ಹರಿತಲೇಖನಿ ದಿನಕ್ಕೊಂದು ಕಥೆ: ನಿಮ್ಮ ಆಲೋಚನಾ ಶಕ್ತಿಯೇ ನಿಮ್ಮ ಸಂಪತ್ತು

ಒಂದು ಶಾಲೆಯಲ್ಲಿ ದಿನದ ಪಾಠಗಳು ನೆಡೆಯುತ್ತಿತ್ತು ಎಂದಿನಂತೆ ಹೊರಗೆ ಜೋರಾಗಿ ಮಳೆ ಬರುತ್ತಿತ್ತು. 4ನೇ ತರಗತಿಯಲ್ಲಿ ಪಾಠದ ಮದ್ಯ ಶಿಕ್ಷಕರೊಬ್ಬರು ತಮಾಷೆಗೆ ಮಕ್ಕಳನ್ನು ಕೇಳಿದರು ನಿಮ್ಮೆಲ್ಲರಿಗೂ ನಾನು 100 – 100 ರೂಪಾಯಿ ಕೊಟ್ಟರೆ ನೀವೆಲ್ಲರೂ ಏನು ಖರೀದಿಸುತ್ತೀರಿ?

ಒಬ್ಬ ವಿದ್ಯಾರ್ಥಿ ಹೇಳಿದ – ನಾನು ವಿಡಿಯೋ ಗೇಮ್‌ ಖರೀದಿಸುತ್ತೇನೆ. ಇನ್ನೊಬ್ಬ ಹೇಳಿದ – ನಾನು ಕ್ರಿಕೆಟ್ ಬಾಲ್ ಖರೀದಿಸುತ್ತೇನೆ. ಮತ್ತೊಬ್ಬ ಹೇಳಿದ – ನಾನು ಒಂದು ಮುದ್ದಾದ ಗೊಂಬೆಯನ್ನು ಖರೀದಿಸುತ್ತೇನೆ. ಬೇರೆಯೊಬ್ಬ ಹೇಳಿದ – ನಾನು  ಚಾಕೊಲೇಟ್ಗಳನ್ನು ಖರೀದಿಸುತ್ತೇನೆ ಎಂದು.

ಆದರೆ ಒಂದು ಮಗು ಆಲೋಚನೆಯಲ್ಲಿ ಮುಳುಗಿತ್ತು. ಅದನ್ನು ಗಮನಿಸಿದ ಶಿಕ್ಷಕರು ಆ ಹುಡುಗನನ್ನು ಕೇಳಿದರು ನೀನು ಏನು ಯೋಚಿಸುತ್ತಿದ್ದಿಯ ಮರಿ, ನೀನು ಏನು ಖರೀದಿಸುತ್ತೀಯಾ?

ಆ ಮಗು ಹೇಳಿತು – ಕನ್ನಡಕ ಖರೀದಿಸುವೇ..! ಶಿಕ್ಷಕ ಕನ್ನಡಕನ ಯಾಕೆ ನಿನಗೆ ಅದು..?

ಆ ಹುಡುಗ ಹೇಳಿದ ಸಾರ್, ನನ್ನ ತಾಯಿಗೆ ಸ್ವಲ್ಪ ದೃಷ್ಟಿ ಮಂಜು, ಸರಿಯಾಗಿ ಕಣ್ಣು ಕಾಣಿಸುವುದಿಲ್ಲ ಆದ್ದರಿಂದ ನಾನು ನನ್ನ ತಾಯಿಗೆ ಕನ್ನಡಕವನ್ನು ಖರೀದಿಸುತ್ತೇನೆ.

ಶಿಕ್ಷಕರು ಕೇಳಿದರು – ನಿನ್ನ ತಂದೆ ನಿನ್ನ ತಾಯಿಗೆ ಕನ್ನಡಕವನ್ನು ತಂದು ಕೊಡಬಹುದು ಅವರತ್ರ ಹೇಳು. ನೀನು ನಿನಗಾಗಿ ಏನನ್ನೂ ಖರೀದಿಸಬೇಕಲ್ಲವೇ ಈ 100 ರೂಪಾಯಿಯಲ್ಲಿ..? ಆದರೆ ಮಗು ನೀಡಿದ ಉತ್ತರದಿಂದ ಶಿಕ್ಷಕರ ಕಣ್ಣು ತುಂಬಿಬಂತು.

ಮಗು ಹೇಳಿತು – ನನ್ನ ತಂದೆ ಈಗ ಈ ಜಗತ್ತಿನಲ್ಲಿಲ್ಲ ನನ್ನ ತಾಯಿಯೇ ನನಗೆ ಎಲ್ಲ. ನನ್ನ ತಾಯಿ ಊರ ಜನರ ಬಟ್ಟೆ ಹೊಲಿದು ಬರುವ ಸಂಪಾದನೆಯಿಂದ ನನಗೆ ಊಟ. ನನಗೆ ಬಟ್ಟೆ ಶಾಲೆಗೆ ಹೋಗಲು ಪುಸ್ತಕ, ಪೆನ್ನು ಕೊಡಿಸುತ್ತಾರೆ. 

ಕೆಲವು ತಿಂಗಳುಗಳಿಂದ ಅವರ ದೃಷ್ಟಿ ಹೀನತೆಯಿಂದ ಬಟ್ಟೆಯನ್ನು ಸರಿಯಾಗಿ ಹೊಲಿಯಲು ಪರದಡುತ್ತ ಇದ್ದಾಳೆ, ಅದಕ್ಕಾಗಿಯೇ ನಾನು ನನ್ನ ತಾಯಿಗೆ ಕನ್ನಡಕವನ್ನು ನೀಡುತ್ತೇನೆ.

