ದೊಡ್ಡಬಳ್ಳಾಪುರ, (ಆಗಸ್ಟ್.02): ರಾಜ್ಯದಲ್ಲಿನ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಪಡೆದು ಸ್ಥಾಪನೆಯಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರು ಹಾಗೂ ಕನ್ನಡಿಗರಿಗೆ ಶೇ 80ರಷ್ಟು ಉದ್ಯೋಗ ನೀಡುವಂತೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಗುರುವಾರ ತಾಲ್ಲೂಕಿಗೆ ಸಮೀಪದ ಫಾಕ್ಸ್ಕಾನ್ ಐಪೋನ್ ತಯಾರಿಕಾ ಕಂಪನಿಯ ಸ್ಥಳೀಯ ಮುಖ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಬಗ್ಗೆ ಮಾಹಿತಿ ನೀಡಿದ ವೇದಿಕೆಯ ಮುಖಂಡರಾದ ಎ.ನಂಜಪ್ಪ, ಕೈಗಾರಿಕೆಗಳಲ್ಲಿ ಕನ್ನಡಿಗರು ಎರಡನೇ ದರ್ಜೆ ನೌಕರಿಯನ್ನು ಪಡೆಯುವಂತಾಗಿರುವುದು ಖಂಡನೇಯ. ಈ ತಾರತಮ್ಯವನ್ನು ಸರಿಪಡಿಸುವ ಸಲುವಾಗಿ ಸರ್ಕಾರ ಕರ್ನಾಟಕದಲ್ಲಿ ಸ್ಥಾಪಿತವಾಗುವ ಖಾಸಗಿ ಕಾರ್ಖಾನೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಮೀಸಲು ಪ್ರಸ್ತಾವನೆಯನ್ನು ಮುನ್ನೆಲೆಗೆ ತಂದಿದ್ದು ಕಟ್ಟುನಿಟ್ಟಾಗಿ ಜಾರಿಯಾಗಬೇಕು ಎಂದು ಆಗ್ರಹಿಸಿದರು.
ತಾಲ್ಲೂಕಿನಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಯಾಗುತ್ತಿರುವು ಹಿನ್ನೆಲೆಯಲ್ಲಿ ಖಾಸಗಿ ಕೈಗಾರಿಕೆಗಳು ಸ್ಥಾಪಿತವಾಗುತ್ತಿವೆ. ಆದರೆ ಡಾ.ಸರೋಜಿನಿ ಮಹಿಷಿ ವರದಿ ಹಾಗೂ ರಾಜ್ಯ ಸರ್ಕಾರದ ಇತ್ತೀಚಿನ ದಿನಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಿಕೆಯಂತೆ ಕೈಗಾರಿಕೆಗಳು ಸ್ಥಾಪಿತವಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ವೇದಿಕೆಯ ಮುಖಂಡರಾದ ನಯಾಜ್ ಖಾನ್, ಫಣೀಶ್, ಅಜಯ್, ದರ್ಶನ್, ಪೀರ್ಪಾಷ್, ಚರಣ್ರಾಜ್, ನವೀನ್, ಸೋಮರಾಜು ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….