ಶಿವಮೊಗ್ಗ, (ಜುಲೈ.29): ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ನ ಹಿರಿಯ ಮುಖಂಡರಾದ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಯೋ ಸಹಜ ಕಾಯಿಲೆಗೆ ತುತ್ತಾಗಿದ್ದಕ್ಕೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಮಾಹಿತಿ ಪ್ರಕಾರ, ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಅವರನ್ನು ಆಸ್ಪತ್ರೆ ದಾಖಲಿಸಿರುವ ಬಗ್ಗೆ ಮಾಹಿತಿ ತಿಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದರಲ್ಲದೇ, ಶೀಘ್ರ ಗುಣಮುಖರಾಗುವಂತೆ ಆಶಿಸಿದ್ದಾರೆ.
ಈ ವೇಳೆ ಮಾಜಿ ಸಚಿವ ಹರತಾಳು ಹಾಲಪ್ಪ ಇನ್ನಿತರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….