ಯಾಕ್ ಅಂದ್ರೆ ನನ್ ಕೊಡಿಸುವ ಕನ್ನಡಕ್ಕದಿಂದ ನನ್ನ ತಾಯಿ ನನ್ನನು ಚೆನ್ನಾಗಿ ಓದಿಸುತ್ತಳೇ ಅನ್ನೋ ನಂಬಿಕೆಯಿಂದ ಮತ್ತು ನನ್ನ ತಾಯಿಯ ಸಹಾಯದಿಂದ ನಾನು ಭವಿಷ್ಯದಲ್ಲಿ ದೊಡ್ಡ ವ್ಯಕ್ತಿ ಆದ್ರೂ ಆಗಬಹುದು.

ಶಿಕ್ಷಕ – ಶಭಾಷ್ ಪುಟ್ಟ ನಿನ್ನ ಆಲೋಚನೆಯೇ ನಿನ್ನ ಸಂಪಾದನೆ.‌ ತಗೋ ಈ 100ರೂ. ನನ್ನ ಕೊಟ್ಟ ಭರವಸೆಯ ಮಾತಿನಂತೆ ಮತ್ತು ನಾನು ಇನ್ನು ಈ 200 ರೂ.ಗಳನ್ನು ಸಾಲವಾಗಿ ನೀಡುತ್ತಿದ್ದೇನೆ.

ನೀನು ದೊಡ್ಡ ವ್ಯಕಿಯಾಗಿ ಹಣ ಗಳಿಸಿದಾಗ ಈ 200ನ್ನು ಹಿಂತಿರುಗಿಸು. ನೀನು ಅಂತಹ ದೊಡ್ಡ ಮನುಷ್ಯನಾಗಬೇಕೆಂದು ನಾನು ಬಯಸುತ್ತೇನೆ ಎನ್ನುತ್ತಾ, ಆ ವಿದ್ಯಾರ್ಥಿಯ ತಲೆಯ ಮೇಲೆ  ಕೈಯನ್ನು ಇಟ್ಟು ಆಶೀರ್ವದಿಸಿಸುತ್ತ 300 ಕೊಟ್ಟರು.

30 ವರ್ಷಗಳ ನಂತರ: ಹೊರಗೆ ಮಳೆ ಬರುತ್ತಿದೆ, ಒಳಗೆ ತರಗತಿ ನಡೆಯುತ್ತಿದೆ. ಅದೇ ಶಿಕ್ಷಕರು ಇನ್ನು ತನ್ನ ನಿವೃತ್ತಿಯ ಕಡೆಯ 3 ತಿಂಗಳು ಎದುರುನೋಡುತ್ತ, ಯೋಚಿಸುತ್ತಾ ಪಾಠ ಮಾಡುತ್ತಿದ್ದರು.

ಏಕಾಏಕಿ ಶಾಲೆಯ ಮುಂದೆ ಜಿಲ್ಲಾಧಿಕಾರಿಗಳ ಕೆಂಪು ಬಣ್ಣದ ದೀಪಾದ ಸೈರನ್ ಬತ್ತಿಯ ವಾಹನ ಬಂದು ನಿಂತಿತ್ತು. 

ಶಾಲಾ ಸಿಬ್ಬಂದಿ ಅಲರ್ಟ್ ಆದರು. ಶಾಲೆಯಲ್ಲಿ ಮೌನ.! ಜಿಲ್ಲಾಧಿಕಾರಿಯೊಬ್ಬರು ಮುದುಕ ಶಿಕ್ಷಕರ ಕಾಲಿಗೆ ಬಿದ್ದು ಹೇಳುತ್ತಾರೆ. ಸಾರ್, ನಾನು ಸಾಲವಾಗಿ ಪಡೆದ 200 ರೂಪಾಯಿಯನ್ನು ಹಿಂದಿರುಗಿಸಲು ಬಂದಿದ್ದೇನೆ..!

ಇಡೀ ಶಾಲೆಯ ಸಿಬ್ಬಂದಿ ಬೆಚ್ಚಿಬಿದ್ದರು. ಆ ವಯಸ್ಸಾದ ಶಿಕ್ಷಕ. ಕಾಲಿಗೆ ಬೀಳಲು ಬಾಗುತ್ತಿರುವ ಆ ಯುವಕನ್ನು ಗುರುತಿಸಿ ಮೇಲೆ ಎತ್ತುತ್ತಾರೆ. ಅಪ್ಪಿಕೊಂಡು ತೋಳುಗಳಲ್ಲಿ ಅಳುತ್ತಾ ಹೇಳುತ್ತಾರೆ ನನ್ನ ಶಿಕ್ಷಕ ವೃತ್ತಿ ಸಾರ್ಥಕವಾಯಿತು.

ಕಾಲ ಬದಲಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಚಕ್ರವರ್ತಿಯ ಮಗ ಫಕೀರನಾಗುತ್ತಾನೆ, ಮತ್ತು ಫಕೀರನ ಮಗ ಚಕ್ರವರ್ತಿಯಾಗುತ್ತಾನೆ. ಒಳ್ಳೆಯ ಗುರು ಒಳ್ಳೆಯ ಗುರಿ ಇರಬೇಕು ಅಷ್ಟೇ.

ಕೃಪೆ: ಸಾಮಾಜಿಕ ಜಾಲತಾಣ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!