ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಸಿಎಂ‌ ಸಿದ್ದರಾಮಯ್ಯ ಶಾಕ್: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಕ್ಲಾಸ್

ಮೈಸೂರು, (ಆಗಸ್ಟ್.3): ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿಗಳು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. 

ಮುಖ್ಯಮಂತ್ರಿಗಳ ಕಾರು ಬಿಳಿಕೆರೆ ಕ್ರಾಸ್ ಸಮೀಪಿಸುತ್ತಿದ್ದಂತೆ ಬಿಳಿಕೆರೆ ಕ್ರಾಸ್ ನಿಂದ ಯಡಗೊಂಡನಹಳ್ಳಿ ವರೆಗಿನ 41ಕಿಮೀ ಉದ್ದದ ನಾಲ್ಕು ಪಥ ರಾಷ್ಟ್ರೀಯ ಹೆದ್ದಾರಿ ಉದ್ದೇಶಿತ ಯೋಜನೆ ಬಗ್ಗೆ ಮಾಹಿತಿ ಪಡೆದರು.

600 ಕೋಟಿ ರೂಪಾಯಿ ವೆಚ್ಚದ ಈ ಯೋಜನೆ ಟೆಂಡರ್ ಕರೆಯಲಾಗಿದೆ ಎನ್ನುವ ಮಾಹಿತಿ ಅಧಿಕಾರಿಗಳಿಂದ ಬಂತು. 

ಮಾರ್ಗದಲ್ಲಿ ಅಲ್ಲಲ್ಲಿ ಕಾಣಿಸಿದ ರಸ್ತೆ ಗುಂಡಿಗಳಿಗೆ ಗರಂ ಆದ ಮುಖ್ಯಮಂತ್ರಿಗಳು, ಇದರಿಂದ ಅಪಘಾತಗಳ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮಳೆ ಇಲ್ಲದ ಸಮಯ ನೋಡಿಕೊಂಡು ಗುಂಡಿಗಳನ್ನು ಮುಚ್ಚಿಸುವಂತೆ ಸೂಚನೆ ನೀಡಿದರು.

ಅಪಾಯದ ಅಂಚಿನಲ್ಲಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸಲು ಸೂಚನೆ: ಹೊಳೆ ನರಸೀಪುರ ತಾಲ್ಲೂಕಿನ ದೊಡ್ಡಕಾಡನೂರು ಮಾರ್ಗವಾಗಿ ಸಾಗಿತ್ತಿದ್ದಂತೆ ಅಪಾಯದ ಸೂಚನೆ ನೀಡುತ್ತಿದ್ದ ವಿದ್ಯುತ್ ಕಂಬಗಳನ್ನು ಬದಲಾಯಿಸಿ, ವೈರ್ ಗಳನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಧೂರವಾಣಿ ಮೂಲಕವೇ ಸೂಚಿಸಿದರು.

ಹಳ್ಳಿ ಮೈಸೂರು ಹಾದು ಹೋಗುವಾಗ ಹಾಳಾಗಿದ್ದ ರಸ್ತೆ ವಿಭಜಕಗಳನ್ನು ಗುರುತಿಸಿ ಸರಿ ಪಡಿಸಲು ಸೂಚನೆ ನೀಡಿದರು. 

ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ  ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು. 

ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಗೆ ವಿವರಿಸುತ್ತಾ, “ಒಟ್ಟು 45 km ನಲ್ಲಿ 35 km ಹೈವೇ ಕಾಮಗಾರಿ ಮುಗಿದಿದೆ. 10 km ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ” ಎಂದು ವಿವರಿಸಿದರು. 

ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ SDRF ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು. 

ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ‌ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು…

ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಗೊಳಿಸಿಕೊಳ್ಳುವುದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ? 

ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ? 

ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು. 

ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಶಾಸಕ ಶಿವಲಿಂಗೇಗೌಡರು, ಸಂಸದ ಶ್ರೇಯಸ್ ಪಟೇಲ್ , ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯಬಾರಾಯಣ್ ಸೇರಿ ಹಿರಿಯ ಅಧಿಕಾರಿಗಳ ತಂಡವೇ ಸ್ಥಳದಲ್ಲಿತ್ತು.

ನಾನು ಹುಟ್ಟು ಹಬ್ಬ ಮಾಡಲ್ಲ: ಇವೆಲ್ಲಾ ಯಾಕೆ ತಂದ್ರಿ?: ಮಾರ್ಗದುದ್ದಕ್ಕೂ ಅಭಿಮಾನಿಗಳು ಹುಟ್ಟುಹಬ್ಬದ ಶುಭ ಕೋರಲು ಹಾರ ತುರಾಯಿ, ಶಾಲುಗಳ ಸಮೇತ ಅಲ್ಲಲ್ಲಿ ಕಾದಿದ್ದರು. ಯಾವುದನ್ನೂ ಸ್ವೀಕರಿಸದ ಸಿಎಂ, ನಾನು ಹುಟ್ಟು ಹಬ್ಬ ಆಚರಿಸಲ್ಲ ಎಂದು ಕೈ ಬೀಸಿ, ಕೈ ಮುಗಿದು ಮುಂದೆ ಸಾಗಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]