ದೊಡ್ಡಬಳ್ಳಾಪುರ, (ಡಿ.06): ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ವತಿಯಿಂದ ಡಿ.24, 25 ಮತ್ತು26ರಂದು ವೀರಶೈವ ಲಿಂಗಾಯಿತ 23 ನೇ ಮಹಾ ಅಧಿವೇಶನ ಸಮಾರಂಭ ದಾವಣಗೆರೆಯ ಎಂ.ಬಿ.ಎ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಅಧಿವೇಶನಕ್ಕೆ ದೊಡ್ಡಬಳ್ಳಾಪುರದಿಂದ ತೆರಳುವವರಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಅಧಿವೇಶನದಲ್ಲಿ ಭಾಗವಹಿಸುವವರು ಡಿ.10ರೊಳಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ತಿಳಿಸಿದ್ದಾರೆ.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶ್ಯಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ಡಿ.24ರಿಂದ ನಡೆಯಲಿರುವ ಅಧಿವೇಶನ ಹಿರಿಯ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು, ಸಾಹಿತಿಗಳು, ಕಲಾವಿದರು ಭಾಗವಹಿಸಲಿದ್ದಾರೆ.
ಮೂರು ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕೈಗಾರಿಕಾ, ಯುವ, ಮಹಿಳಾ ಅಧಿವೇಶನದ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭಗಳು, ವಸ್ತುಪ್ರದರ್ಶನಗಳು ನಡೆಯಲಿವೆ. ತಾಲೂಕಿನಿಂದ ಸುಮಾರು 500 ಜನರು ಭಾಗವಹಿಸುತ್ತಲಿದ್ದು, ಆಸಕ್ತರು, ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ 500 ರೂ ನೀಡಿ ನೋಂದಾವಣೆ ಮಾಡಿಕೊಳ್ಳಬೇಕಿದೆ. ಅವೇಷನಕ್ಕಾಗಿ ರಾಜ್ಯದ ಎಲ್ಲಾ ಶಾಖೆಗಳು ಸಕ್ರಿಯವಾಗಿ ತೊಡಗಿಸಿಕೊಂಡಿವೆ ಎಂದರು.
ಸಭೆಯಲ್ಲಿ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಬಸವರಾಜು, ಕಾರ್ಯದರ್ಶಿ ದಾಕ್ಷಾಯಿಣಿ, ಯುವ ಘಟಕದ ಅಧ್ಯಕ್ಷ ಸುಜಯ್, ನಿರ್ದೇಶಕ ಮಾದೇಶ್ ಹಾಜರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

