ಸಿದ್ದರಾಮಯ್ಯ ಖಾನ್ ಆಗದೇ ಕೇಶವ ಆಗಲು ಸಾಧ್ಯವೇ?: ಬಿಜೆಪಿ ಟ್ವಿಟ್

ಬೆಂಗಳೂರು, (ಡಿ.05): ಕಾಂಗ್ರೆಸ್‌ನ ಸಿದ್ರಾಮುಲ್ಲಾ ಖಾನ್‌ (ಸಿದ್ದರಾಮಯ್ಯ) ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತವೆ’ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ, ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದ್ದು, ಪರ ಮತ್ತು ವಿರುದ್ಧದ ಮಾತುಗಳು ತೀವ್ರವಾಗಿದೆ.

ಇದರ ನಡುವೆ ಉರಿಯುವ ಬೆಂಕಿ ತುಪ್ಪ ಸುರಿಯುವಂತೆ ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ ಸಿದ್ದರಾಮಯ್ಯ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಎಂದು ಬಿಜೆಪಿ ಟ್ವಿಟ್ ಮಾಡಿದೆ.

ಕನ್ನಡಿಗರು ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್‌ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು?

ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯ ಅವರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು ಮತ್ತು ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ.

ಕ್ಷಣವೂ ವಿವೇಚಿಸದೆ ತಲಾಖ್‌ ಎಂದು ಮಹಿಳೆಯರ ಬದುಕು ಬರ್ಬಾದ್‌ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ. ಸಮಾಜವನ್ನು ಸಂಪೂರ್ಣವಾಗಿ ನೋಡದೆ, ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೆ ಮತ್ತೇನೆಂದು ಕರೆದಾರು?

ದೇಶದಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ.

ಟಿಪ್ಪು ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’‌ ಎಕ್ಸ್‌ಪ್ರೆಸ್‌ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ ಸಿದ್ದರಾಮಯ್ಯ ಅವರೇ. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ?

ನಮ್ಮ ದೇಶದ ಹೆಮ್ಮೆಯ ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್‌ ಭಯೋತ್ಪಾದನೆ ಎಂಬುದನ್ನು ಒಪ್ಪದ ಸಿದ್ದರಾಮಯ್ಯ, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್‌ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸೀಕತೆಯಲ್ಲಿರುವ ಕಾರಣಕ್ಕೆ ಜನರೇ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎಂದು ಬ್ರಾಂಡ್ ಮಾಡಿರುವುದು.

26/11 ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್‌ ಉನ್ನಿಕೃಷ್ಣನ್‌‌ರವರ ವೀರಗಾಥೆಯುಳ್ಳ “ಕರಾಳ ರಾತ್ರಿ” ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ ಸಿದ್ದರಾಮಯ್ಯ, ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ?

ಹಿಜಾಬ್‌‌ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ ಸಿದ್ದರಾಮಯ್ಯ.

ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]