲ್ಲೆಯಾದ್ಯಂತ ಜಾನುವಾರುಗಳ ಜಾತ್ರೆ / ಸಂತೆ / ಸಾಗಾಣಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಆದೇಶಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]